ಸಿಎಂ ಸಿದ್ದರಾಮಯ್ಯರ ಮೊಮ್ಮಗ ಮಾತ್ರ ಇಂಟರ್‌ನ್ಯಾಷನಲ್‌ ಶಾಲೆಯಲ್ಲಿ ಓದಿದರೆ ಸಾಕೇ..?

National Education Policy 2020: ಎಲ್ಲವನ್ನೂ ರಾಜಕೀಯ ಪ್ರೇರಿತವಾಗಿ ನೋಡದೇ, ನಮ್ಮ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದಲೂ ನೋಡಬೇಕೆಂದು ರಾಜ್ಯದ ಜನತೆಯ ಪರವಾಗಿ ಒತ್ತಾಯಿಸುತ್ತಿದ್ದೇನೆ ಎಂದು ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.

Written by - Puttaraj K Alur | Last Updated : Aug 18, 2023, 09:04 PM IST
  • ಕಾಂಗ್ರೆಸ್‌ ಸರ್ಕಾರದ ಅಧಿಕಾರದ ಅಮಲು ಕರ್ನಾಟಕದ ಶಿಕ್ಷಣ ವಲಯಕ್ಕೆ ವಿಷವಾಗಿ ಪರಿಣಮಿಸಿದೆ
  • NEPಗೆ ಆರಂಭದಿಂದಲೂ ಅಪಪ್ರಚಾರ ಮಾಡುತ್ತಾ ಬಂದಿರುವ ಕಾಂಗ್ರೆಸ್‌ನ ರಾಜಕೀಯ ಪ್ರೇರಿತ ನಡೆ ಖಂಡನೀಯ
  • ಅಷ್ಟಕ್ಕೂ ಮೆಕಾಲೆ ಶಿಕ್ಷಣ ಪದ್ಧತಿಯ ಮೇಲೆ ಕಾಂಗ್ರೆಸ್ಸಿಗರಿಗೇಕೆ ಅಷ್ಟೊಂದು ಮೋಹವೆಂದು?!
ಸಿಎಂ ಸಿದ್ದರಾಮಯ್ಯರ ಮೊಮ್ಮಗ ಮಾತ್ರ ಇಂಟರ್‌ನ್ಯಾಷನಲ್‌ ಶಾಲೆಯಲ್ಲಿ ಓದಿದರೆ ಸಾಕೇ..? title=
ಕಾಂಗ್ರೆಸ್‌ನ ರಾಜಕೀಯ ಪ್ರೇರಿತ ನಡೆ ಖಂಡನೀಯ!

ಬೆಂಗಳೂರು: #NEP2020ರ ಬದಲು ರಾಜ್ಯಕ್ಕೆ ಪ್ರತ್ಯೇಕ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ಎಂದು ಹೇಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನಿಮ್ಮ ಮೊಮ್ಮಗ ಮಾತ್ರ ಇಂಟರ್‌ನ್ಯಾಷನಲ್‌ ಶಾಲೆಯಲ್ಲಿ ಓದಿದರೆ ಸಾಕೇ? ಸರ್ಕಾರಿ ಶಾಲೆಯಲ್ಲಿ ಓದುವ ನಮ್ಮ ಮಕ್ಕಳಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ಬೇಡವೇ? ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ‍ಪ್ರಶ್ನಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ವಿಚಾರವಾಗಿ ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅಶ್ವತ್ಥ್ ನಾರಾಯಣ್, ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ‘ಕಾಂಗ್ರೆಸ್‌ ಸರ್ಕಾರದ ಅಧಿಕಾರದ ಅಮಲು ಕರ್ನಾಟಕದ ಶಿಕ್ಷಣ ವಲಯಕ್ಕೆ ವಿಷವಾಗಿ ಪರಿಣಮಿಸಿದೆ. #NEP2020 ಜಾರಿಗೆ ತರುವ ಸಂದರ್ಭದಲ್ಲಿ 2035ರೊಳಗೆ ದೇಶದಾದ್ಯಂತ ಪೂರ್ಣ ಪ್ರಮಾಣದಲ್ಲಿ ಅಳವಡಿಸಿಕೊಳ್ಳುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಈ ಬಗ್ಗೆ ಆರಂಭದಿಂದಲೂ ಅಪಪ್ರಚಾರ ಮಾಡುತ್ತಾ ಬಂದಿರುವ ಕಾಂಗ್ರೆಸ್‌ನ ರಾಜಕೀಯ ಪ್ರೇರಿತ ನಡೆ ಖಂಡನೀಯ’ವೆಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಜಿ.ಟಿ.ದೇವೆಗೌಡರ ಅಧ್ಯಕ್ಷತೆಯಲ್ಲಿ ಜೆಡಿಎಸ್ ನೂತನ ಕೋರ್ ಕಮಿಟಿ ರಚನೆ

