ಕಾಂಗ್ರೆಸ್ ಗೆ ಅಸತ್ಯವೇ ಅಷ್ಟೈಶ್ವರ್ಯ! ಆತ್ಮವಂಚನೆಯೇ ಅಧಿಕಾರದ ಮೂಲ ಬಂಡವಾಳ-ಜೆಡಿಎಸ್

 JDS on Congress: ತನ್ನನ್ನು ಬಿಜೆಪಿ ಬಿ ಟೀಮ್ ಎಂದು ಪದೇ ಪದೆ ಮೂದಲಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ತೀಕ್ಷ್ಣವಾಗಿ ತಿರುಗೇಟು ನೀಡಿದೆ.  

Written by - Prashobh Devanahalli | Edited by - Savita M B | Last Updated : Sep 22, 2023, 08:39 PM IST
  • ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಾಗ್ದಾಳಿ ನಡೆಸಿರುವ ಜೆಡಿಎಸ್
  • ಕಾಂಗ್ರೆಸ್ ಪಕ್ಷವು ಪ್ರಾದೇಶಿಕ ಪಕ್ಷಗಳ ಬಾಲಂಗೋಚಿ ಎಂದು ಟೀಕಿಸಿದೆ.
  • ʼಬಾಳೆಗೊಂದು ಏಟು, ಬಾಳಿಗೊಂದು ಮಾತುʼ ಎನ್ನುವ ಮಾತಿದೆ.
ಕಾಂಗ್ರೆಸ್ ಗೆ ಅಸತ್ಯವೇ ಅಷ್ಟೈಶ್ವರ್ಯ! ಆತ್ಮವಂಚನೆಯೇ ಅಧಿಕಾರದ ಮೂಲ ಬಂಡವಾಳ-ಜೆಡಿಎಸ್ title=

ಬೆಂಗಳೂರು: ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಾಗ್ದಾಳಿ ನಡೆಸಿರುವ ಜೆಡಿಎಸ್, ಕಾಂಗ್ರೆಸ್ ಪಕ್ಷವು ಪ್ರಾದೇಶಿಕ ಪಕ್ಷಗಳ ಬಾಲಂಗೋಚಿ ಎಂದು ಟೀಕಿಸಿದೆ.

ʼಬಾಳೆಗೊಂದು ಏಟು, ಬಾಳಿಗೊಂದು ಮಾತುʼ ಎನ್ನುವ ಮಾತಿದೆ. ಸುಳ್ಳುಪೊಳ್ಳುಗಳ ಸೌಧದ ಮೇಲೆ ನಿಂತಿರುವ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಅಸತ್ಯವೇ ಅಷ್ಟೈಶ್ವರ್ಯ! ಆತ್ಮವಂಚನೆಯೇ ಅಧಿಕಾರದ ಮೂಲ ಬಂಡವಾಳ!! ಮೂರ್ಖರಿಗೆ ಎಷ್ಟು ಹೇಳಿದರೂ ಅಷ್ಟೇ, ಅರ್ಥವೇ ಆಗುವುದಿಲ್ಲ ಎಂದಿದೆ ಅಲ್ಲದೆ, ಕಾಮಾಲೆ ಕಾಂಗ್ರೆಸ್‌ ಅನ್ನು ಮೂದಲಿಸಿದೆ

ಮಾಜಿ ಸಿಎಂ ಕುಮಾರಸ್ವಾಮಿ ಅವರು ಪಂಚರತ್ನ ಯಾತ್ರೆಯಲ್ಲಿ ಪಕ್ಷ ವಿಸರ್ಜನೆ ಮಾತು ಹೇಳಿದ್ದು ನಿಜ. "ನನಗೆ ಬಹುಮತದ ಸರಕಾರ ಕೊಟ್ಟರೆ 5 ವರ್ಷದಲ್ಲಿ ಪಂಚರತ್ನಗಳನ್ನು ಜಾರಿ ಮಾಡುವೆ. ಮಾತು ತಪ್ಪಿದರೆ ಮತ್ತೆಂದೂ ಮತ ಕೇಳಲು ಬರುವುದಿಲ್ಲ, ಪಕ್ಷವನ್ನೇ ವಿಸರ್ಜಿಸುತ್ತೇನೆ" ಎಂದಿದ್ದರು. ಈ ಹೇಳಿಕೆಯ ವಿಡಿಯೋ, ಸುದ್ದಿಗಳಿವೆ.. ಗಮನಿಸಬಹುದು ಎಂದು ಜೆಡಿಎಸ್ ಟಾಂಗ್ ನೀಡಿದೆ.

ಕಾಂಗ್ರೆಸ್ ಪಕ್ಷಕ್ಕೆ ಈ ಪರಿಯ ಅಜ್ಞಾನವೇ? ಪರಮಾಶ್ಚರ್ಯ!! ವರ್ಷದ ಕೂಳಿನ ಪಂಚರತ್ನಗಳಿಗೂ, ಒಪ್ಪೊತ್ತಿನ ಹರುಷದ ನಕಲಿ ಗ್ಯಾರಂಟಿಗಳಿಗೂ ಹೋಲಿಕೆಯೇ? ಎಲ್ಲರಿಗೂ ಫ್ರೀ ಫ್ರೀ ಎಂದು ಹೇಳಿ ಪಂಗನಾಮ ಹಾಕಿದ್ದು ಗೊತ್ತಿಲ್ಲದ ಸಂಗತಿಯೇ? ಎಲ್ಲಾ ಕಾಲದಲ್ಲಿಯೂ ಟೋಪಿ ಹಾಕಬಹುದು ಎನ್ನುವ ಅಹಂಕಾರವೇ? ಎಂದು ಜೆಡಿಎಸ್ ಕಿಡಿಕಾರಿದೆ.

