ಬಿಎಸ್ ವೈ 'ಸಿಎಂ ಕುರ್ಚಿಗೆ ಕಂಟಕ' ತರುತ್ತಾ ಡಿನೋಟಿಫಿಕೇಶನ್ ಕೇಸ್..!?

ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಬೇಕಾಗಿರುವುದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿರುವ ಯಡಿಯೂರಪ್ಪನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಕೂಗು ಜೋರಾಗತೊಡಗಿದೆ.

Last Updated : Dec 24, 2020, 10:42 AM IST
  • ದೇವರಬೀಸನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ ಕುರಿತಂತೆ ತಮ್ಮ ವಿರುದ್ಧ ದಾಖಲಾಗಿದ್ದ ವಿಚಾರಣೆ ರದ್ದುಗೊಳಿಸಲು ಕೋರಿ ಯಡಿಯೂರಪ್ಪನವರು ಸಲ್ಲಿಸಿದ್ದ ಅರ್ಜಿಯನ್ನ ನಿರಾಕರಿಸಿದ ಹೈಕೋರ್ಟ್ ಏಕಸದಸ್ಯ ಪೀಠ
  • ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಬೇಕಾಗಿರುವುದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿರುವ ಯಡಿಯೂರಪ್ಪನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಕೂಗು ಜೋರಾಗತೊಡಗಿದೆ.
  • ಹೈಕೋರ್ಟ್ ಏಕಸದಸ್ಯ ಪೀಠ ಡಿನೋಟಿಫಿಕೇಶನ್ ಪ್ರಕರಣದ ವಿಚಾರಣೆಯನ್ನು ರದ್ದುಗೊಳಿಸಲು ನಿರಾಕರಿಸಿರುವುದರಿಂದ ಯಡಿಯೂರಪ್ಪನವರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ತರುವುದೇ ಈಗ ಉಳಿದಿರುವ ಏಕೈಕ ದಾರಿ
ಬಿಎಸ್ ವೈ 'ಸಿಎಂ ಕುರ್ಚಿಗೆ ಕಂಟಕ' ತರುತ್ತಾ ಡಿನೋಟಿಫಿಕೇಶನ್ ಕೇಸ್..!? title=

ಬೆಂಗಳೂರು: ದೇವರಬೀಸನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ ಕುರಿತಂತೆ ತಮ್ಮ ವಿರುದ್ಧ ದಾಖಲಾಗಿದ್ದ ವಿಚಾರಣೆ ರದ್ದುಗೊಳಿಸಲು ಕೋರಿ ಯಡಿಯೂರಪ್ಪನವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ನಿರಾಕರಿಸಿದೆ. ಹೀಗಾಗಿ ಈ ಪ್ರಕರಣದ ವಿಚಾರಣೆ ಲೋಕಾಯುಕ್ತ ನ್ಯಾಯಾಲಯದಲ್ಲಿ ಮುಂದುವರೆಯಲಿದೆ.

ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಬೇಕಾಗಿರುವುದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿರುವ ಯಡಿಯೂರಪ್ಪ(B S Yeddyurappa)ನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಕೂಗು ಜೋರಾಗತೊಡಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ಯಡಿಯೂರಪ್ಪನವರು ಪದತ್ಯಾಗ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

Farmers: ರೈತರಿಗೊಂದು 'ಸಿಹಿ ಸುದ್ದಿ' ನೀಡಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್..!

ಹೈಕೋರ್ಟ್ ಏಕಸದಸ್ಯ ಪೀಠ ಡಿನೋಟಿಫಿಕೇಶನ್ ಪ್ರಕರಣದ ವಿಚಾರಣೆಯನ್ನು ರದ್ದುಗೊಳಿಸಲು ನಿರಾಕರಿಸಿರುವುದರಿಂದ ಯಡಿಯೂರಪ್ಪನವರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ತರುವುದೇ ಈಗ ಉಳಿದಿರುವ ಏಕೈಕ ದಾರಿ ಎನ್ನಲಾಗಿದೆ. ಆದರೆ ಪ್ರಸ್ತುತ ಸುಪ್ರೀಂ ಕೋರ್ಟಿಗೆ ಚಳಿಗಾಲದ ರಜೆ ಇರುವುದರಿಂದ ಜನವರಿ 4ರ ನಂತರವೇ ಯಡಿಯೂರಪ್ಪನವರು ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.

ಹಳ್ಳಿಗಳಲ್ಲಿ ಕರೆಂಟ್ ಸಿಗೋದೇ ಡೌಟು: ಹೈ ಸ್ಪೀಡ್ ಇಂಟರ್‌ನೆಟ್‌ ಕೊಡ್ತಾರಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್‌

Trending News