Video: ನಿಮ್ಮಂಥವರಿಂದ ಪಕ್ಷ ಉದ್ಧಾರ ಆಗಲ್ಲ: ಪ್ರತಾಪ್ ಸಿಂಹಗೆ ಬಿಜೆಪಿ ಮುಖಂಡ ತರಾಟೆ

ನಿಮ್ಮಿಂದ ಪಕ್ಷ ಉದ್ಧಾರ ಆಗಲ್ಲ ಎಂದು ಬಿಜೆಪಿ ಮುಖಂಡರೊಬ್ಬರು ಸಂಸದ ಪ್ರತಾಪ್ ಸಿಂಹ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ.   

Updated: Sep 13, 2018 , 05:58 PM IST
Video: ನಿಮ್ಮಂಥವರಿಂದ ಪಕ್ಷ ಉದ್ಧಾರ ಆಗಲ್ಲ: ಪ್ರತಾಪ್ ಸಿಂಹಗೆ ಬಿಜೆಪಿ ಮುಖಂಡ ತರಾಟೆ

ಕೊಡಗು: ನೀವು ನಮ್ಮ ಜಿಲ್ಲೆಯ ಜನಪ್ರತಿನಿಧಿ, ಎಲ್ಲವನ್ನೂ ಎಲ್ಲರೊಂದಿಗೂ ಚರ್ಚಿಸಿ ತೀರ್ಮಾನ ಕೈಗೊಳ್ಳಿ, ನಿಮ್ಮ ಮನಬಂದಂತೆ ಅಲ್ಲ, ನಿಮ್ಮಿಂದ ಪಕ್ಷ ಉದ್ಧಾರ ಆಗಲ್ಲ ಎಂದು ಬಿಜೆಪಿ ಮುಖಂಡರೊಬ್ಬರು ಸಂಸದ ಪ್ರತಾಪ್ ಸಿಂಹ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ. 

ಕೊಡಗು ಜಿಲ್ಲೆಯ ಹೆಬ್ಬೆಟ್ಟಗೇರಿಗೆ ಕೇಂದ್ರ ಅಧ್ಯಯನ ತಂಡ ಆಗಮಿಸಿದ ವೇಳೆ ಸಂಸದ ಪ್ರತಾಪ್ ಸಿಂಹ ಕೂಡ ಆಗಮಿಸಿದ್ದರು. ಈ ಸಂದರ್ಭದಲ್ಲಿ ಪ್ರತಾಪ್ ಸಿಂಹ ಅವರು ಅಧಿಕಾರಿಗಳಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಎಂ.ಬಿ ದೇವಯ್ಯ ವಾಗ್ದಾಳಿ ನಡೆಸಿದರು.

ಅಷ್ಟೇ ಅಲ್ಲದೆ, ಖಾಸಗಿ ಕಂಪನಿಯೊಂದು ಭೂಪರಿವರ್ತನೆ ಮಾಡಿದೆ ಎಂಬ ತಪ್ಪು ಮಾಹಿತಿ ನೀಡಿದ್ದೀರಾ. ಜನರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡ್ತೀದ್ದೀರಾ.? ಎಂದು ಸಂಸದ ಪ್ರತಾಪ್​ ಸಿಂಹ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪಕ್ಷವನ್ನು ಹಾಳು ಮಾಡ್ತೀರೋದೆ ನೀವುಗಳು.. ನೀವು ಜಾಸ್ತಿ ಮಾತನಾಡಬೇಡಿ.. ನಮ್ಮೊಡನೆ ಮೊದಲು ಚರ್ಚೆ ಮಾಡಿ. ನಿಮ್ಮಂತವರಿಂದ ಪಕ್ಷ ಉದ್ದಾರವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 

By continuing to use the site, you agree to the use of cookies. You can find out more by clicking this link

Close