ಮೊದಲ ಆಹ್ವಾನವೇ ದೇವೇಗೌಡರಿಗೆ; ಸುಳ್ಳಾಡುವ JDS ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ ಎಂದ ಬಿಜೆಪಿ

ನಾಡಪ್ರಭು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಆಹ್ವಾನಿಸಿಲ್ಲವೆಂದು ಜೆಡಿಎಸ್ ಅಸಮಾಧಾನ ಹೊರ ಹಾಕಿದ್ದಕ್ಕೆ ಬಿಜೆಪಿ ತಿರುಗೇಟು ನೀಡಿದೆ. ಈ ಬಗ್ಗೆ ಟ್ವೀಟ್‌ ಮೂಲಕ ಸ್ಪಷ್ಟನೆ ನೀಡಿರುವ ಬಿಜೆಪಿ, ‘ಮೊದಲ ಆಹ್ವಾನ ಪತ್ರಿಕೆಯನ್ನೇ ಎಚ್.ಡಿ.ದೇವೇಗೌಡರಿಗೆ ನೀಡಿದ್ದೇವೆ’ ಅಂತಾ ಹೇಳಿದೆ.

Last Updated : Nov 12, 2022, 11:12 AM IST
  • ನಾಡಪ್ರಭು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡುವ ವಿಚಾರ
  • ಮೊದಲ ಆಹ್ವಾನ ಪತ್ರಿಕೆಯನ್ನು ಎಚ್.ಡಿ.ದೇವೇಗೌಡರಿಗೆ ನೀಡಿದ್ದೇವೆಂದು ಜೆಡಿಎಸ್‍ಗೆ ಬಿಜೆಪಿ ತಿರುಗೇಟು
  • ಸುಳ್ಳಾಡುವ ಜೆಡಿಎಸ್ ತನ್ನ ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ
ಮೊದಲ ಆಹ್ವಾನವೇ ದೇವೇಗೌಡರಿಗೆ; ಸುಳ್ಳಾಡುವ JDS ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ ಎಂದ ಬಿಜೆಪಿ title=
ಜೆಡಿಎಸ್‍ಗೆ ಬಿಜೆಪಿ ತಿರುಗೇಟು

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಆಹ್ವಾನಿಸಿಲ್ಲವೆಂದು ಜೆಡಿಎಸ್ ಅಸಮಾಧಾನ ಹೊರ ಹಾಕಿದ್ದಕ್ಕೆ ಬಿಜೆಪಿ ತಿರುಗೇಟು ನೀಡಿದೆ. ಈ ಬಗ್ಗೆ ಟ್ವೀಟ್‌ ಮೂಲಕ ಸ್ಪಷ್ಟನೆ ನೀಡಿರುವ ಬಿಜೆಪಿ, ‘ಮೊದಲ ಆಹ್ವಾನ ಪತ್ರಿಕೆಯನ್ನೇ ಎಚ್.ಡಿ.ದೇವೇಗೌಡರಿಗೆ ನೀಡಿದ್ದೇವೆ’ ಅಂತಾ ಹೇಳಿದೆ.

‘ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ಎಚ್.ಡಿ.ದೇವೇಗೌಡರಿಗೇ ಮೊದಲ ಆಹ್ವಾನ ಪತ್ರ ಹೋಗಿದ್ದು ಮಾತ್ರವಲ್ಲ, ಖುದ್ದು ಸಿಎಂ ಬಸವರಾಜ ಬೊಮ್ಮಾಯಿಯವರೇ ದೂರವಾಣಿ‌ ಕರೆ ಮಾಡಿ ಆಹ್ವಾನಿಸಿದ್ದಾರೆ. ಈ ವಿಷಯದಲ್ಲೂ ಸುಳ್ಳಾಡುವ ಜೆಡಿಎಸ್ ತನ್ನ ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ’ ಅಂತಾ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: “ಸಿದ್ದರಾಮಯ್ಯರದು ರಾಜ್ಯ ನನ್ನಿಂದಲೇ ಬೆಳಗುತ್ತಿದೆ ಎಂದು ಹೇಳಿಕೊಳ್ಳುವ ಚಪಲತೆ”

