ನಾಳೆಯಿಂದ ರಾಹುಲ್ ಗಾಂಧಿ 3ನೇ ಹಂತದ ರಾಜ್ಯ ಪ್ರವಾಸ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ‌‌ ನಾಳೆಯಿಂದ 3ನೇ ಹಂತದ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಈ ಬಾರಿ ಕರಾವಳಿ ಜಿಲ್ಲೆಗಳಲ್ಲಿ ಮತಬೇಟೆಗೆ ಸಿದ್ಧವಾಗಿದ್ದಾರೆ.

Last Updated : Mar 19, 2018, 05:50 PM IST
ನಾಳೆಯಿಂದ ರಾಹುಲ್ ಗಾಂಧಿ 3ನೇ ಹಂತದ ರಾಜ್ಯ ಪ್ರವಾಸ title=

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ‌‌ ನಾಳೆಯಿಂದ 3ನೇ ಹಂತದ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಈ ಬಾರಿ ಕರಾವಳಿ ಜಿಲ್ಲೆಗಳಲ್ಲಿ ಮತಬೇಟೆಗೆ ಸಿದ್ಧವಾಗಿದ್ದಾರೆ.

ಮಾರ್ಚ್ 20ರಂದು ಮಂಗಳೂರಿಗೆ ಆಗಮಿಸಲಿರುವ ರಾಹುಲ್​, ಮಾ.21ರಂದು ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. 

ಮಾರ್ಚ್ 20, 2018
* ಬೆಳಿಗ್ಗೆ 11.30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಹುಲ್, ವಿಮಾನ ನಿಲ್ದಾಣದಿಂದ ನೇರವಾಗಿ ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 

* ಮಧ್ಯಾಹ್ನ 12.55ಕ್ಕೆ ಉಡುಪಿ ಜಿಲ್ಲೆಯ ಎರ್ಮಳ್​ನಲ್ಲಿ ರಾಜೀವ್​ಗಾಂಧಿ ಪೊಲಿಟಿಕಲ್ ಇನ್ಸಿಟಿಟ್ಯೂಶನ್ ಉದ್ಘಾಟಿಸಿ, 1.45ರ ವೇಳೆಗೆ ಪಡುಬಿದ್ರಿಯಲ್ಲಿ ನಡೆಯುವ ಪಕ್ಷದ  ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

* ಸಂಜೆ 4.30ಕ್ಕೆ ಸುರತ್ಕಲ್​'ನಲ್ಲಿ ಸಭೆ ನಡೆಸಲಿರುವ ರಾಹುಲ್, ಸಂಜೆ 5.30ರ ವೇಳೆಗೆ ಮಂಗಳೂರಿಗೆ ತೆರಳಿ ರೋಡ್ ಶೋನಲ್ಲಿ ಪಾಲ್ಗೊಂಡು, ನಂತರ ನೆಹರು ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 

* ರಾತ್ರಿ 8 ಗಂಟೆ ಕುದ್ರೋಳಿ ಗೋಕರ್ಣನಾಥ ದೇವಸ್ಥಾನ, ರೋಝಾರಿಯೋ ಚರ್ಚ್, ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಲಿದ್ದು, ಜಿಲ್ಲೆಯ ಸರ್ಕ್ಯೂಟ್ ಹೌಸ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಮಾರ್ಚ್ 21, 2018
* ಬೆಳಿಗ್ಗೆ 8.30ಕ್ಕೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಹಿರಿಯ ನಾಯಕರ ಜೊತೆ ಸಭೆ ನಡೆಸಲಿದ್ದಾರೆ. ಬೆಳಿಗ್ಗೆ 10.20ಕ್ಕೆ ಹೆಲಿಕಾಪ್ಟರ್ ಮೂಲಕ ಮಂಗಳೂರಿನಿಂದ ಶೃಂಗೇರಿಗೆ ಹೆಲಿಕಾಪ್ಟರ್ ಮೂಲಕ ತೆರಳಿ, ಶೃಂಗೇರಿ ಮಠ ಮತ್ತು ದೇವಾಲಯಕ್ಕೆ ಭೇಟಿ ನೀಡಿ, ಶಂಕಾರಾಚಾರ್ಯ ಭಾರತಿ ತೀರ್ಥ ಸ್ವಾಮೀಜಿ ಜೊತೆ ಸಭೆ ನಡೆಸಲಿದ್ದಾರೆ.

* ಮಧ್ಯಾಹ್ನ 12.25ಕ್ಕೆ ರಾಜೀವ್ ಗಾಂಧೀ ಸಂಸ್ಕೃತ ವಿವಿ ವಿದ್ಯಾರ್ಥಿಗಳ ಜೊತೆ ಸಂವಾದ, 1.2೦ಕ್ಕೆ ಬ್ಲಾಕ್ ಕಾಂಗ್ರೆಸ್ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ 1.45ಕ್ಕೆ ಚಿಕ್ಕಮಗಳೂರಿಗೆ ತೆರಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಚಿಕ್ಕಮಗಳೂರಿನಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.

* ಸಂಜೆ 4.40ಕ್ಕೆ ಹಾಸನದ ಬೇಲೂರಿಗೆ ಭೇಟಿ, 6 ಗಂಟೆಗೆ ಹಾಸನದಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ರಾತ್ರಿ 10ಗಂಟೆಗೆ ಮೈಸೂರು ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಲಿದ್ದಾರೆ. 

Trending News