ಇದನ್ನೂ ಓದಿ-ಎನ್‌ಡಿಎ ಕೂಟಕ್ಕೆ ಜೆಡಿಎಸ್‌ ಸೇರ್ಪಡೆ; ಅಮಿತ್‌ ಶಾ, ಜೆ.ಪಿ.ನಡ್ಡಾ ಅವರ ಜತೆ ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಮಾತುಕತೆ

ಕೆಟ್ಟ ದಾರಿಯಲ್ಲಿ ಅಧಿಕಾರ ಹಿಡಿಯುವುದು ಕಾಂಗ್ರೆಸ್ ಚಾಳಿ. ಶೆಟ್ಟರ್, ಸವದಿಯಂಥ ಬಿಜೆಪಿಗರನ್ನು ಬಲೆಬೀಸಿ ಬಿಗಿದಪ್ಪಿಕೊಂಡ ಹಸ್ತಪಕ್ಷಕ್ಕೆ, ಮೈಯ್ಯೆಲ್ಲಾ ಉರಿ ಹತ್ತಿಕೊಂಡಿದೆ. ಸ್ವಇಚ್ಛೆಯಿಂದಲೇ ಉರಿ ಇಟ್ಟುಕೊಂಡರೆ ಹೊಣೆ ಯಾರು? ಬಹುಶಃ, ಅಂಗೈಲಿ ಕೇಶವೇಕೆ ಬೆಳೆಯುತ್ತಿಲ್ಲವೆಂದು ಕೈಕೈ ಉಜ್ಜಿಕೊಳ್ಳುತ್ತಿದೆಯಾ ಕಾಂಗ್ರೆಸ್? ಎಂದು ಟೀಕಾ ಪ್ರಹಾರ ನಡೆಸಿದೆ.

ಜೆಡಿಎಸ್‌ ಬಿಜೆಪಿ ಬಾಗಿಲಿಗೆ ಪದೇಪದೆ ಹೋಗುತ್ತದೆಂದು ಹಲ್ಲು ಗಿಂಜುವ ಕಾಂಗ್ರೆಸ್ಸಿಗರಿಗೆ; ಅದೇ ಬಿಜೆಪಿ ಜತೆ ಅಧಿಕಾರ ಅನುಭವಿಸಿದ ನಿತೀಶ್‌ ಕುಮಾರ್‌, ಮಮತಾ ಬ್ಯಾನರ್ಜಿ, ಸ್ಟಾಲಿನ್, ಉದ್ಧವಠಾಕ್ರೆ ಮನೆಗಳ ಸುತ್ತ ಗಿರಕಿ ಹೊಡೆಯಲು ಸಂಕೋಚವಿಲ್ಲ! ಗಂಗೆಯಲ್ಲಿ ಮಿಂದರೆ ಕಾಗೆ ಕೋಗಿಲೆ ಆಗುತ್ತದೆಯೇ ಕಾಮಾಲೆ ಕಣ್ಣಿನ ಕಾಂಗ್ರೆಸ್ಸಿಗರೇ? ಎಂದು ಜೆಡಿಎಸ್ ಕೇಳಿದೆ.

ಪ್ರಜಾಪ್ರಭುತ್ವದಲ್ಲಿ ಮೈತ್ರಿ, ಹೊಂದಾಣಿಕೆ ಸಾಮಾನ್ಯ. ಆಯಾ ಸಂದರ್ಭಕ್ಕೆ ತಕ್ಕಂತೆ ಮೈತ್ರಿ ಆಗುತ್ತದೆ. ದೇಶ ವಿದೇಶದಲ್ಲೂ ಇದ್ದದ್ದೇ. ಆದರೆ, ನಮ್ಮ ಪಕ್ಷವನ್ನು ಬಿಜೆಪಿ ಬೀ ಟೀಂ ಎಂದು ಮೂದಲಿಸುವ ಕಾಂಗ್ರೆಸ್ಸಿಗೆ, ಸ್ವತಃ ತಾನೇ ಪ್ರಾದೇಶಿಕ ಪಕ್ಷಗಳ ಬಾಲಂಗೋಚಿ ಎನ್ನುವುದು ಮರೆತಿದೆ. ದುರದೃಷ್ಟಕ್ಕೆ ಇಂಥ ಜಾಣರೋಗಕ್ಕೆ ಮದ್ದಿಲ್ಲ!! ಎಂದು ತರಾಟೆಗೆ ತೆಗೆದುಕೊಂಡಿದೆ.

ಇದನ್ನೂ ಓದಿ-JDS-BJP Alliance: ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಅಧಿಕೃತ ಘೋಷಣೆ ಮಾಡಿದ ಬಿಜೆಪಿ ಹೈಕಮಾಂಡ್..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News