ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್

ಇಂದು(ಸೆಪ್ಟೆಂಬರ್ 24) ನಾಮಪತ್ರ ಸಲ್ಲಿಸಲು ಕಡೆಯ ದಿನವಾದ್ದರಿಂದ ಭಾನುವಾರ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. 

Last Updated : Sep 24, 2018, 11:10 AM IST
ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್ title=

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಪ್ರಕಟಿಸಿದೆ. 

ವಿಧಾನ ಪರಿಷತ್'ನ ಮೂರು ಸ್ಥಾನಗಳಿಗೆ ಅಕ್ಟೋಬರ್ 4 ರಂದು ನಡೆಯಲಿರುವ ಉಪ ಚುನಾವಣೆಗೆ ಇಂದು(ಸೆಪ್ಟೆಂಬರ್ 24) ನಾಮಪತ್ರ ಸಲ್ಲಿಸಲು ಕಡೆಯ ದಿನವಾದ್ದರಿಂದ ಭಾನುವಾರ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. 

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪಮುಖ್ಯಮಂತ್ರಿ ಜಿ.ಪರಮೇಶ್ವರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಭೆ ನಡೆಸಿದ ಬಳಿಕ, ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಮತ್ತು ನಜೀರ್ ಅಹಮದ್ ಅವರ ಹೆಸರನ್ನು ವಿಧಾನ ಪರಿಷತ್ ಚುನಾವಣೆಗೆ ಪ್ರಕಟಿಸಲಾಗಿದೆ.

Trending News