New Coronavirus Strain: ರಾಜ್ಯದ ಜನತೆಗೆ 'ಖಡಕ್ ಎಚ್ಚರಿಕೆ' ನೀಡಿದ ಸಿಎಂ ಬಿಎಸ್ ವೈ..!

ರಾಜ್ಯದಲ್ಲಿ ಕೊರೋನಾ ಅಪಾಯ ಇನ್ನೂ ತಗ್ಗಿಲ್ಲ. ಹೊಸ ವರ್ಷಕ್ಕೆ ಕಾಲಿಡುತ್ತಿರುವ ಈ ಹೊತ್ತಿನಲ್ಲಿ ಸಾಂಕ್ರಾಮಿಕದ ಬಗ್ಗೆ ಕಿಂಚಿತ್ತೂ ನಿರ್ಲಕ್ಷ್ಯ ಸಲ್ಲದು.

Last Updated : Dec 30, 2020, 12:47 PM IST
  • ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಂಕಿನ ಬಗ್ಗೆ ಎಚ್ಚರಿಕೆ ವಹಿಸುವಂತೆ ರಾಜ್ಯದ ಜನತೆಗೆ ಮನವಿ
  • ರಾಜ್ಯದಲ್ಲಿ ಕೊರೋನಾ ಅಪಾಯ ಇನ್ನೂ ತಗ್ಗಿಲ್ಲ. ಹೊಸ ವರ್ಷಕ್ಕೆ ಕಾಲಿಡುತ್ತಿರುವ ಈ ಹೊತ್ತಿನಲ್ಲಿ ಸಾಂಕ್ರಾಮಿಕದ ಬಗ್ಗೆ ಕಿಂಚಿತ್ತೂ ನಿರ್ಲಕ್ಷ್ಯ ಸಲ್ಲದು.
  • ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಕೋವಿಡ್ ಹರಡದಂತೆ ರಾಜ್ಯ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.
 New Coronavirus Strain: ರಾಜ್ಯದ ಜನತೆಗೆ 'ಖಡಕ್ ಎಚ್ಚರಿಕೆ' ನೀಡಿದ ಸಿಎಂ ಬಿಎಸ್ ವೈ..! title=

ಬೆಂಗಳೂರು: ರಾಜ್ಯದಲ್ಲಿ ರೂಪಾಂತರ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಂಕಿನ ಬಗ್ಗೆ ಎಚ್ಚರಿಕೆ ವಹಿಸುವಂತೆ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ(B.S.Yeddyurappa), ರಾಜ್ಯದಲ್ಲಿ ಕೊರೋನಾ ಅಪಾಯ ಇನ್ನೂ ತಗ್ಗಿಲ್ಲ. ಹೊಸ ವರ್ಷಕ್ಕೆ ಕಾಲಿಡುತ್ತಿರುವ ಈ ಹೊತ್ತಿನಲ್ಲಿ ಸಾಂಕ್ರಾಮಿಕದ ಬಗ್ಗೆ ಕಿಂಚಿತ್ತೂ ನಿರ್ಲಕ್ಷ್ಯ ಸಲ್ಲದು. ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಪಾಲಿಸಿ, ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಸುರಕ್ಷಿತವಾಗಿರಿ ಎಂದು ಎಚ್ಚರಿಸಿದ್ದಾರೆ.

ರಾಜ್ಯದಲ್ಲಿ 7 ಜನರಲ್ಲಿ ಕೊರೊನಾ ರೂಪಾಂತರ ವೈರಸ್ ಪತ್ತೆಯಾಗಿದ್ದು, ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಕೋವಿಡ್ ಹರಡದಂತೆ ರಾಜ್ಯ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

Corona Strain: ಬೆಂಗಳೂರಿನ ಬಳಿಕ ಶಿವಮೊಗ್ಗಕ್ಕೂ ಶಾಕ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News