ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಕುರಿತು ನಡೆಯಲಿದೆ ಮತ್ತೊಂದು ಸಭೆ

ಇಂದು ನಡೆಯಲಿದೆ ಹಾಲಿ ಶಾಸಕರ ಕೆಲಸದ ಅವಲೋಕನ... ಗೆಲ್ಲುವ ಕುದುರೆಗೆ ಮಣೆ ಹಾಕುವ ಸಾಧ್ಯತೆ.

Last Updated : Mar 28, 2018, 09:24 AM IST
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಕುರಿತು ನಡೆಯಲಿದೆ ಮತ್ತೊಂದು ಸಭೆ title=

ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ತಯಾರಿಸಲು ಇಂದು ಬೆಳಿಗ್ಗೆ 11 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಮತ್ತೊಂದು ಸಭೆ ನಡೆಯಲಿದೆ.

ಸಭೆಯಲ್ಲಿ ಯಾವ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆ? ಹಾಲಿ ಶಾಸಕರು ತಮ್ಮ ಕ್ಷೇತ್ರದಲ್ಲಿ ಯಾವ ರೀತಿ ಕೆಲಸ ಮಾಡಿದ್ದಾರೆ? ಕೆಲಸ ಮಾಡದೆ ಇರುವ ಶಾಸಕರು ಯಾರು? ಆಯಾ ಕ್ಷೇತ್ರಾವಾರು ಜನರೊಂದಿಗೆ ಸಂಪರ್ಕ ಹೊಂದಿರುವ ನಾಯಕರುಗಳು ಯಾರು? 
ಯಾವ ಕ್ಷೇತ್ರಗಳಲ್ಲಿ ಬೇರೆ ಪಕ್ಷಗಳ ಶಾಸಕರ ಪ್ರಭಾವ ಹೆಚ್ಚಿದೆ? ಅದರ ಪ್ಲಸ್ ಮತ್ತು ಮೈನಸ್ ಅಂಶಗಳೇನು? ಎನ್ನುವುದರ ಪೂರ್ಣ ಮಾಹಿತಿಯನ್ನು ಕಲೆಹಾಕಿ ಹೈಕಮಾಂಡ್ ಗೆ ನೀಡಲು ಕೈ ಪಡೆ ಸಿದ್ದತೆ ನಡೆಸಿದೆ.

ಇಂದು ನಡೆಯುವ ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ. ಕೆ.ಶಿವಕುಮಾರ್ ಸೇರಿದಂತೆ ಪ್ರಮುಖರ ಸಮ್ಮುಖದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಪ್ರತ್ಯೇಕ ಮಾತುಕತೆ ನಡೆಸಿ ರಾಜ್ಯ ಕಾಂಗ್ರೆಸ್ ಮುಖಂಡರು ಪಟ್ಟಿ ತಯಾರಿಸಲಿದ್ದಾರೆ. ಗೆಲ್ಲುವ ಕುದುರೆಗೆ ಮಣೆ ಹಾಕುವ ಸಾಧ್ಯತೆ ಹೆಚ್ಚಾಗಿದೆ.

Trending News