Karnataka CM decision: 135 ಶಾಸಕರು ನಮ್ಮವರೇ, ವರಿಷ್ಠರ ನಿರ್ಧಾರಕ್ಕೆ ಬಿಟ್ಟಿದ್ದೇನೆ- ಡಿಕೆಶಿ

Karnataka CM decision Live Updates: ‘ನಾನು ಯಾರ ಕ್ಲೇಮ್ ಬಗ್ಗೆಯೂ ಮಾತಾಡಲ್ಲ, ನಾನು ಸಿಂಗಲ್ ಮ್ಯಾನ್, ನಾನು ಧೈರ್ಯದಲ್ಲಿ ಮತ್ತು ವಿಶ್ವಾಸದಲ್ಲಿ ನಂಬಿಕೆಯಿಟ್ಟವನು. ಹಿಂದಿನ 5 ವರ್ಷಗಳಲ್ಲಿ ಏನಾಗಿದೆ ಎಂದು ಬಾಯಿ ಬಿಡಲ್ಲ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಹೇಳುತ್ತೇನೆ, ನಾನು ಸಿಂಗಲ್ ಮ್ಯಾನ್ ಎಂದು ಡಿಕೆಶಿ  ಹೇಳಿದ್ದಾರೆ.

Written by - Puttaraj K Alur | Last Updated : May 15, 2023, 05:26 PM IST
  • ನಾನು ಮಲ್ಲಿಕಾರ್ಜುನ್ ಖರ್ಗೆಯವರಿಗೆ ಮಾತು ಕೊಟ್ಟಂತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ
  • ಮಲ್ಲಿಕಾರ್ಜುನ್ ಖರ್ಗೆ, ಸೋನಿಯಾ ಮತ್ತು ರಾಹುಲ್ ಗಾಂಧಿಯವರಿಗೆ ಈ ವಿಚಾರವನ್ನು ಬಿಡುತ್ತೇನೆ
  • 135 ಶಾಸಕರು ನಮ್ಮವರೇ, ನನ್ನನ್ನು ಸೇರಿದಂತೆ ಎಲ್ಲರನ್ನೂ ವರಿಷ್ಠರ ಪಾದಕ್ಕೆ ಹಾಕಿದ್ದೇವೆಂದ ಡಿಕೆಶಿ
Karnataka CM decision: 135 ಶಾಸಕರು ನಮ್ಮವರೇ, ವರಿಷ್ಠರ ನಿರ್ಧಾರಕ್ಕೆ ಬಿಟ್ಟಿದ್ದೇನೆ- ಡಿಕೆಶಿ title=
ನಾನು ಸಿಂಗಲ್ ಮ್ಯಾನ್ ಎಂದ ಡಿಕೆಶಿ!

ಬೆಂಗಳೂರು: ಕಾಂಗ್ರೆಸ್‍ನಲ್ಲಿ ಉಂಟಾಗಿರವ ಮುಖ್ಯಮಂತ್ರಿ ಆಯ್ಕೆ ಕಗ್ಗಂಟು ವಿಚಾರವಾಗಿ ಸೋಮವಾರ ಸುದ್ದಿಗೋಷ್ಠಿ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ‘ನಾನು ಧೈರ್ಯದಲ್ಲಿ ಮತ್ತು ವಿಶ್ವಾಸದಲ್ಲಿ ನಂಬಿಕೆಯಿಟ್ಟಿದ್ದೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆಂದು ನಾನು ಎಐಸಿಸಿ ಅಧ‍್ಯಕ್ಷ ಮಲ್ಲಿಕಾರ್ಜುನ್ ಖರ್ಗೆಗೆ ಮಾತು ಕೊಟ್ಟಿದ್ದೆ‌. ಅದರಂತೆ ಪಕ್ಷವನ್ನು ಬಹುಮತದಿಂದ ಗೆಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.

