Karnataka Election Results 2023: ಕಾಂಗ್ರೆಸ್​ಗೆ ಅಭೂತಪೂರ್ವ ಗೆಲುವು, ಕಣ್ಣೀರಿಟ್ಟ ಡಿಕೆಶಿ!

Karnataka Election Results 2023: ಡಿಕೆ ಬ್ರದರ್ಸ್ ವಿರುದ್ಧ ಬಿಜೆಪಿ ರಣತಂತ್ರ ರೂಪಿಸಿ ಕನಕಪುರದಲ್ಲಿ ಗೆದ್ದೇ ಗೆಲ್ಲುತ್ತೇವೆ ಎನ್ನುತ್ತಿದ್ದರು. ಆದರೆ ಕನಕಪುರ ಕಾಂಗ್ರೆಸ್ ಭದ್ರಕೋಟೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಡಿಕೆಶಿ ಹೇಳಿದ್ದಾರೆ.  

Written by - Zee Kannada News Desk | Last Updated : May 13, 2023, 01:52 PM IST
  • ಕಾಂಗ್ರೆಸ್​ ಪಕ್ಷಕ್ಕೆ ಅಭೂತಪೂರ್ವ ಗೆಲುವು ಸಿಕ್ಕ ಹಿನ್ನೆಲೆ ಭಾವುಕರಾಗಿ ಕಣ್ಣೀರಿಟ್ಟ ಡಿಕೆಶಿ
  • ಈ ಅತಿದೊಡ್ಡ ಗೆಲುವಿಗೆ ಕಾರಣರಾದ ಪಕ್ಷದ ಕಾರ್ಯಕರ್ತರಿಗೆ ಮತ್ತು ನಾಯಕರಿಗೆ ಧನ್ಯವಾದಗಳು
  • ಜೈಲಿಗೆ ಹೋದ ದಿನಗಳಲ್ಲಿ ಕಾಂಗ್ರೆಸ್ ನಾಯಕರು ನೀಡಿದ ಬೆಂಬಲ ನೆನೆದ ಡಿ.ಕೆ.ಶಿವಕುಮಾರ್
Karnataka Election Results 2023: ಕಾಂಗ್ರೆಸ್​ಗೆ ಅಭೂತಪೂರ್ವ ಗೆಲುವು, ಕಣ್ಣೀರಿಟ್ಟ ಡಿಕೆಶಿ! title=
ಭಾವುಕರಾಗಿ ಕಣ್ಣೀರಿಟ್ಟ ಡಿಕೆಶಿ!

ಬೆಂಗಳೂರು: ಕಾಂಗ್ರೆಸ್​ ಪಕ್ಷಕ್ಕೆ ಅಭೂತಪೂರ್ವ ಗೆಲುವು ಸಿಕ್ಕ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ‘ಈ ಅತಿದೊಡ್ಡ ಗೆಲುವಿಗೆ ಕಾರಣರಾದ ಪಕ್ಷದ ಕಾರ್ಯಕರ್ತರಿಗೆ ಮತ್ತು ನಾಯಕರಿಗೆ ಧನ್ಯವಾದಗಳು’ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕರ ಬೆಂಬಲ ನೆನೆದ ಡಿಕೆಶಿ

ಜೈಲಿಗೆ ಹೋದ ದಿನಗಳಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರು ನೀಡಿದ ಬೆಂಬಲ ನೆನೆದು ಡಿಕೆಶಿ ಇದೇ ವೇಳೆ ಕಣ್ಣೀರು ಹಾಕಿದ್ದಾರೆ. ಸೋನಿಯಾ ಗಾಂಧಿ ಮತ್ತು ಸಿದ್ದರಾಮಯ್ಯನವರು ನೀಡಿದ ಬೆಂಬಲ ನೆನೆದು ಭಾವುಕರಾದರು. ಕಾಂಗ್ರೆಸ್ ಮೇಲೆ ನಂಬಿಕೆ ಇಟ್ಟು ಮತ ಹಾಕಿದ ಕರ್ನಾಟಕದ ಜನತೆಗೆ ಸಾಷ್ಟಾಂಗ ನಮಸ್ಕಾರಗಳು ಎಂದು ಡಿಕೆಶಿ ಹೇಳಿದರು.

ಇದನ್ನೂ ಓದಿ: Karnataka Election Results 2023: ಟ್ರೆಂಡ್ ಗಳಲ್ಲಿ ಭಾರಿ ಮುನ್ನಡೆಯ ಬಳಿಕ ಫುಲ್ ಜೋಶ್ ನಲ್ಲಿ ಕಾಂಗ್ರೆಸ್, ನಾಳೆ ಶಾಸಕಾಂಗ ಪಕ್ಷದ ಸಭೆ!

ಕನಕಪುರದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಡಿಕೆಶಿ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಡಿಕೆ ಬ್ರದರ್ಸ್ ವಿರುದ್ಧ ಬಿಜೆಪಿ ರಣತಂತ್ರ ರೂಪಿಸಿ ಕನಕಪುರದಲ್ಲಿ ಗೆದ್ದೇ ಗೆಲ್ಲುತ್ತೇವೆ ಎನ್ನುತ್ತಿದ್ದರು. ಆದರೆ ಕನಕಪುರ ಕಾಂಗ್ರೆಸ್ ಭದ್ರಕೋಟೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಡಿಕೆಶಿ ಹೇಳಿದ್ದಾರೆ.  

ಇನ್ನು ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ 91,455 ಮತಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದ್ದಾರೆ. ಡಿಕೆಶಿಗೆ ಸವಾಲು ಹಾಕಿದ್ದ ಬಿಜೆಪಿಯ ಆರ್.ಅಶೋಕ್ ಕೇವಲ 13,723 ಮತಗಳನ್ನು ಪಡೆದು ಹೀನಾಯ ಸೋಲು ಕಂಡಿದ್ದಾರೆ. ಜೆಡಿಎಸ್‍ನ ಬಿ.ನಾಗರಾಜು 15,047 ಬಿಜೆಪಿ ಅಭ್ಯರ್ಥಿಗಿಂತಲೂ ಹೆಚ್ಚಿನ ಮತ ಗಳಿಸಿದ್ದಾರೆ.

ಇದನ್ನೂ ಓದಿ: ಚುನಾವಣೆ ಫಲಿತಾಂಶ: ಜನಾದೇಶ ಸ್ವಾಗತಿಸಿದ ಹೆಚ್.ಡಿ.ಕುಮಾರಸ್ವಾಮಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News