ಕರ್ನಾಟಕ ವಿಧಾನಸಭೆ ಚುನಾವಣೆ 2023: ಮಧ್ಯಾಹ್ನದ ಹೊತ್ತಿಗೆ ಪೂರ್ಣ ಫಲಿತಾಂಶ !

Karnataka Assembly Election Results 2023:  ನಾಳೆ, ಮೇ.13 ರ ಬೆಳಿಗ್ಗೆ 8 ಗಂಟೆಗೆ ಪ್ರಾರಂಭ ಮಾಡಲಾಗುತ್ತದೆ. ಮತ್ತು ಹು-ಧಾ ಸೆಂಟ್ರಲ್ ಹಾಗೂ ಹು-ಧಾ ಪಶ್ಚಿಮ ಮತಕ್ಷೇತ್ರಗಳ ಮತ ಎಣಿಕೆ 19 ರೌಂಡ್ಸ್ ಹಾಗೂ ಜಿಲ್ಲೆಯ ಉಳಿದ ಮತಕ್ಷೇತ್ರಗಳ ಮತ ಎಣಿಕೆ 17 ರೌಂಡ್ಸ್ ಗಳಲ್ಲಿ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿದೆ

Last Updated : May 12, 2023, 06:25 PM IST
  • ಮತ ಎಣಿಕೆ ಆರಂಭದಲ್ಲಿ ಅಂಚೆಮತಪತ್ರಗಳ ಎಣಿಕೆ ಆರಂಭವಾಗುತ್ತದೆ.
  • ಮತ್ತು ಸ್ವಲ್ಪ ಸಮಯದ ನಂತರ ಎಲೆಕ್ಟ್ರಾನಿಕ್ ಮತಯಂತ್ರಗಳಲ್ಲಿ ದಾಖಲಾಗಿರುವ ಮತಗಳ ಎಣಿಕಾ ಕಾರ್ಯ ಆರಂಭಿಸಲಾಗುತ್ತದೆ
  • ಮತದಾನ ಕೇಂದ್ರದ ಸುತ್ತ ಮೂರು ಹಂತದ ಭದ್ರತಾ ವ್ಯವಸ್ಥೆ ಮಾಡಲಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ 2023: ಮಧ್ಯಾಹ್ನದ ಹೊತ್ತಿಗೆ ಪೂರ್ಣ ಫಲಿತಾಂಶ ! title=

Karnataka Assembly Election Results 2023 ಧಾರವಾಡ :ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಭಂದಿಸಿದಂತೆ ಜಿಲ್ಲೆಯ 7 ವಿಧಾನಸಭಾ ಮತಕ್ಷೇತ್ರಗಳ ಮತ ಎಣಿಕೆಯನ್ನು ಕೃಷಿ ವಿಶ್ವವಿದ್ಯಾಲಯದ ಮುಖ್ಯ ಕಟ್ಟಡದಲ್ಲಿ ಸ್ಥಾಪಿಸಿರುವ ಮತ ಎಣಿಕಾ ಕೇಂದ್ರದಲ್ಲಿ ನಾಳೆ, ಮೇ.13 ರ ಬೆಳಿಗ್ಗೆ 8 ಗಂಟೆಗೆ ಪ್ರಾರಂಭ ಮಾಡಲಾಗುತ್ತದೆ. ಮತ್ತು ಹು-ಧಾ ಸೆಂಟ್ರಲ್ ಹಾಗೂ ಹು-ಧಾ ಪಶ್ಚಿಮ ಮತಕ್ಷೇತ್ರಗಳ ಮತ ಎಣಿಕೆ 19 ರೌಂಡ್ಸ್ ಹಾಗೂ ಜಿಲ್ಲೆಯ ಉಳಿದ ಮತಕ್ಷೇತ್ರಗಳ ಮತ ಎಣಿಕೆ 17 ರೌಂಡ್ಸ್ ಗಳಲ್ಲಿ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರತಿ ವಿಧಾನಸಭಾ ಮತಕ್ಷೇತ್ರದ ಮತ ಎಣಿಕೆಗೆ ಪ್ರತ್ಯೇಕ ಕೊಠಡಿ ಮಾಡಲಾಗಿದೆ. ಅಂಚೆ ಮತಪತ್ರ ಎಣಿಕೆಗೆ ಮತ್ತು ವಿದ್ಯುನ್ಮಾನ ಮತಯಂತ್ರಗಳಲ್ಲಿನ ಮತ ಎಣಿಕೆಗಾಗಿ 13 ಸೇರಿ ಒಟ್ಟು 14 ಟೇಬಲ್‍ಗಳ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನವಲಗುಂದ ವಿಧಾನಸಭಾ ಮತಕ್ಷೇತ್ರದ ಮತ ಎಣಿಕೆಯು 17 ಸುತ್ತು, ಕುಂದಗೋಳ ವಿಧಾನಸಭಾ ಮತಕ್ಷೇತ್ರದ ಮತ ಎಣಿಕೆಯು 17 ಸುತ್ತು, ಧಾರವಾಡ ವಿಧಾನಸಭಾ ಮತಕ್ಷೇತ್ರದ ಮತ ಎಣಿಕೆಯು 17 ಸುತ್ತು, ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಮತಕ್ಷೇತ್ರದ ಮತ ಎಣಿಕೆಯು 17 ಸುತ್ತು, ಕಲಘಟಗಿ ವಿಧಾನಸಭಾ ಮತಕ್ಷೇತ್ರದ ಮತ ಎಣಿಕೆ 17 ಸುತ್ತುಗಳಲ್ಲಿ ನಡೆಯಲಿದೆ. ಮತ್ತು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಹಾಗೂ ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರಗಳ ಮತ ಎಣಿಕೆ ಕಾರ್ಯವು 19 ಸುತ್ತುಗಳಲ್ಲಿ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: CBSC 12th Result Topper: ಸಿಬಿಎಸ್ಇ ಫಲಿತಾಂಶ ಪ್ರಕಟ, ಈ ಬಾರಿಯ ಟಾಪರ್ ಯಾರು?

ಮತ ಎಣಿಕೆ ಆರಂಭದಲ್ಲಿ ಅಂಚೆಮತಪತ್ರಗಳ ಎಣಿಕೆ ಆರಂಭವಾಗುತ್ತದೆ. ಮತ್ತು ಸ್ವಲ್ಪ ಸಮಯದ ನಂತರ ಎಲೆಕ್ಟ್ರಾನಿಕ್ ಮತಯಂತ್ರಗಳಲ್ಲಿ ದಾಖಲಾಗಿರುವ ಮತಗಳ ಎಣಿಕಾ ಕಾರ್ಯ ಆರಂಭಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.ಮತದಾನ ಕೇಂದ್ರದ ಸುತ್ತ ಮೂರು ಹಂತದ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ನಾಳೆ ಮಧ್ಯಾಹ್ನದ ಹೊತ್ತಿಗೆ ಚುನಾವಣಾ ಫಲಿತಾಂಶ ಬರುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News