‘ನಾನು ಯಾರ ಕ್ಲೇಮ್ ಬಗ್ಗೆಯೂ ಮಾತಾಡಲ್ಲ, ನಾನು ಸಿಂಗಲ್ ಮ್ಯಾನ್, ನಾನು ಧೈರ್ಯದಲ್ಲಿ ಮತ್ತು ವಿಶ್ವಾಸದಲ್ಲಿ ನಂಬಿಕೆಯಿಟ್ಟವನು. ಹಿಂದಿನ 5 ವರ್ಷಗಳಲ್ಲಿ ಏನಾಗಿದೆ ಎಂದು ಬಾಯಿ ಬಿಡಲ್ಲ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಹೇಳುತ್ತೇನೆ, ನಾನು ಸಿಂಗಲ್ ಮ್ಯಾನ್ ಎಂದು ಡಿಕೆಶಿ ಹೇಳಿದ್ದಾರೆ.

ಇದನ್ನೂ ಓದಿ: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು

ಮಹಾತ್ಮಾ ಗಾಂಧೀಜಿ ಒಂದು ಮಾತು ಹೇಳಿದ್ದರು. ಸೋತಾಗ ಧೈರ್ಯದಿಂದ ಇರಬೇಕು, ಗೆದ್ದಾಗ ಉದಾರ ಮನಸ್ಸಿನಿಂದ ಇರಬೇಕು. 15 ಜನ ಶಾಸಕರು ಪಕ್ಷ ಬಿಟ್ಟು ಹೋದಾದ ಬೇಸರ ಆಗಿಲ್ಲ. ಧೈರ್ಯದಿಂದ ಆ ಸಂದರ್ಭವನ್ನು ಎದುರಿಸಿದ್ದೆ. ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ರಾಜ್ಯ ರಾಜಕಾರಣದ ಬಗ್ಗೆ ಅಧಿಕಾರ ಇದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ವಿಶ್ವಾಸವಿದೆ. ಈ ವಿಚಾರವನ್ನು ಅವರಿಗೆ ಬಿಡುತ್ತೇನೆ’ ಎಂದು ಡಿಕೆಶಿ ಹೇಳಿದ್ದಾರೆ.

135 ಶಾಸಕರು ನಮ್ಮವರೇ

135 ಶಾಸಕರು ನಮ್ಮವರೇ, ನನ್ನನ್ನು ಸೇರಿದಂತೆ ಎಲ್ಲರನ್ನೂ ವರಿಷ್ಠರ ಪಾದಕ್ಕೆ ಹಾಕಿದ್ದೇವೆ. ನೋಡೋಣ ಏನು ತೀರ್ಮಾನ ತೆಗೆದುಕೊಳ್ತಾರೆ ಎಂದು. ಬಹುತೇಕ ಶಾಸಕರು ನನಗೆ ರಹಸ್ಯ ಮತದಾನ ಮಾಡಿದ್ದಾರೆಂಬ ಸಿದ್ದರಾಮಯ್ಯರ ಹೇಳಿಕೆಗೆ ಡಿಕೆಶಿ ತಿರುಗೇಟು ನೀಡಿದರು. ಹಾಗೆ ಹೇಳಿದ್ರೆ ಸಂತೋಷ… ಯಾರು ಏನಾದರೂ ಹೇಳಲಿ. ನನ್ನ ಬಳಿ ಯಾವ ಯಾವ ಶಾಸಕರಿಲ್ಲ. 135 ಶಾಸಕರು ನಮ್ಮವರೇ ಎಂದು ಡಿಕೆಶಿ ಹೇಳಿದ್ದಾರೆ.

ಇದನ್ನೂ ಓದಿ: Karnataka Elections 2023: ಬಿಜೆಪಿ ಸೋಲಿಗೆ ನಳೀನ್, ಸಂತೋಷ್ ಹೊಣೆಗಾರರಲ್ಲ- ವಿಜಯೇಂದ್ರ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News