ಪಕ್ಷ ವಿರೋಧಿ ಹೇಳಿಕೆ: ಎಂ.ಪಿ.ರೇಣುಕಾಚಾರ್ಯ್ & ಬಸನಗೌಡ ಪಾಟೀಲ್ ಯತ್ನಾಳ್‍ಗೆ ನೋಟಿಸ್!

BJP Disciplinary Committee: ಪಕ್ಷಕ್ಕೆ ಮುಜುಗರವಾಗುವ ರೀತಿಯಲ್ಲಿ ಹೇಳಿಕೆ ನೀಡುತ್ತಿರುವ ವಿಚಾರವಾಗಿ ತಮ್ಮ ಮೇಲೆ ಯಾಕೆ ಶಿಸ್ತುಕ್ರಮ ಜರುಗಿಸಬಾರದೆಂದು ಕಾರಣ ಕೇಳಿ ನೋಟಿಸ್ ನೀಡಲಾಗಿದೆ. 

Written by - Zee Kannada News Desk | Last Updated : Jun 29, 2023, 06:08 PM IST
  • ಪಕ್ಷದ ನಾಯಕರ ವಿರುದ್ಧ ಮಾತಾಡಿದವರ ಮೇಲೆ ಶಿಸ್ತು ಕ್ರಮಕ್ಕೆ ಬಿಜೆಪಿ ಮುಂದಾಗಿದೆ
  • ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ & ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ಗೆ ನೋಟಿಸ್
  • ನೋಟಿಸ್ ತಲುಪಿದ ಒಂದು ವಾರದೊಳಗೆ ಲಿಖಿತ ರೂಪದಲ್ಲಿ ಉತ್ತರ ನೀಡುವಂತೆ ಸೂಚಿಸಲಾಗಿದೆ
ಪಕ್ಷ ವಿರೋಧಿ ಹೇಳಿಕೆ: ಎಂ.ಪಿ.ರೇಣುಕಾಚಾರ್ಯ್ & ಬಸನಗೌಡ ಪಾಟೀಲ್ ಯತ್ನಾಳ್‍ಗೆ ನೋಟಿಸ್! title=
ರೇಣುಕಾಚಾರ್ಯ & ಯತ್ನಾಳ್ ಗೆ ನೋಟಿಸ್!

ಬೆಂಗಳೂರು: ಪಕ್ಷದ ವಿರುದ್ಧ ಮಾತಾಡಿದವರ ವಿರುದ್ಧ ಶಿಸ್ತು ಕ್ರಮಕ್ಕೆ ಬಿಜೆಪಿ ಮುಂದಾಗಿದೆ. ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹಾಗೂ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ಗೆ ನೋಟಿಸ್ ನೀಡಲಾಗಿದೆ.

ರಾಜ್ಯ ಬಿಜೆಪಿ ಶಿಸ್ತು ಸಮಿತಿಯಿಂದ ಈ ಇಬ್ಬರು ನಾಯಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ನಾಳೆ ಬೆಂಗಳೂರಿನ ಕಚೇರಿಗೆ ಬರುವಂತೆಯೂ ಶಿಸ್ತು ಸಮಿತಿಯ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಸೂಚಿಸಿದ್ದಾರೆ.

ಇದನ್ನೂ ಓದಿ: Crime News: ಪತ್ನಿ, ಮಗನನ್ನು ಸಮುದ್ರಕ್ಕೆ ತಳ್ಳಿ ಉದ್ಯಮಿ ಆತ್ಮಹತ್ಯೆಗೆ ಶರಣು!

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ವಿಚಾರವಾಗಿ ಎಂ.ಪಿ.ರೇಣುಕಾಚಾರ್ಯ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅದೇ ರೀತಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಹೊಂದಾಣಿಕೆಯ ಆರೋಪ ಮಾಡಿದ್ದರು. ಇದೀಗ ಇಬ್ಬರಿಗೂ ಶಿಸ್ತು ಕ್ರಮದ ನೋಟಿಸ್ ಜಾರಿ ಮಾಡಲಾಗಿದೆ.

ನೋಟಿಸ್‍ನಲ್ಲಿ ಏನಿದೆ..?

ಪಕ್ಷ ವಿರೋಧಿ ಹೇಳಿಕೆಗಳ ಕುರಿತು ಸಾಕಷ್ಟು ಬಾರಿ ತಿಳಿಹೇಳಿದರೂ ಸಹ ಪದೇ ಪದೇ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ವಿರುದ್ಧ ಮಾಧ್ಯಮಗಳ ಮುಂದೆ ಪಕ್ಷಕ್ಕೆ ಮುಜುಗರವಾಗುವ ರೀತಿಯಲ್ಲಿ ಹೇಳಿಕೆ ನೀಡುತ್ತಿರುವುದನ್ನು ರಾಜ್ಯ ಶಿಸ್ತು ಸಮಿತಿಯು ಗಂಭೀರವಾಗಿ ಪರಿಗಣಿಸಿದೆ. ಈ ವಿಚಾರವಾಗಿ ತಮ್ಮ ಮೇಲೆ ಯಾಕೆ ಶಿಸ್ತುಕ್ರಮ ಜರುಗಿಸಬಾರದೆಂದು ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಈ ನೋಟಿಸ್ ತಮಗೆ ತಲುಪಿದ ಒಂದು ವಾರದೊಳಗೆ ಲಿಖಿತ ರೂಪದಲ್ಲಿ ಉತ್ತರ ನೀಡುವಂತೆ’ ನೋಟಿಸ್‍ನಲ್ಲಿ ಸೂಚಿಸಲಾಗಿದೆ.

ಇದನ್ನೂ ಓದಿ: ಗೃಹಲಕ್ಷ್ಮೀ ಅರ್ಜಿಗೆ ಯಾರೂ ಹಣ ಕೊಡಬೇಡಿ - ಲಕ್ಷ್ಮೀ ಹೆಬ್ಬಾಳಕರ್ ಮನವಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News