ತೇಜಸ್ವಿನಿ ಗೌಡ ಬಿಜೆಪಿಗೆ ರಾಜೀನಾಮೆ ನೀಡಿ ಉಪಕಾರ ತೀರಿಸಿದ್ದಾರೆ: ಬಿಎಸ್ ಯಡಿಯೂರಪ್ಪ

BS Yediyurappa: ಹುಬ್ಬಳ್ಳಿಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚಿತ್ರದುರ್ಗದ ಬಿಜೆಪಿ ಟಿಕೆಟ್ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ. ಬಹುತೇಕ ನಾಳೆ ಟಿಕೆಟ್ ಹಂಚಿಕೆಯಾಗಲಿದೆ ಎಂದು ಹೇಳಿದರು.

Written by - Prashobh Devanahalli | Edited by - Bhavishya Shetty | Last Updated : Mar 27, 2024, 10:07 PM IST
    • ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಹಂಚಿಕೆ ನಾಳೆ ಹೊರಬೀಳಲಿದೆ
    • ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ
    • ಹುಬ್ಬಳ್ಳಿಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಯಡಿಯೂರಪ್ಪ
ತೇಜಸ್ವಿನಿ ಗೌಡ ಬಿಜೆಪಿಗೆ ರಾಜೀನಾಮೆ ನೀಡಿ ಉಪಕಾರ ತೀರಿಸಿದ್ದಾರೆ:  ಬಿಎಸ್ ಯಡಿಯೂರಪ್ಪ title=
BS Yediyurappa

ಹುಬ್ಬಳ್ಳಿ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಹಂಚಿಕೆ ನಾಳೆ ಹೊರಬೀಳಲಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚಿತ್ರದುರ್ಗದ ಬಿಜೆಪಿ ಟಿಕೆಟ್ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ. ಬಹುತೇಕ ನಾಳೆ ಟಿಕೆಟ್ ಹಂಚಿಕೆಯಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ:‘ಸನ್ ರೈಸರ್ಸ್ ಹೈದರಾಬಾದ್’ ಅಬ್ಬರಕ್ಕೆ RCB ಸಾರ್ವಕಾಲಿಕ ದಾಖಲೆ ಉಡೀಸ್!

ತೇಜಸ್ವಿನಿ ರಾಜೀನಾಮೆ ಬಹಳ ಸಂತೋಷ, ಒಳ್ಳೆಯದಾಗಲಿ:

ತೇಜಸ್ವಿನಿ ಗೌಡ ಅವರು ಎಂ ಎಲ್ ಸಿ ಸ್ಥಾನ ಮತ್ತು ಪಕ್ಷಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಕ್ಷ ಅವರಿಗೆ ಸ್ಥಾನಮಾನ ಕೊಟ್ಟಿದೆ. ಅದಕ್ಕೆ ಅವರು ಈ ರೀತಿ ಉಪಕಾರ ತೀರಿಸಿದ್ದಾರೆ. ಬಹಳ ಸಂತೋಷ, ಒಳ್ಳೆಯದಾಗಲಿ ಅವರಿಗೆ ಎಂದು ಹೇಳಿದರು.

ಇದನ್ನೂ ಓದಿ: ಪ್ರೀತಿಗಾಗಿ ಮುಸ್ಲಿಂ ಯುವತಿಯನ್ನ 2 ಬಾರಿ ಮದುವೆಯಾದ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ! ಧರ್ಮವನ್ನೇ ಮೀರಿದ ಅಪರೂಪದ ಪ್ರೇಮವಿದು!

ದೇವೇಗೌಡರ ಪ್ರವಾಸ 28 ಸ್ಥಾನ ಗೆಲ್ಲಲು ಅನುಕೂಲ:

ಮಾಜಿ ಪ್ರಧಾನಿ ದೇವೇಗೌಡರು ರಾಜ್ಯ ಪ್ರವಾಸ ಕೈಗೊಂಡಾಗ ಬರುತ್ತೇನೆ ಎಂದು ಹೇಳಿದ್ದಾರೆ. ಅವರ ಪ್ರಭಾವ ಮತ್ತು ಜೆಡಿಎಸ್-ಬಿಜೆಪಿ ಮೈತ್ರಿ ಅನುಕೂಲವಾಗಲಿದೆ. ಇದರಿಂದ ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News