ಮಧ್ಯಂತರ ಚುನಾವಣೆ ನಡೆದರೆ ಬಿಜೆಪಿಗೆ 160 ಸ್ಥಾನ ಖಚಿತ: ಶ್ರೀರಾಮುಲು

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆದಿದ್ದೇ ಆದಲ್ಲಿ ಬಿಜೆಪಿ 160 ಸ್ಥಾನಗಳನ್ನು ಗೆಲ್ಲಲಿದೆ ಎಂದು ಶಾಸಕ ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Last Updated : Jun 24, 2019, 06:51 PM IST
ಮಧ್ಯಂತರ ಚುನಾವಣೆ ನಡೆದರೆ ಬಿಜೆಪಿಗೆ 160 ಸ್ಥಾನ ಖಚಿತ: ಶ್ರೀರಾಮುಲು title=

ಚಿತ್ರದುರ್ಗ: ಒಂದು ವೇಳೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆದಿದ್ದೇ ಆದಲ್ಲಿ ಬಿಜೆಪಿ 160 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಾಜಿ ಸಚಿವ ಹಾಗೂ ಮೊಳಕಾಲ್ಮೂರು ಶಾಸಕ ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಮಿಶ್ರ ಸರ್ಕಾರ ಉಳಿಸಿಕೊಳ್ಳಲು ತೇಪೆ ಹಚ್ಚುವ ಕಾರ್ಯ ನಡೆಯುತ್ತಿದೆ. ನಾನು ಚಿವುಟುತ್ತೇನೆ, ನೀನು ಅಳುವಂತೆ ಮಾಡು ಎಂಬ ವರ್ತನೆಯನ್ನು ಜೆಡಿಎಸ್, ಕಾಂಗ್ರೆಸ್ ಪಕ್ಷಗಳು ಹಿಂದಿವೆ. ಒಂದು ವೇಳೆ ಮಧ್ಯಂತರ ಚುನಾವಣೆ ಬಂದರೆ ಇರುವ ಸ್ಥಾನಗಳನ್ನೂ ಕಾಂಗ್ರೆಸ್ ಕಳೆದುಕೊಳ್ಳಲಿದೆ ಎಂದು ಶ್ರೀರಾಮುಲು ಹೇಳಿದರು.

ಇದೇ ವೇಳೆ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ಬಗ್ಗೆ ಟೀಕಿಸಿದ ಶ್ರೀರಾಮುಲು, ರಾಜ್ಯದಲ್ಲಿ ಒಂದೆಡೆ ಬರಗಾಲ ಉಂಟಾಗಿ ಜನರು ನೀರಿಲ್ಲದೆ ಬವಣಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಿಎಂ ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯಕ್ಕೆ ಕೋಟ್ಯಂತರ ರೂ. ಖರ್ಚು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Trending News