ಜಯನಗರ ಚುನಾವಣೆ: 12ನೇ ಸುತ್ತಿನಲ್ಲೂ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಮುನ್ನಡೆ

12ನೇ ಸುತ್ತಿನ ಮತ ಎಣಿಕೆ ನಂತರವೂ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ 45,975 ಮತಗಳನ್ನು ಪಡೆಯುವ ಮೂಲಕ 10,177 ಮತಗಳ ಮುನ್ನಡೆ ಸಾಧಿಸಿದ್ದಾರೆ.

Updated: Jun 13, 2018 , 11:03 AM IST
ಜಯನಗರ ಚುನಾವಣೆ: 12ನೇ ಸುತ್ತಿನಲ್ಲೂ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಮುನ್ನಡೆ

ಬೆಂಗಳೂರು: ಜಯನಗರ ವಿಧಾನ ಸಭಾ ಕ್ಷೇತ್ರದ 12ನೇ ಸುತ್ತಿನ ಮತ ಎಣಿಕೆ ನಂತರವೂ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ 45,975 ಮತಗಳನ್ನು ಪಡೆಯುವ ಮೂಲಕ 10,177 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಎರಡನೇ ಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಎನ್.ಪ್ರಹ್ಲಾದ್ ಬಾಬು ಇದ್ದು, 35,798 ಮತಗಳನ್ನು ಪಡೆದಿದ್ದರೆ, ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿ 1,132 ಮತಗಳನ್ನು ಪಡೆದಿದ್ದಾರೆ. ಇದುವರೆಗೆ 500 ಅಧಿಕ ನೋಟಾ ಮತಗಳು ಕಂಡುಬಂದಿವೆ.

ಜಯನಗರ ವಿಧಾನಸಭಾ ಕ್ಷೇತ್ರ ಮತಎಣಿಕೆ ಆರಂಭ

ಮತಎಣಿಕೆ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡು ಬಂದಿರುವ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಜಯನಗರದಲ್ಲಿ ಕಾಂಗ್ರೆಸ್ ಶಾಸಕರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. 

ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಶೇ 55 ರಷ್ಟು ಮತದಾನ

ಕರ್ನಾಟಕ ವಿಧಾನಸಭೆ ಚುನಾವಣೆ ಮೇ 12ರಂದು ನಡೆದಿತ್ತಾದರೂ, ಬಿಜೆಪಿ ಅಭ್ಯರ್ಥಿ ಮತ್ತು ಶಾಸಕರಾಗಿದ್ದ ಬಿ.ಎನ್.ವಿಜಯಕುಮಾರ್ ಅವರ ನಿಧನದಿಂದ ಮುಂದೂಡಲ್ಪಟ್ಟಿದ್ದ ಜಯನಗರ ವಿಧಾನಸಭೆ ಕ್ಷೇತ್ರಕ್ಕೆ ಜೂನ್ 11ರಂದು ಚುನಾವಣೆ ನಡೆದು, ಇಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ.

By continuing to use the site, you agree to the use of cookies. You can find out more by clicking this link

Close