ಸ್ಮಾರ್ಟ್ ಸಿಟಿ ಕಾಮಗಾರಿ ಶೇ.60ರಷ್ಟು ಪೂರ್ಣ: ಸಚಿವ ಸತೀಶ್ ಜಾರಕಿಹೊಳಿ

ಸ್ಮಾರ್ಟ್ ಸಿಟಿ ಯೋಜನೆಯಡಿ 4ನೇ ಹಂತದ ಕಾಮಗಾರಿಗಳು ಮುಗಿದಿವೆ ಎಂದು ಸಚಿವ ಜಾರಕಿಹೊಳಿ ತಿಳಿಸಿದ್ದಾರೆ.

Last Updated : Jun 18, 2019, 07:11 PM IST
ಸ್ಮಾರ್ಟ್ ಸಿಟಿ ಕಾಮಗಾರಿ ಶೇ.60ರಷ್ಟು ಪೂರ್ಣ: ಸಚಿವ ಸತೀಶ್ ಜಾರಕಿಹೊಳಿ title=

ಬೆಳಗಾವಿ: ರಾಜ್ಯ ಸರ್ಕಾರ ಸ್ಮಾರ್ಟ್ ಸಿಟಿ ಯೋಜನೆಯಡಿ ಹಮ್ಮಿಕೊಂಡಿರುವ ಕಾಮಗಾರಿಗಳು ಶೇ.60ರಷ್ಟು ಪೂರ್ಣಗೊಂಡಿವೆ. ಇನ್ನೆರಡು ವರ್ಷಗಳಲ್ಲಿ ಉಳಿದ ಕಾಮಗಾರಿಗಳನ್ನು ಮುಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಸ್ಮಾರ್ಟ್ ಸಿಟಿ ಯೋಜನೆ, ಜಲಮಂಡಳಿ ಅಧಿಕಾರಿಗಳೊಂದಿಗೆ ಮಂಗಳವಾರ ಮಹಾನಗರ ಪಾಲಿಕೆ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಸ್ಮಾರ್ಟ್ ಸಿಟಿ ಯೋಜನೆಯಡಿ 4ನೇ ಹಂತದ ಕಾಮಗಾರಿಗಳು ಮುಗಿದಿದ್ದು, ತಾಂತ್ರಿಕ ಕಾರಣಗಳಿಂದ ಕೆಲವೆಡೆ ಕಾಮಗಾರಿಗಳ ಆರಂಭಕ್ಕೆ ಹಿನ್ನಡೆಯಾಗಿದೆ. ಈ ಬಗ್ಗೆ ಗಮನಹರಿಸಿ ಸಮಸ್ಯೆ ನಿವಾರಣೆಗೆ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಪೂರೈಕೆ ಬಗ್ಗೆ ಮಾತನಾಡಿದ ಜಾರಕಿಹೊಳಿ, ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ. ಹಾಗಾಗಿ ಟ್ಯಾಂಕರ್ ಮೂಲಕ ನಿರು ಪೂರೈಕೆ ಅಗತ್ಯವಿಲ್ಲ. ರಕ್ಕಸಕೊಪ್ಪ ಮತ್ತು ಹಿಡಕಲ್ ಜಲಾಶಯಗಳು ನಗರದ ನೀರಿನ ಅಗತ್ಯತೆಯನ್ನು ಪೂರೈಸುತ್ತಿವೆ.  ಸದ್ಯ ರಕ್ಕಸಕೊಪ್ಪ ಜಲಾಶಯ ಸಂಪೂರ್ಣ ಬತ್ತಿದ್ದು,, ಹಿಡಕಲ್ ಜಲಾಶಯದಲ್ಲಿ ನೀರಿರುವುದರಿಂದ ಅಲ್ಲಿಂದಲೇ ನಗರಕ್ಕೆ ನೀರು ಪೂರೈಕೆ ಮಾಡಲಾಗುತ್ತಿದೆ. ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.

Trending News