ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ ನಿಲುವು :ಬಸವರಾಜ ಬೊಮ್ಮಾಯಿ

ಮೇಕೆದಾಟು ಯೋಜನೆಗೆ ಡಿಎಂಕೆ ವಿರೋಧಿಸುವುದರಿಂದ ರಾಜ್ಯಕ್ಕೆ ಅನ್ಯಾಯವಾಗಲಿದೆ.ಕಾಂಗ್ರೆಸ್ ಈ ಬಗ್ಗೆ ದಂದ್ವ ನಿಲುವು ಅನುಸರಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.   

Written by - Ranjitha R K | Last Updated : Mar 22, 2024, 05:00 PM IST
  • ಕಾಂಗ್ರೆಸ್ ಡಿಎಂಕೆಯೊಂದಿಗಿನ ಮೈತ್ರಿಯಿಂದ ಹೊರಬರಬೇಕು - ಬೊಮ್ಮಾಯಿ
  • ಕಾಂಗ್ರೆಸ್ ವಿರುದ್ದ ಮಾಜಿ ಸಿಎಂ ಆಕ್ರೋಶ
  • ಮೇಕೆದಾಟು ಯೋಜನೆಗೆ ಡಿಎಂಕೆ ವಿರೋಧಿಸುವುದರಿಂದ ರಾಜ್ಯಕ್ಕೆ ಅನ್ಯಾಯ
ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ ನಿಲುವು :ಬಸವರಾಜ ಬೊಮ್ಮಾಯಿ title=

ಹುಬ್ಬಳ್ಳಿ: ಮೇಕೆದಾಟು ಯೋಜನೆ ಕುರಿತು ಕಾಂಗ್ರೆಸ್ ದ್ವಂದ್ವ ನೀತಿ ಅನುಸರಿಸುತ್ತಿದೆ. ಒಂದೆಡೆ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಪ್ರತಿಭಟಿಸಿದ ಕಾಂಗ್ರೆಸ್, ಅದನ್ನು ವಿರೋಧಿಸುವ ಡಿಎಂಕೆ ಜತೆಗೆ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿದೆ. ಹೀಗಾಗಿ ಕಾಂಗ್ರೆಸ್ ಡಿಎಂಕೆಯೊಂದಿಗೆ ಮಾಡಿಕೊಂಡ ಹೊಂದಾಣಿಕೆಯಿಂದ ಕಾಂಗ್ರೆಸ್ ಹೊರಬರಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.

ಮೇಕೆದಾಟು ಯೋಜನೆಗೆ ಡಿಎಂಕೆ ವಿರೋಧಿಸುವುದರಿಂದ ರಾಜ್ಯಕ್ಕೆ ಅನ್ಯಾಯವಾಗಲಿದೆ.ಕಾಂಗ್ರೆಸ್ ಈ ಬಗ್ಗೆ ದಂದ್ವ ನಿಲುವು ಅನುಸರಿಸುತ್ತಿದೆ. ಕಾಂಗ್ರೆಸ್ 2019ರಿಂದಲೂ ಡಿಎಂಕೆ ಜೊತೆಗೆ ಮೈತ್ರಿ ಮಾಡಿಕೊಂಡಿದೆ. ನಾವು ಆಗಲೇ ರಾಜ್ಯ ಕಾಂಗ್ರೆಸ್ ನಾಯಕರಿಗೆ ರಾಜ್ಯದಲ್ಲಿ ಪಾದಯಾತ್ರೆ ಮಾಡುವ ಬದಲು ಡಿಎಂಕೆ ಜೊತೆ ಮಾತುಕತೆ ನಡೆಸಿ ಎರಡೂ ರಾಜ್ಯಗಳಿಗೂ ಅನುಕೂಲವಾಗುವಂತೆ ಮಾಡಿ ಎಂದು ಹೇಳಿದ್ದೆವು. ಅವರು ಪಾದಯಾತ್ರೆ ಮಾಡುವ ರಾಜಕೀಯ ನಾಟಕ ಮಾಡಿದರು. ಪ್ರಕರಣ ಕೋರ್ಟ್ ನಲ್ಲಿದೆ ಎಂದು ಹೇಳಿದಾಗ ಇಲ್ಲ ಎಂದು ಸಿದ್ದರಾಮಯ್ಯ ವಾದ  ಮಾಡಿದ್ದರು. ಆದರೆ, ಈಗ ಅವರು ಅಧಿಕಾರದಲ್ಲಿದ್ದಾರೆ. ಪ್ರಕರಣ ಕೋರ್ಟ್ ನಲ್ಲಿದೆ ಎಂದು ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇದನ್ನೂ ಓದಿ : ಸೋಲುವ ಭೀತಿಯಿಂದ ಕೇಂದ್ರ ಸರ್ಕಾರ ವಿರೋಧ ಪಕ್ಷಗಳ ವಿರುದ್ಧ ಷಡ್ಯಂತ್ರ ನಡೆಸುತ್ತಿದೆ: ಡಿಸಿಎಂ ಡಿ.ಕೆ ಶಿವಕುಮಾರ್

 ಕೆ.ಎಸ್.ಈಶ್ವರಪ್ಪ ಅಸಮಾಧಾನಡ ಬಗ್ಗೆ ಮಾತನಾಡಿದ ಬೊಮ್ಮಾಯಿ,  ಈಶ್ವರಪ್ಪ ಅವರ ಅಸಮಾಧಾನ ಶಮನಗೊಳಿಸಲಾಗುವುದು, ಅವರಿಗೂ ಮೋದಿಯವರು ಪ್ರಧಾನಿಯಾಗಬೇಕು ಎಂಬ ಬಯಕೆ ಇದೆ. ಹೀಗಾಗಿ ಪಕ್ಷದ ವರಿಷ್ಠರು ಅವರೊಂದಿಗೆ ಮಾತನಾಡಿ, ಸಮಾಧಾನ ಪಡಿಸಲಿದ್ದಾರೆ ಎಂದು  ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಅವರೊಬ್ಬ ಪಕ್ಷದ ಹಿರಿಯ ನಾಯಕರಾಗಿದ್ದು, ಪಕ್ಷ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇಂತಹ ಸಂದರ್ಭಗಳಲ್ಲಿ ನೋವಾಗುವುದು ಸಹಜ. ಈಶ್ವರಪ್ಪ ಸೇರಿದಂತೆ ಕರಡಿ ಸಂಗಣ್ಣ, ಡಿ.ವಿ.ಸದಾನಂದಗೌಡ ಸೇರಿದಂತೆ ಮತ್ತಿತರೊಂದಿಗೆ ಪಕ್ಷದ ವರಿಷ್ಠರು ಮಾತುಕತೆ ಮಾಡಿ ಸಮಾಧಾನಪಡಿಸಲಿದ್ದಾರೆ ಎಂದರು. ಕಾಂಗ್ರೆಸ್ ನಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳು ಸಿಗುತ್ತಿಲ್ಲ. ಸಚಿವರ ಮಕ್ಕಳಿಗೆ ಟಿಕೆಟ್‌ ಕೊಡುವ ದುಸ್ಥಿತಿ ಬಂದಿದೆ ಎಂದು ವ್ಯಂಗ್ಯವಾಡಿದ್ದಾರೆ. 

ಇದನ್ನೂ ಓದಿ : Lok sabha elelction 2024 : ಸಮೀಕ್ಷೆಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದ್ದು, ಗೆಲುವು ಖಚಿತ..! ಸಿಎಂ ಭವಿಷ್ಯ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News