‘ಇದಷ್ಟೇ ಅಲ್ಲ, ಕನ್ನಡದ ಅಸ್ಮಿತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೇ ಈ ಮಣ್ಣಿಗೆ ಸೇವೆ‌ ಸಲ್ಲಿಸಿದ ಸಾಧಕರಾದಿಯಾಗಿ ನಮ್ಮ ರಾಜ್ಯದ ಕಟ್ಟ ಕಡೆಯಲ್ಲಿರುವವರನ್ನೂ ಮರೆಯದೇ, ಹಿಂಬಾಲಿಸಿ ಗುರುತಿಸಿದ್ದು ಬಿಜೆಪಿ. ಕುಟುಂಬವನ್ನೇ ಪಕ್ಷವನ್ನಾಗಿಸಿಕೊಂಡ ಜೆಡಿಎಸ್‌ಗೆ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂಬುದು ಯಾವತ್ತಿಗೂ ಬಿಡಿಸಲಾಗದ ಒಗಟು’ ಅಂತಾ ಬಿಜೆಪಿ ಕುಟುಕಿದೆ.

ದೇವೇಗೌಡರಿಗೆ ನೀಡಿದ ಆಹ್ವಾನ ಪತ್ರಿಕೆಯಲ್ಲಿ ಏನಿದೆ?

‘ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಶುಕ್ರವಾರ(ನ.11) ಪ್ರಧಾನಿ ಮೋದಿಯವರು ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಇದು ಆಧುನಿಕ ಕರ್ನಾಟಕದ ಇತಿಹಾಸದಲ್ಲಿ ಒಂದು ಸುವರ್ಣ ಘಳಿಗೆ, ಕೆಂಪೇಗೌಡರು 500 ವರ್ಷಗಳ ಹಿಂದೆ ನಿರ್ಮಿಸಿದ ಬೆಂಗಳೂರು ನಗರ ಈಗ ಎಲ್ಲಾ ಕ್ಷೇತ್ರಗಳ ಸೃಜನಶೀಲ ಮನಸ್ಸುಗಳಿಗೆ, ಸಾಧಕರಿಗೆ ಮತ್ತು ಕನಸುಗಾರರಿಗೆ ಅವಕಾಶ ಕಲ್ಪಿಸುವ ಒಂದು ಅನನ್ಯ ತಾಣವಾಗಿದೆ.

ಇದನ್ನೂ ಓದಿ: ಆದಿಚುಂಚನಗಿರಿ ಶ್ರೀಗಳ ಹೆಗಲ ಮೇಲೆ ಸಚಿವ ಅಶೋಕ್ ‘ಕೈ’: ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

‘ಇಂತಹ ದೂರದೃಷ್ಟಿಯ ಮಹಿಮಾನ್ವಿತರಿಗೆ ಸೂಕ್ತ ಮತ್ತು ಭವ್ಯ ಸ್ಮಾರಕ ಎನ್ನುವುದು ಇದುವರೆಗೆ ಇರಲಿಲ್ಲ. ಇದು ನಮ್ಮ ಸರ್ಕಾರದ ಅವಧಿಯಲ್ಲಿ ನಿಮ್ಮೆಲ್ಲರ ಸಹಕಾರದಿಂದ ಸಾಧ್ಯವಾಗಿದೆ. ನಮ್ಮೆಲ್ಲರ ಕನಸು ಕೈಗೂಡಿದಂತೆ ಎದ್ದು ನಿಂತಿರುವ ಪ್ರಗತಿಯ ಅನಾವರಣದ ಸುಮುಹೂರ್ತದಲ್ಲಿ ತಾವು ಭಾವಗಹಿಸಬೇಕು ಎಂದು ಈ ಪತ್ರದ ಮೂಲಕ ವಿನಂತಿಸುತ್ತಿರುವೆ. ತಮ್ಮ ಉಪಸ್ಥಿತಿಯು ಸಮಾರಂಭದ ಶೋಭೆ ಹೆಚ್ಚಿಸಲಿದ್ದು, ತಮ್ಮ ಆಗಮನದ ನಿರೀಕ್ಷೆಯಲ್ಲಿರುತ್ತೇನೆ. ಬನ್ನಿ ನಾಡ ಕಟ್ಟೋಣ’ ಎಂದು ಸಿಎಂ ಬೊಮ್ಮಾಯಿಯವರು ಎಚ್.ಡಿ.ದೇವೇಗೌಡರಿಗೆ’ ನ.10ರಂದು ಬರೆದಿರುವ ಪತ್ರವನ್ನು ಬಿಜೆಪಿ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News