ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 3, ಜೆಡಿಎಸ್ 2, ಕಾಂಗ್ರೆಸ್ 1 ಕ್ಷೇತ್ರದಲ್ಲಿ ಗೆಲುವು

    

Last Updated : Jun 13, 2018, 07:54 PM IST
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 3, ಜೆಡಿಎಸ್ 2, ಕಾಂಗ್ರೆಸ್ 1 ಕ್ಷೇತ್ರದಲ್ಲಿ ಗೆಲುವು title=

ಬೆಂಗಳೂರು: ವಿಧಾನ ಪರಿಷತ್ ನ 6 ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗಾಗಿ ನಡೆದ ಚುನಾವಣೆಯಲ್ಲಿ ಬಿಜೆಪಿ 3,ರಲ್ಲಿ ಗೆಲುವು ಸಾಧಿಸಿದರೆ ಜೆಡಿಎಸ್ 2 ಹಾಗೂ ಕಾಂಗ್ರೆಸ್ 1 ಕ್ಷೆತ್ರದಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.

ಪ್ರಮುಖವಾಗಿ ಬಿಜೆಪಿಯು ಬೆಂಗಳೂರು ಪದವೀಧರ ಆಗ್ನೇಯ ಶಿಕ್ಷಕರ, ನೈರುತ್ಯ ಪದವೀಧರ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಜೆಡಿಎಸ್  ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇನ್ನೊಂದೆಡೆ ಕಾಂಗ್ರೆಸ್ ಪಕ್ಷವು ಈಶಾನ್ಯ ಪದವೀಧರ ಕ್ಷೇತ್ರಗಳಲ್ಲಿ ಮಾತ್ರ ಖಾತೆಯನ್ನು ತೆರೆದಿದೆ ಎಂದು ತಿಳಿದುಬಂದಿದೆ.

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‍ನ ಎಸ್.ಎಲ್.ಬೋಜೇಗೌಡ, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‍ನ ಮರಿತಿಬ್ಬೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ವೈ.ಎ.ನಾರಾಯಣಸ್ವಾಮಿ,ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‍ನ ಚಂದ್ರಶೇಖರ್ ಪಾಟೀಲ, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅ.ದೇವೇಗೌಡ,ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಆಯನೂರು ಮಂಜುನಾಥ್ ಅವರು ಗೆಲುವು ಸಾಧಿಸಿದ್ದಾರೆ.

ಇನ್ನು ಜೆಡಿಎಸ್ ಅಭ್ಯರ್ಥಿ ಮರಿತಿಬ್ಬೇಗೌಡ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಎಂವೈ ನಾರಾಯಣಸ್ವಾಮಿ ವಿಧಾನಪರಿಷತ್ ಸದಸ್ಯರಾಗಿ ಮರು ಆಯ್ಕೆಯಾಗಿದ್ದಾರೆ. ಒಟ್ಟು 75 ಸದಸ್ಯರ ಕರ್ನಾಟಕ  ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಪಕ್ಷವು  34, ಬಿಜೆಪಿ 20 ಮತ್ತು ಜೆಡಿಎಸ್ 14 ಸದಸ್ಯರನ್ನುಹೊಂದಿದೆ. 

Trending News