ಎರಡೇ ದಿನದಲ್ಲಿ ವಿಧವೆಗೆ ಸರ್ಕಾರಿ ನೌಕರಿ ನೀಡಿ ಮಾನವೀಯತೆ ಮೆರೆದ ಜಿಲ್ಲಾಧಿಕಾರಿ...!

ತನ್ನ ಗಂಡ ಮೃತರಾದ ಹಿನ್ನೆಲೆಯಲ್ಲಿ ಅನುಕಂಪದ ಆಧಾರದ ಮೇಲೆ ನೌಕರಿ ಪಡೆಯಲು ಅರ್ಜಿ ಸಲ್ಲಿಸಿದ್ದ ಮಹಿಳೆಗೆ ಕೇವಲ ಎರಡೇ ದಿನದಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಉದ್ಯೋಗ ನೀಡಿ, ಸಂತ್ರಸ್ತ ಕುಟುಂಬಕ್ಕೆ ನೆರವಾಗಿದ್ದಾರೆ.

Last Updated : Jan 31, 2022, 12:19 AM IST
  • ತನ್ನ ಗಂಡ ಮೃತರಾದ ಹಿನ್ನೆಲೆಯಲ್ಲಿ ಅನುಕಂಪದ ಆಧಾರದ ಮೇಲೆ ನೌಕರಿ ಪಡೆಯಲು ಅರ್ಜಿ ಸಲ್ಲಿಸಿದ್ದ ಮಹಿಳೆಗೆ ಕೇವಲ ಎರಡೇ ದಿನದಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಉದ್ಯೋಗ ನೀಡಿ, ಸಂತ್ರಸ್ತ ಕುಟುಂಬಕ್ಕೆ ನೆರವಾಗಿದ್ದಾರೆ.
ಎರಡೇ ದಿನದಲ್ಲಿ ವಿಧವೆಗೆ ಸರ್ಕಾರಿ ನೌಕರಿ ನೀಡಿ ಮಾನವೀಯತೆ ಮೆರೆದ ಜಿಲ್ಲಾಧಿಕಾರಿ...! title=

ಬೆಂಗಳೂರು: ತನ್ನ ಗಂಡ ಮೃತರಾದ ಹಿನ್ನೆಲೆಯಲ್ಲಿ ಅನುಕಂಪದ ಆಧಾರದ ಮೇಲೆ ನೌಕರಿ ಪಡೆಯಲು ಅರ್ಜಿ ಸಲ್ಲಿಸಿದ್ದ ಮಹಿಳೆಗೆ ಕೇವಲ ಎರಡೇ ದಿನದಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಉದ್ಯೋಗ ನೀಡಿ, ಸಂತ್ರಸ್ತ ಕುಟುಂಬಕ್ಕೆ ನೆರವಾಗಿದ್ದಾರೆ.

ಇದನ್ನೂ ಓದಿ: Indian Team : ಟೀಂ ಇಂಡಿಯಾದ ಈ ಆಟಗಾರರ ವೃತ್ತಿಜೀವನಕ್ಕೆ ಅಡ್ಡಿಯಾದ KL Rahul! 

ಕಲಬುರಗಿ ತಾಲೂಕಿನ ಕುಸನೂರಿನ ಶ್ರೀಮತಿ ಶಿವಲಿಂಗಮ್ಮ ಗಂಡ ದಿ.ಮಾಳಿಂಗರಾಯ ಇವರೇ ನೌಕರಿ ಪಡೆದವರು. ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರವಹಿಸಿಕೊಂಡ ಜನವರಿ 25 ರಂದು ತಮ್ಮ ಕಚೇರಿ ಮುಂದೆ ಇಬ್ಬರು ಮಕ್ಕಳೊಂದಿಗೆ ಕಾದು ಕುಳಿತಿರುವುದನ್ನು ಕಂಡು ಸ್ವತ: ಜಿಲ್ಲಾಧಿಕಾರಿಗಳೇ ಮಹಿಳೆಯ ಬಳಿ ತೆರಳಿದರು. ಏನು ನಿಮ್ಮ ಸಮಸ್ಯೆ ಎಂದು ಕೇಳಿದಾಗ, ತನ್ನ ಗಂಡ ಆಳಂದ ತಾಲ್ಲೂಕಿನ ಖಜೂರಿ ನಾಡಾ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದು, ಕರ್ತವ್ಯದಲ್ಲಿದ್ದಾಗ ದಿನಾಂಕ: 16-03-2021ರಂದು ಹೃದಯ ಸಂಬಂಧಿ ಕಾಯಿಲೆಯಿಂದ ಮೃತಪಟ್ಟಿದ್ದು, ಅನುಕಂಪ ಆಧಾರದ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದೇನೆ ಎಂದರು.

ಇದನ್ನೂ ಓದಿ: IPL 2022 Mega Auction ನಲ್ಲಿ ಈ 2 ವೇಗದ ಬೌಲರ್‌ಗಳಿಗೆ ಭಾರಿ ಬೇಡಿಕೆ!

ಕೂಡಲೇ ಜಿಲ್ಲಾಧಿಕಾರಿಗಳು,ಈ ಮಹಿಳೆಗೆ 2 ದಿನದಲ್ಲಿ ನೌಕರಿ ಆದೇಶ ನೀಡಲು ಕ್ರಮವಹಿಸಬೇಕು.ಇಲ್ಲದಿದ್ದರೆ ಶಿಸ್ತು ಕ್ರಮ ಜರುಗಿಸುವುದಾಗಿ ಸ್ಥಳದಲ್ಲಿದ್ದ ಕಂದಾಯ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.ಇದೀಗ ಇಂದು ಮಹಿಳೆ ಕೋರಿದ ಸ್ಥಳವಾದ ಕಲಬುರಗಿ ತಹಸೀಲ್ದಾರ ಕಚೇರಿಯ ಖಾಲಿಯಿದ್ದ ದ್ವಿತೀಯ ದರ್ಜೆ ಸಹಾಯಕರ ಹುದ್ದೆ ನೇಮಕಾತಿಯ ಆದೇಶ ನೀಡಿ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ಮಾನವೀಯತೆ ಮೆರೆದಿದ್ದಾರೆ.

ಇದನ್ನೂ ಓದಿ : Rishabh Pant: ರಿಷಭ್ ಪಂತ್‌ನಿಂದ ಈ ಮೂವರು ಆಟಗಾರರ ವೃತ್ತಿಜೀವನಕ್ಕೆ ಕಂಟಕ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News