ಉತ್ತರ ಕರ್ನಾಟಕದ ಈ ಜಿಲ್ಲೆಗಳಲ್ಲಿ 8 ಹೆಚ್ಚುವರಿ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮತಿ ನೀಡಿದ ಸಿಎಂ ಸಿದ್ದರಾಮಯ್ಯ

North Karnataka: ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ದೊರೆತಿರುವ ಅನುಮತಿಗಳಿಂದ ಈ ಜಿಲ್ಲೆಗಳಲ್ಲಿ ಒಟ್ಟಾರೆ ರೂ.10,433 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ.

Written by - Manjunath N | Last Updated : Mar 10, 2024, 01:25 AM IST
  • ರಾಜ್ಯಾದ್ಯಂತ 27,067 ಹೊಸ ಉದ್ಯೋಗಗಳನ್ನು ಸೃಷ್ಟಿಸುವ ₹ 17,835 ಕೋಟಿ ಮೊತ್ತದ ಯೋಜನೆಗಳಿಗೆ ಅನುಮೋದನೆ ದೊರೆತಿದ್ದು,
  • ಇದರಲ್ಲಿ ರೂ.8,220 ಕೋಟಿ ಮೊತ್ತದ 6 ಹೊಸ ಯೋಜನೆಗಳು ಮತ್ತು ರೂ.9,615 ಕೋಟಿ ಮೊತ್ತದ ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿವೆ.
ಉತ್ತರ ಕರ್ನಾಟಕದ ಈ ಜಿಲ್ಲೆಗಳಲ್ಲಿ 8 ಹೆಚ್ಚುವರಿ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮತಿ ನೀಡಿದ ಸಿಎಂ ಸಿದ್ದರಾಮಯ್ಯ  title=
file photo

ಬೆಂಗಳೂರು: ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಅನುಮತಿ ನೀಡಿದ್ದಾರೆ.ಅವರು ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆಯಲ್ಲಿ ಈ ಘೋಷಣೆ ಹೊರಡಿಸಿದ್ದಾರೆ.

ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆಯ ಮುಖ್ಯಾಂಶಗಳು:

ರಾಜ್ಯಾದ್ಯಂತ 27,067 ಹೊಸ ಉದ್ಯೋಗಗಳನ್ನು ಸೃಷ್ಟಿಸುವ ₹ 17,835 ಕೋಟಿ ಮೊತ್ತದ ಯೋಜನೆಗಳಿಗೆ ಅನುಮೋದನೆ ದೊರೆತಿದ್ದು, ಇದರಲ್ಲಿ ರೂ.8,220 ಕೋಟಿ ಮೊತ್ತದ 6 ಹೊಸ ಯೋಜನೆಗಳು ಮತ್ತು ರೂ.9,615 ಕೋಟಿ ಮೊತ್ತದ ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿವೆ.

ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ದೊರೆತಿರುವ ಅನುಮತಿಗಳಿಂದ ಈ ಜಿಲ್ಲೆಗಳಲ್ಲಿ ಒಟ್ಟಾರೆ ರೂ.10,433 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ.

May be an image of 1 person and text that says "FaFಟY ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಭೆಯ ಮುಖ್ಯಾಂಶಗಳು: ₹17,836 ಕೋಟಿ ಹೂಡಿಕೆಗೆ ಅನುಮೋದನೆ 14 ಹೂಡಿಕೆ ಪ್ರಸ್ತಾಪನೆ 27,067 ಉದ್ಯೋಗ ಸೃಷ್ಟಿ ₹8,220 ಕೋಟಿ ಮೊತ್ತದ 6 ಹೊಸ ಯೋಜನೆಗಳು ಕರ್ನಾಟಕದ ನವ ನಿರ್ಮಾಣಕ್ಕೆ ಗ್ಯಾರಂಟಿ ಸರ್ಕಾರ ₹ 9,615 ಕೋಟಿ ಹೆಚ್ಚುವರಿ ಬಂಡವಾಳ ಹೂಡಿಕೆ ಯೋಜನೆಯ ಮೊತ್ತ CMofKarnataka Minister karnataka"

ಇದನ್ನೂ ಓದಿ:ನಿಪ್ಪಾಣಿ ಶ್ರೀರಾಮ ಮಂದಿರ : ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಬೆದರಿಕೆ ಒಡ್ಡುವ 2 ಪತ್ರಗಳು ದೇವಸ್ಥಾನದಲ್ಲಿ ಲಭ್ಯ

ವಿಸ್ಟ್ರಾನ್ ಇನ್ಫೊಕಾಂ ಮ್ಯಾನುಫ್ಯಾಕ್ಚರಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯು ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ರೂ.2,095 ಕೋಟಿ ವೆಚ್ಚದಲ್ಲಿ ಸ್ಮಾರ್ಟ್‌ಫೋನ್‌ ತಯಾರಿಕಾ ಘಟಕ ಆರಂಭಿಸಲಿದೆ. ಇದರಿಂದ 21,723 ಜನರಿಗೆ ಉದ್ಯೋಗಗಳು ದೊರೆಯಲಿವೆ.

ರಾಜ್ಯದಲ್ಲಿ ಹೊಸದಾಗಿ ಬಂಡವಾಳ ಹೂಡಿಕೆ ಮಾಡಲಿರುವ ಒಟ್ಟು 6 ಕಂಪನಿಗಳಾದ ಎಸ್‍ಟಿಟಿ ಗ್ಲೋಬಲ್ ಡೇಟಾ ಸೆಂಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಇಂಡಿಯನ್ ಕೇನ್ ಪವರ್ ಲಿಮಿಟೆಡ್, ಐ.ಸಿ.ಟಿ ಸರ್ವಿಸ್ ಮ್ಯಾನೇಜ್‌ಮೆಂಟ್‌ ಸೊಲ್ಯೂಷನ್ಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್, ಶ್ರೀ ಬಾಲಾಜಿ ಷುಗರ್ಸ್ ಮತ್ತು ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಏರ್ ಇಂಡಿಯಾ ಲಿಮಿಟೆಡ್‌ನ ಒಟ್ಟು ರೂ.8,220 ಕೋಟಿ ಮೊತ್ತದ ಬಂಡವಾಳ ಹೂಡಿಕೆಗಳಿಗೆ ಸಮಿತಿಯು ಒಪ್ಪಿಗೆ ನೀಡಿದೆ. ಈ ಹೊಸ ಯೋಜನೆಗಳಿಂದ ರಾಜ್ಯದಲ್ಲಿ ಒಟ್ಟು 27,067 ಹೊಸ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News