‘ಡಿಕೆಶಿ ಅವರೇ, ತಮ್ಮ ಒಡೆತನದ ಶಿಕ್ಷಣ ಸಂಸ್ಥೆಗಳ ಮಕ್ಕಳು ಮಾತ್ರ CBSE, ICSE ಪಠ್ಯಕ್ರಮವನ್ನು ಓದಿದರೆ ಸಾಕೇ? ಸರ್ಕಾರಿ ಶಾಲೆಯಲ್ಲಿ ಓದುವ ನಮ್ಮ ಮಕ್ಕಳಿಗೆ ಅಂತಹ ಗುಣಮಟ್ಟದ ಶಿಕ್ಷಣ ದೊರಕಬಾರದೇ? ಜ್ಞಾನಾಧಾರಿತ ಸಮಾಜದಲ್ಲಿ ನಮ್ಮ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ, ಕೌಶಲ್ಯದಿಂದ ವಂಚಿತರಾಗಬಾರದು ಎಂಬುದು ನಮ್ಮ ಉದ್ದೇಶ. #NEP2020 ಕರಡು ಸಮಿತಿಯ ಅಧ್ಯಕ್ಷರಾಗಿದ್ದವರು ನಮ್ಮ ಕರ್ನಾಟಕದವರೇ ಆದ ISRO ಮಾಜಿ ಅಧ್ಯಕ್ಷ ಡಾ.ಕಸ್ತೂರಿ ರಂಗನ್‌ ಅವರು. ಅಂಥವರ ದೂರದೃಷ್ಟಿಯ ಬಗ್ಗೆಯೂ ಕಾಂಗ್ರೆಸ್ಸಿಗರಿಗೆ ಸಂಶಯವೇ? ಅನೇಕ ಶಿಕ್ಷಣ ತಜ್ಞರ ಅಭಿಪ್ರಾಯ, ಸಲಹೆ ಸೂಚನೆಗಳನ್ನು ಕ್ರೋಢೀಕರಿಸಿ ಸಿದ್ಧಪಡಿಸಲಾಗಿರುವ #NEP2020 ವಿರುದ್ಧ ಅಪಪ್ರಚಾರ ಮಾಡುವುದು ಕ್ಷಮಾರ್ಹವಲ್ಲ’ವೆಂದು ಟೀಕಿಸಿದ್ದಾರೆ.

‘ಕರ್ನಾಟಕದ ಶಿಕ್ಷಣ ವ್ಯವಸ್ಥೆಯು #NEP2020 ಅಳವಡಿಕೆಗೆ ಸನ್ನದ್ಧವಾಗಿರುವ ಕಾರಣ ದೇಶದಲ್ಲೇ ಮೊದಲ ಬಾರಿಗೆ ಅಳವಡಿಸಿಕೊಂಡ ರಾಜ್ಯ ಎಂಬ ಹೆಗ್ಗಳಿಕೆ ನಮ್ಮದಾಗಿದೆಯೇ ವಿನಃ ಈ ವಿಷಯದಲ್ಲಿ ಯಾವುದೇ ತರಾತುರಿ ತೋರಿಲ್ಲ. ಹೊಸ ಶಿಕ್ಷಣ ಪದ್ದತಿಯನ್ನು ಅಳವಡಿಸಿಕೊಂಡು, ದೇಶಕ್ಕೇ ಮಾದರಿಯಾಗುವಲ್ಲಿ ನಮ್ಮ ಕರ್ನಾಟಕ ಎಂದೆಂದಿಗೂ ಅಗ್ರಸ್ಥಾನದಲ್ಲಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕದಲ್ಲಿ ರದ್ದು ಮಾಡುತ್ತೇವೆಂದು ಹೊರಟಿರುವ ಕಾಂಗ್ರೆಸ್‌ ಸರ್ಕಾರ ರಾಜ್ಯದ ಯುವ ಪೀಳಿಗೆಗೆ ದ್ರೋಹ ಬಗೆಯುತ್ತಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಲ್ಪ ಜ್ಞಾನದಿಂದ ನೋಡುವ ಬದಲು ಅದರ ಸಾರವನ್ನು ಕಾಂಗ್ರೆಸ್‌ ನಾಯಕರು ಸರಿಯಾಗಿ ಓದಬೇಕು’ ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ನಮ್ಮ ಹೆಸರಲ್ಲಿ ನೈಸ್ ಆಸ್ತಿ ಇದ್ದರೆ ಇಡೀ ಕುಟುಂಬವೇ ರಾಜಕೀಯ ನಿವೃತ್ತಿ: ಎಚ್.ಡಿ.ಕುಮಾರಸ್ವಾಮಿ

‘ಎಲ್ಲವನ್ನೂ ರಾಜಕೀಯ ಪ್ರೇರಿತವಾಗಿ ನೋಡದೇ, ನಮ್ಮ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದಲೂ ನೋಡಬೇಕೆಂದು ರಾಜ್ಯದ ಜನತೆಯ ಪರವಾಗಿ ಒತ್ತಾಯಿಸುತ್ತಿದ್ದೇನೆ. ಅಷ್ಟಕ್ಕೂ ಮೆಕಾಲೆ ಶಿಕ್ಷಣ ಪದ್ಧತಿಯ ಮೇಲೆ ಕಾಂಗ್ರೆಸ್ಸಿಗರಿಗೇಕೆ ಅಷ್ಟೊಂದು ಮೋಹ?! ಎಲ್ಲವನ್ನೂ ರಾಜಕೀಯ ಪ್ರೇರಿತವಾಗಿ ನೋಡದೇ, ನಮ್ಮ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಹಿತ ದೃಷ್ಟಿಯಿಂದಲೂ ನೋಡಬೇಕೆಂದು ರಾಜ್ಯದ ಜನತೆಯ ಪರವಾಗಿ ಒತ್ತಾಯಿಸುತ್ತಿದ್ದೇನೆ’ ಎಂದು ಅಶ್ವತ್ಥ್ ನಾರಾಯಣ್ ಟ್ವೀಟ್ ಮಾಡಿದ್ದಾರೆ.    

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News