ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಶಾಸಕರಿಗೆ 'ಬಿಗ್ ಶಾಕ್' ನೀಡಿದ ಆರ್. ಅಶೋಕ್..!

ಒಂದೆರಡು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಪ್ರಶ್ನೆಯೇ ಇಲ್ಲ. ಏಕೆಂದ್ರೇ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಇನ್ನೂ ಅನುಮತಿ ನೀಡಿಲ್ಲ

Last Updated : Dec 6, 2020, 03:32 PM IST
  • ಒಂದೆರಡು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಪ್ರಶ್ನೆಯೇ ಇಲ್ಲ. ಏಕೆಂದ್ರೇ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಇನ್ನೂ ಅನುಮತಿ ನೀಡಿಲ್ಲ
  • ಶಾಕಿಂಗ್ ನ್ಯೂಸ್ ಹೇಳಿದ ಕಂದಾಯ ಸಚಿವ ಆರ್. ಅಶೋಕ್
  • ಇಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ
ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಶಾಸಕರಿಗೆ 'ಬಿಗ್ ಶಾಕ್' ನೀಡಿದ ಆರ್. ಅಶೋಕ್..! title=

ಬೆಂಗಳೂರು: ಒಂದೆರಡು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಪ್ರಶ್ನೆಯೇ ಇಲ್ಲ. ಏಕೆಂದ್ರೇ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಇನ್ನೂ ಅನುಮತಿ ನೀಡಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಶಾಕಿಂಗ್ ನ್ಯೂಸ್ ಬಾಯ್ಬಿಟ್ಟಿದ್ದಾರೆ.

 ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಆರ್. ಅಶೋಕ್(R.Ashok), ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಯಾವಾಗ ಮಾಡಬೇಕು ಎಂಬುದರ ಬಗ್ಗೆ ಅರುಣ್ ಸಿಂಗ್ ಜೊತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಸಿಎಂ ನಿರಂತರವಾಗಿ ಹೈಕಮಾಂಡ್ ಜೊತೆಗೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯ ಕೃಷಿ ಸಚಿವರಿಂದ 'ರಾಜ್ಯ ರೈತರಿಗೆ 'ಭರ್ಜರಿ ಗುಡ್ ನ್ಯೂಸ್'..!

ಸಂಪುಟ ವಿಸ್ತರಣೆ ಬಗ್ಗೆ ಇವತ್ತು ಚರ್ಚೆಯಾಗಿಲ್ಲ. ನಾಳೆಯೂ ಕೂಡ ಆ ರೀತಿಯ ಬೆಳವಣಿಗೆ ಇಲ್ಲ ಎಂದಿದ್ದಾರೆ. ಇಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿತ್ತು. ಆದರೆ, ಇಂದು ಆ ಬಗ್ಗೆ ಯಾವುದೇ ಚರ್ಚೆಯೂ ನಡೆದಿಲ್ಲ. ಅರುಣ್ ಸಿಂಗ್ ಅವರ ಜೊತೆಗೆ ರಾಜ್ಯದಲ್ಲಿ ಬಿಜೆಪಿ ಬೆಳವಣಿಗೆ ಮತ್ತು ಸರ್ಕಾರದ ಬಗ್ಗೆ ಮಾತ್ರ ಚರ್ಚೆ ನಡೆಸಲಾಗುವುದು. ಸಂಪುಟ ವಿಸ್ತರಣೆ ಬಗ್ಗೆ ಯಾವ ಚರ್ಚೆಗೂ ನಡೆದಿಲ್ಲ ಎನ್ನುವ ಮೂಲಕ ಆರ್. ಅಶೋಕ್ ಸಚಿವಾಕಾಂಕ್ಷಿಗಳಿಗೆ ಶಾಕ್ ನೀಡಿದ್ದಾರೆ.

ಮತ್ತೆ ಡಿ.8 ರಂದು ರಾಜ್ಯ ರೈತರಿಂದ 'ಕರ್ನಾಟಕ ಬಂದ್ ಗೆ ಕರೆ'

Trending News