ಕಾಂಗ್ರೆಸ್ ನಲ್ಲಿನ ಬಂಡಾಯದ ಬಗ್ಗೆ ಡಿಕೆ ಶಿವಕುಮಾರ್ ಏನು ಹೇಳುತ್ತಾರೆ?: ಬಸವರಾಜ ಬೊಮ್ಮಾಯಿ

ಕೋಲಾರ ಕಾಂಗ್ರೆಸ್ ನಲ್ಲಿ ಬಹಳ ವರ್ಷಗಳಿಂದ ಗುಂಪುಗಾರಿಕೆ ನಡೀತಾ ಇದೆ. ಡಿಕೆ ಶಿವಕುಮಾರ್ ನಮ್ಮ ಪಕ್ಷದ ಭಿನ್ನಮತದ ಬಗ್ಗೆ ಬಹಳ ಮಾತನಾಡುತ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

Written by - Ranjitha R K | Last Updated : Mar 28, 2024, 04:08 PM IST
  • ಡಿಕೆ ಶಿವಕುಮಾರ್ ಗೆ ಬಸವರಾಜ್ ಬೊಮ್ಮಾಯಿ ಸವಾಲು
  • ಕಾಂಗ್ರೆಸ್ ಭಿನ್ನಮತದ ಬಗ್ಗೆ ಮೊದಲು ಮಾತನಾಡಿ ಎಂದ ಮಾಜಿ ಸಿಎಂ
  • ಸಚಿವ ಎಚ್.ಕೆ.ಪಾಟೀಲ್ ಹತಾಶರಾಗಿದ್ದಾರೆ - ಬಸವರಾಜ ಬೊಮ್ಮಾಯಿ
ಕಾಂಗ್ರೆಸ್ ನಲ್ಲಿನ ಬಂಡಾಯದ ಬಗ್ಗೆ ಡಿಕೆ ಶಿವಕುಮಾರ್ ಏನು ಹೇಳುತ್ತಾರೆ?: ಬಸವರಾಜ ಬೊಮ್ಮಾಯಿ title=

ಹಾವೇರಿ : ಬಿಜೆಪಿಯಲ್ಲಿನ ಬಂಡಾಯದ ಬಗ್ಗೆ ಮಾತನಾಡುವ ಡಿಸಿಎಂ ಡಿ.ಕೆ.ಶಿವಕುಮಾರ್ ಕೋಲಾರ, ಚಿಕ್ಕಬಳ್ಳಾಪುರ ಬಾಗಲಕೋಟೆಯಲ್ಲಿನ ಪಕ್ಷದ ಬಂಡಾಯದ ಬಗ್ಗೆ ಏನು ಹೇಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ.ಕೋಲಾರ ಕಾಂಗ್ರೆಸ್ ನಲ್ಲಿ ಬಹಳ ವರ್ಷಗಳಿಂದ ಗುಂಪುಗಾರಿಕೆ ನಡೀತಾ ಇದೆ. ಡಿಕೆ ಶಿವಕುಮಾರ್ ನಮ್ಮ ಪಕ್ಷದ ಭಿನ್ನಮತದ ಬಗ್ಗೆ ಬಹಳ ಮಾತನಾಡುತ್ತಿದ್ದಾರೆ. ಈಗ  ಡಿಕೆ ಶಿವಕುಮಾರ್ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ನಲ್ಲಿ ಬಾಗಲಕೋಟೆ, ಚಿಕ್ಕಬಳ್ಳಾಪುರ ಕೋಲಾರ ಸೇರಿದಂತೆ ಎಲ್ಲಾ ಕಡೆ ಬಂಡಾಯ ಇದೆ ಎಂದು ಹೇಳಿದ್ದಾರೆ. ಇನ್ನು ಶಾಸಕರಾದ ಶಿವರಾಮ್ ಹೆಬ್ಬಾರ್,ಎಸ್ ಟಿ ಸೋಮಶೇಖರ್ ಬಿಜೆಪಿ ತೊರೆಯುವ ಬಗ್ಗೆ ನನ್ನನ್ನು ಕೇಳಬೇಡಿ ಎಂದು ಹೇಳಿದ್ದಾರೆ. 

ಇದನ್ನೂ ಓದಿ : ಡಿ.ಕೆ.ಸುರೇಶ್ ಪಾರ್ಲಿಮೆಂಟಿನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡ್ತಾರೆ: ಸಿಎಂ ಸಿದ್ದರಾಮಯ್ಯ

ಎಚ್ ಕೆಪಿ ಹತಾಶರಾಗಿದ್ದಾರೆ :
ಬಸವರಾಜ ಬೊಮ್ಮಾಯಿ ದಾವಣಗೆರೆ ಚಾರ್ಲಿ ಎಂಬ ಸಚಿವ ಹೆಚ್ ಕೆ ಪಾಟೀಲ್ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಹೆಚ್ ಕೆ ಪಾಟೀಲ್ ನಮ್ಮ ಹಿರಿಯರು ಚುನಾವಣೆ ಸಂದರ್ಭದಲ್ಲಿ ವೈಯಕ್ತಿಕ ವಿಚಾರದ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಅವರು ಹತಾಶರಾಗಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ. 
ಅವರು ಈ ವಯಸ್ಸಿನಲ್ಲಿ ಮಂತ್ರಿಗಿರಿಯಲ್ಲಿದ್ದಾರೆ. ನಾನು ಸಂಸದ ಆಗಿ ಕೆಲಸ ಮಾಡಲು ಏನು ತೊಂದರೆ ಇದೆ? ಅವರಿಗೆ ಬೇರೆ ಏನೂ ಮಾತನಾಡಲು ಅವಕಾಶ ಇಲ್ಲ. ಸುಸಂಸ್ಕೃತ ಮಂತ್ರಿ ಅಂತ ನಾವು ತಿಳಿದುಕೊಂಡಿದ್ದೇವೆ ಎಂದು ಹೇಳಿದ್ದಾರೆ. 

ಇದನ್ನೂ ಓದಿ : ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡುವುದಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News