ಯುವ ಪರಿವರ್ತಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಖಾಲಿ ಇರುವ ಯುವಪರಿವರ್ತಕರ ಹುದ್ದೆಗೆ ಗೌರವಧನ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

Last Updated : Sep 15, 2020, 03:21 PM IST
ಯುವ ಪರಿವರ್ತಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಖಾಲಿ ಇರುವ ಯುವಪರಿವರ್ತಕರ ಹುದ್ದೆಗೆ ಗೌರವಧನ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಜನ ಆರೋಗ್ಯ ಸಂಸ್ಥೆ, ಎಪಿಡೀಮಿಯಾಲಜಿ ವಿಭಾಗ, ನಿಮಾನ್ಸ್, ಬೆಂಗಳೂರು ಇವರಿಂದ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ ಯುವಜನ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕರ್ನಾಟಕ ಯುವನೀತಿ-2012ರನ್ವಯ ಯುವಜನರನ್ನು ತಲುಪಿ ಯುವಜನರಿಂದಲೇ ನಡೆಸಿ, ಯುವಜನರನ್ನು ಸಬಲೀಕರಣಗೊಳಿಸಿ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಪೂರಕಗೊಳಿಸುವುದು ಈ ಯೋಜನೆಯ ಉದ್ಧೇಶವಾಗಿರುತ್ತದೆ. 

ಅಭ್ಯರ್ಥಿಗಳು ತಮ್ಮ ಸ್ವ ವಿವರಗಳೊಂದಿಗೆ ಯುವಸ್ಪಂದನ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಆರ್.ಎನ್. ಶೆಟ್ಟಿ ಕ್ರೀಡಾಂಗಣ, ಧಾರವಾಡ ಇಲ್ಲಿ ದಿನಾಂಕ 21-09-2020ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು.ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 9448299673/ 6364428497/ 900674224 ಈ ನಂಬರಗಳಿಗೆ ಕಛೇರಿ ಸಮಯ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಸಂಪರ್ಕಿಸಬಹುದು ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Trending News