Karnataka Government : ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರ ನೇಮಕಾತಿ ವಾಪಸ್ ಪಡೆದ ರಾಜ್ಯ ಸರ್ಕಾರ

ಇದರ ಜೊತೆ ಪ್ರಾಧಿಕಾರಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನವನ್ನ ರದ್ದುಪಡಿಸವಂತೆ ತಿಳಿಸಿದೆ. 

Written by - Zee Kannada News Desk | Last Updated : Jul 12, 2022, 04:36 PM IST
  • ಬಿಜೆಪಿ ನೇತೃತ್ವದ ಬೊಮ್ಮಾಯಿ ಸರ್ಕಾರ
  • 22 ಇಲಾಖೆಗಳ 92 ನಿಗಮ ಮಂಡಳಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷ ಸ್ಥಾನಗಳ ರದ್ದು
  • ಸಿಎಂ ಅಪ್ತ ಕಾರ್ಯದರ್ಶಿ ಗೆ ಸೂಚನೆ
Karnataka Government : ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರ ನೇಮಕಾತಿ ವಾಪಸ್ ಪಡೆದ ರಾಜ್ಯ ಸರ್ಕಾರ title=

ಬೆಂಗಳೂರು : ಬಿಜೆಪಿ ನೇತೃತ್ವದ ಬೊಮ್ಮಾಯಿ ಸರ್ಕಾರವು 22 ಇಲಾಖೆಗಳ 92 ನಿಗಮ ಮಂಡಳಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷ ಸ್ಥಾನಗಳ ರದ್ದುಪಡಿಸುವಂತೆ ಸಿಎಂ ಅಪ್ತ ಕಾರ್ಯದರ್ಶಿ ಗೆ ಸೂಚನೆ ನೀಡಿದೆ. ಇದರ ಜೊತೆ ಪ್ರಾಧಿಕಾರಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನವನ್ನ ರದ್ದುಪಡಿಸವಂತೆ ತಿಳಿಸಿದೆ. 

ಬಿಜೆಪಿ ನಾಯಕರ ಜಟಾಪಟಿಗೆ ಕಾರಣವಾಗಿದ್ದ ನಿಗಮ ಮಂಡಳಿ ಅಧ್ಯಕ್ಷರು,ಉಪಾಧ್ಯಕ್ಷರ ನೇಮಕಾತಿಗೆ ಮಾಜಿ ಸಿಎಂ ಯಡಿಯೂರಪ್ಪ ಅಡ್ಡಗಾಲು ಹಾಕಿದ್ದರು. ಯಡಿಯೂರಪ್ಪ ಅವರು ತಮ್ಮ ಆಪ್ತ ಬಣದ ಬೆಂಬಲಿಗರು, ಕಾರ್ಯಕರ್ತರಿಗೆ ನೇಮಕಾತಿ ಮಾಡಿದ್ದರು. ಮುಂಬರುವ ವಿಧಾನ ಸಭೆ 2023ರ ಚುನಾವಣೆ ತಯಾರಿ ಹಿನ್ನಲೆಯಲ್ಲಿ ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಮಹತ್ವದ ತೀರ್ಮಾನ ಕೈಗೊಂಡಿದ್ದರು. ಈಗ ಇವರೆಲ್ಲರಿಗೂ ಬಿಗ್ ಶಾಕ್ ನೀಡಿದಂತಾಗಿದೆ.

ಇದನ್ನೂ ಓದಿ : ಮಾಲ್ ನಲ್ಲಿ ಸಿಕ್ಕ ಚಿನ್ನದ ಸರ ಮಹಿಳೆಗೆ ಹಿಂತುರಿಗಿಸಿದ‌ ಸಚಿವರ ಗನ್ ಮ್ಯಾನ್

ಬಿಜೆಪಿ ಹೈ ಕಮಾಂಡ್ ಸಚಿವ ಆರ್.ಅಶೋಕ್ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಆರ್.ಅಶೋಕ್ ಆಧರಿಸಿ ನಿಗಮ ಮಂಡಳಿ ಅಧ್ಯಕ್ಷರು, ಉಪಾಧ್ಯಕ್ಷರು, ಪ್ರಾಧಿಕಾರಗಳ ಅಧ್ಯಕ್ಷರ ನೇಮಕಾತಿಯನ್ನು ವಜಾಗೊಳಿಸುವಂತೆ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಕಾರ್ಯದರ್ಶಿಯಿಂದ ಆದೇಶ ಹೊರಡಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News