ಬಿಜೆಪಿ ಕಾರ್ಪೊರೇಟರ್ ಪತಿ ಕೊಲೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಬಿಜೆಪಿ ಕಾರ್ಪೋರೇಟರ್ ಪತಿಯನ್ನು ಹಾಡುಹಗಲೇ ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಬುಧವಾರ ನಡೆದಿದೆ. 

Updated: Feb 8, 2018 , 10:08 AM IST
ಬಿಜೆಪಿ ಕಾರ್ಪೊರೇಟರ್ ಪತಿ ಕೊಲೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಬಿಜೆಪಿ ಕಾರ್ಪೋರೇಟರ್ ಪತಿಯನ್ನು ಹಾಡುಹಗಲೇ ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಬುಧವಾರ ನಡೆದಿದೆ. 

ಇಂದು ಮಧ್ಯಾಹ್ನ ಇಲ್ಲಿನ ಕಾಟನ್ ಪೇಟೆಯ ಅಂಜನಪ್ಪ ಗಾರ್ಡನ್ ಬಳಿ ಬಿಬಿಎಂಪಿಯ 138ನೇ ವಾರ್ಡ್ ನ ಬಿಜೆಪಿ ಕಾರ್ಪೋರೇಟರ್‌ ರೇಖಾ ಅವರ ಪತಿ ಕದಿರೇಶನ್‌ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. 

ಬಿಬಿಎಂಪಿ 138ನೇ ವಾರ್ಡ್ ನ ಕಾರ್ಪೊರೇಟರ್ ರೇಖಾ ಅವರ ಪತಿ ಕದಿರೇಶನ್, ಇತ್ತೀಚೆಗೆ ದೇವಸ್ಥಾನದ ಸಮೀಪ ಗಾಂಜಾ ಹೊಡೆಯಬೇಡಿ ಎಂದು ಕೆಲವು ಯುವಕರಿಗೆ ಬುದ್ಧಿವಾದ ಹೇಳಿದ್ದಾರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

ಇತ್ತೀಚೆಗೆ ಕದಿರೇಶನ್ ಅವರು ದೇವಸ್ಥಾನದ ಸಮೀಪ ಗಾಂಜಾ ಹೊಡೆಯಬೇಡಿ ಎಂದು ಕೆಲವು ಯುವಕರಿಗೆ ಬುದ್ಧಿವಾದ ಹೇಳಿದ್ದರು ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. 

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಆರಂಭಿಸಿದ್ದಾರೆ.