ಬೆಳಗಾವಿ, ಹುಬ್ಬಳ್ಳಿ ವಿಮಾನ ನಿಲ್ದಾಣಗಳಿಗೆ ಚೆನ್ನಮ್ಮ, ರಾಯಣ್ಣ ಹೆಸರಿಡಲು ಸಿಎಂ ಶಿಫಾರಸು

ಕೇಂದ್ರ ನಾಗರಿಕ ವಿಮಾನಯಾನ ಸಚಿವ ಸುರೇಶ್ ಪ್ರಭು ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ  

Last Updated : Dec 23, 2018, 10:16 AM IST
ಬೆಳಗಾವಿ, ಹುಬ್ಬಳ್ಳಿ ವಿಮಾನ ನಿಲ್ದಾಣಗಳಿಗೆ ಚೆನ್ನಮ್ಮ, ರಾಯಣ್ಣ ಹೆಸರಿಡಲು ಸಿಎಂ ಶಿಫಾರಸು title=

ಬೆಂಗಳೂರು: ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡುವಂತೆ ಕೋರಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಸುರೇಶ್ ಪ್ರಭು ಅವರಿಗೆ ಪತ್ರ ಬರೆದಿದ್ದಾರೆ.

ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಸ್ವಾತಂತ್ರ್ಯ ಹೋರಾಟಗಾರರಾಗಿ ಈ ಭಾಗದ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಆದ್ದರಿಂದ ಈ ವಿಮಾನ ನಿಲ್ದಾಣ ಗಳಿಗೆ ಅವರ ಹೆಸರು ಇಡಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ.

Trending News