ಜೆಡಿಎಸ್ ಯಾರ ಜೊತೆಗೆ ಮೈತ್ರಿ ಮಾಡಿಕೊಂಡರೂ ನಮ್ಮ ತಕರಾರಿಲ್ಲ: ಸಿಎಂ ಸಿದ್ದರಾಮಯ್ಯ

BJP-JDS Alliance: ಬಿಜೆಪಿಯ ‘ಬಿ’ ಟೀಂ ವಿಚಾರವಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯನವರು. ಲೋಕಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಕೊಂಡಿರುವ ಜೆಡಿಎಸ್ ಪಕ್ಷವನ್ನು ಏನೆಂದು ಕರೆಯಬೇಕು ಎಂದು ಪ್ರಶ್ನಿಸಿದ್ದಾರೆ. 

Written by - Prashobh Devanahalli | Edited by - Puttaraj K Alur | Last Updated : Sep 27, 2023, 04:13 PM IST
  • ಕೋಮುವಾದಿ ಪಕ್ಷದ ಜೊತೆಗಿನ ಮೈತ್ರಿಯಿಂದ ಜೆಡಿಎಸ್ ಜಾತ್ಯಾತೀತವಾಗಿ ಉಳಿದಿದೆಯೇ?
  • ಲೋಕಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಕೊಂಡಿರುವ ಜೆಡಿಎಸ್‍ಅನ್ನು ಏನೆಂದು ಕರೆಯಬೇಕು?
  • ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಇನ್ಮುಂದೆ ಜಾತ್ಯಾತೀತ ಎಂದು ಹೇಳಿಕೊಳ್ಳಬಾರದು
ಜೆಡಿಎಸ್ ಯಾರ ಜೊತೆಗೆ ಮೈತ್ರಿ ಮಾಡಿಕೊಂಡರೂ ನಮ್ಮ ತಕರಾರಿಲ್ಲ: ಸಿಎಂ ಸಿದ್ದರಾಮಯ್ಯ title=
ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ಆಕ್ರೊಶ

ಚಾಮರಾಜನಗರ: ಜಾತ್ಯಾತೀತ ಎಂದು ಹೇಳಿಕೊಳ್ಳುವ ಜೆಡಿಎಸ್ ಪಕ್ಷವು ಕೋಮುವಾದಿ ಪಕ್ಷದ ಜೊತೆ ಮೈತ್ರಿಯಿಂದ ಜಾತ್ಯಾತೀತವಾಗಿ ಉಳಿದಿದೆಯೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.  

ಚಾಮರಾಜನಗರ ಜಿಲ್ಲೆಯ ಸರ್ಕಾರಿ ಬುಡಕಟ್ಟು ಆಶ್ರಮ ಶಾಲೆ ಕೋಣನಕೆರೆ ಬಳಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಜೆಡಿಎಸ್‍ನವರು ಬಿಜೆಪಿಯ ಜೊತೆ ಅಥವಾ ಇನ್ನಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೂ ನಮಗೆ ಯಾವುದೇ ತಕರಾರಿಲ್ಲ ಎಂದು ಟೀಕಿಸಿದ್ದಾರೆ.  

ಇದನ್ನೂ ಓದಿಮಲೆಮಹದೇಶ್ವರ ಬೆಟ್ಟದಲ್ಲಿ ಸಿದ್ದರಾಮಯ್ಯ ವಾಸ್ತವ್ಯ

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಜೆಡಿಎಸ್, ಬಿಜೆಪಿಯ ‘ಬಿ’ ಟೀಂ ಆಗಿದ್ದಿದ್ದರೆ 5 ವರ್ಷ ತಾವೇ ಮುಖ್ಯಮಂತ್ರಿಯಾಗಿರುತ್ತಿದ್ದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ‘ಲೋಕಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಕೊಂಡಿರುವ ಜೆಡಿಎಸ್ ಪಕ್ಷವನ್ನು ಏನೆಂದು ಕರೆಯಬೇಕು ಎಂದು ಪ್ರಶ್ನಿಸಿದರು. 

ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಪಕ್ಷವು ಇನ್ಮುಂದೆ  ಜಾತ್ಯಾತೀತ ಎಂದು ಹೇಳಿಕೊಳ್ಳಬಾರದು ಅಂತಾ ಇದೇ ವೇಳೆ ಸಿದ್ದರಾಮಯ್ಯ ಹೇಳಿದರು. 2004ರಲ್ಲಿ ಸಿದ್ದರಾಮಯ್ಯನವರು ಬಿಜೆಪಿಯ ವೆಂಕಯ್ಯನಾಯ್ಡು ಅವರನ್ನು ಭೇಟಿಯಾಗಿದ್ದರೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್.ಕೆ. ಅಡ್ವಾಣಿಯವರು ಹಿಂದೆ ಜನತಾ ಪಕ್ಷದಲ್ಲಿದ್ದಾಗ ಅವರನ್ನು ಭೇಟಿ ಮಾಡಿದ್ದು ನಿಜ ಎಂದು ತಿಳಿಸಿದರು.

ಇದನ್ನೂ ಓದಿ: ಕಾವೇರಿ ಮೈತ್ರಿ ಹೋರಾಟ ಸರ್ಕಾರದ ವಿರುದ್ಧ ಎಚ್‌ಡಿ‌ಕೆ-ಬಿ‌ಎಸ್‌ವೈ ಗುಡುಗು

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News