ಕರ್ನಾಟಕ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ದೆಹಲಿಗೆ ದೌಡು

        

Last Updated : Apr 9, 2018, 03:20 PM IST
ಕರ್ನಾಟಕ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ದೆಹಲಿಗೆ ದೌಡು title=

ನವದೆಹಲಿ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಗೊಳಿಸುವ ನಿಟ್ಟಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಆಗಮಿಸಿದ್ದಾರೆ. ಇವರ ಆಗಮನದ ಬೆನ್ನಲೇ  ಕಾಂಗ್ರೆಸ್ ವಿಧಾನ ಸಭಾ ಟಿಕೆಟ್ ಆಕಾಂಕ್ಷಿಗಳು ಸಹಿತ ದೆಹಲಿಗೆ ದೌಡಾಯಿಸಿದ್ದಾರೆ.

ಇಂದು ನಾಲ್ಕು ಗಂಟೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು,ಕಾಂಗ್ರೆಸ್ ನ ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಮಧುಸೂಧನ್ ಮಿಸ್ರ್ತಿ ನೇತೃತ್ವದಲ್ಲಿ ಸಭೆ  ನಡೆಯಲಿದೆ ಎಂದು ತಿಳಿದುಬಂದಿದೆ. ಈ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್, ಡಿ.ಕೆ ಶಿವಕುಮಾರ್, ಬಿಕೆ ಹರಿಪ್ರಸಾದ್ ಭಾಗಿಯಾಗಲಿದ್ದಾರೆ. ಈ ಸ್ಕ್ರೀನಿಂಗ್ ಕಮಿಟಿ ಸಭೆಯ ನಂತರ ರಾಹುಲ್  ನೇತೃತ್ವದಲ್ಲಿ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ. ಮೊದಲ ಹಂತದ ಪಟ್ಟಿಯನ್ನು ಬಿಡುಗಡೆಗೊಳಿಸಲಿರುವ ಕಾಂಗ್ರೆಸ್ ಪಕ್ಷವು ಒಟ್ಟು 140 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಿದೆ ಎನ್ನಲಾಗಿದೆ.

ಇದೆ ಬರುವ ಮೇ 12 ರಂದು ರಾಜ್ಯ ಚುನಾವಣೆ ಇರುವುದರಿಂದ ಮರಳಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕಸರತ್ತು ನಡೆಸಿರುವ ಕಾಂಗ್ರೆಸ್ ಪಕ್ಷವು ಗೆಲ್ಲುವ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ಹಂಚಲಾಗುತ್ತಿದೆ ಎನ್ನಲಾಗಿದೆ.

Trending News