ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಭಾರಿಸಬೇಕು: ವಿಜಯೇಂದ್ರ

ಅತಿ ಹೆಚ್ಚಿನ ಸಂಸದರನ್ನ ಗೆಲ್ಲಿಸುವ ಮೂಲಕ ಮೋದಿ ಅವರ ಕೈ ಬಲಪಡಿಸಬೇಕು. ಈ ನಿಟ್ಟಿನಲ್ಲಿ ಭಗವಂತ ಎಲ್ಲಾ ಶಕ್ತಿಯನ್ನ ಕೊಡಲಿ ಎಂದು ಪ್ರಾರ್ಥಿಸಿದ್ದೇನೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು. 

Written by - Chetana Devarmani | Last Updated : Nov 14, 2023, 03:35 PM IST
  • ಲೋಕಸಭಾ ಚುನಾವಣೆಯಲ್ಲಿ ಜಯ ಗಳಿಸಬೇಕು
  • ಮೂರನೇ ಬಾರಿ ಮೋದಿ ಪ್ರಧಾನ ಮಂತ್ರಿಯಾಗಬೇಕು
  • ಕೋಲಾರದಲ್ಲಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ
ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಭಾರಿಸಬೇಕು: ವಿಜಯೇಂದ್ರ  title=

ಕೋಲಾರ : ಭಾರತೀಯ ಜನತಾ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಬೇಕು. ಹೆಚ್ಚಿಮ ಸಂಖ್ಯೆಯಲ್ಲಿ ಗೆಲ್ಲಬೇಕು. ಮೂರನೇ ಬಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ ಮೋದಿಯವರು ದೇಶವನ್ನ ಮುನ್ನಡೆಸಬೇಕು. ಅತಿ ಹೆಚ್ಚಿನ ಸಂಸದರನ್ನ ಗೆಲ್ಲಿಸುವ ಮೂಲಕ ಮೋದಿ ಅವರ ಕೈ ಬಲಪಡಿಸಬೇಕು. ಈ ನಿಟ್ಟಿನಲ್ಲಿ ಭಗವಂತ ಎಲ್ಲಾ ಶಕ್ತಿಯನ್ನ ಕೊಡಲಿ ಎಂದು ಪ್ರಾರ್ಥಿಸಿದ್ದೇನೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು. 

ಪಕ್ಷದಲ್ಲಿ  ಹಿರಿಯರಿದ್ದರೂ ಸಹ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇನೆ. ಎಲ್ಲಾ ಹಿರಿಯರು ಆಶೀರ್ವಾದ ಮಾಡಿದ್ದಾರೆ, ಹೀಗಾಗಿ ಅವರೆಲ್ಲರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವೆ. ಜೊತೆಗೆ ಪಕ್ಷವನ್ನ ಬಲಪಡಿಸಿ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡುವೆ ಎಂದರು.

ಇದನ್ನೂ ಓದಿ: ಐಶಾರಾಮಿಯಾದ ನೀವು ಮೇಲೆ 'ಸರಳರಾಮಯ್ಯ! ಒಳಗೆ ಐಶಾರಾಮಯ್ಯ!! ಎಚ್‌ಡಿ‌ಕೆ

ಪಕ್ಷದಲ್ಲಿ ಅಸಮಧಾನ ಇದೆ ಎಂಬ ವಿಚಾರ, ಇದು ನಮ್ಮ ರಾಷ್ಟ್ರೀಯ ನಾಯಕರ ತೀರ್ಮಾನ. ನಮ್ಮದು ರಾಷ್ಟ್ರೀಯ ಪಕ್ಷ, ನನ್ನ ಆಯ್ಕೆ ಮಾಡಿದ್ದಾರೆ ಎಂದರೆ ಅದು ಅಮಿತ್ ಷಾ, ನಡ್ಡಾಜಿ ಅವರ ತೀರ್ಮಾನ. ಇಷ್ಟು ದೊಡ್ಡ ವ್ಯಕ್ತಿಗಳು ತೀರ್ಮಾನ ಮಾಡಿದಾಗ ಯಾರೂ ವಿರೋಧ ಮಾಡುವುದಿಲ್ಲ ಸಂತೋಷದಿಂದ ಒಪ್ಪಿದ್ದಾರೆ ಎಂದರು. 

ಶುಕ್ರವಾರ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಆ ಸಭೆಯಲ್ಲಿ ಎಲ್ಲಾ ಶಾಸಕರುಗಳು ಭಾಗವಹಿಸುತ್ತಾರೆ. ಶಾಸಕಾಂಗ ಪಕ್ಷದ ಸಭೆಗೆ ನಮ್ಮ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಬರಲಿದ್ದಾರೆ ಎಂದು ತಿಳಿಸಿದರು. 

ಇದನ್ನೂ ಓದಿ: ವಿದ್ಯುತ್ ಕಳ್ಳತನ ಒಪ್ಪಿಕೊಂಡ ಕುಮಾರಸ್ವಾಮಿಗೆ ಅಭಿನಂದನೆ : ಡಿಸಿಎಂ ಡಿ.ಕೆ.ಶಿವಕುಮಾರ್ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News