ಸಚಿವ ಸುಧಾಕರ್ ವಿರುದ್ಧ ಸುಳ್ಳು ಕೇಸ್ ದಾಖಲು, ರಾಜೀನಾಮೆ ನೀಡುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

DK Shivakumar : “ಸಚಿವ ಸುಧಾಕರ್ ಅವರ ವಿರುದ್ಧ ದಾಖಲಾಗಿರುವ ದೂರು ಸಿವಿಲ್ ಪ್ರಕರಣ. ಧಮಕಿಗೂ ಪಿಸಿಆರ್ ದೂರಿಗೂ ಬಹಳ ವ್ಯತ್ಯಾಸವಿದೆ. ಈ ವಿಚಾರವಾಗಿ ನಾನು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಇದೊಂದು ಸುಳ್ಳು ಕೇಸ್ ಎಂದು ತಿಳಿದು ಬಂದಿದೆ. ಹೀಗಾಗಿ ಸುಧಾಕರ್ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.  

Written by - Prashobh Devanahalli | Edited by - Savita M B | Last Updated : Sep 12, 2023, 04:05 PM IST
  • ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು ಹೇಳಿದ್ದಿಷ್ಟು
  • ಪಕ್ಷದ ಅಧ್ಯಕ್ಷನಾಗಿ ನಾನು ಪ್ರಕರಣದ ಬಗ್ಗೆ ಸಂಪೂರ್ಣ ವರದಿ ಪಡೆದಿದ್ದೇನೆ.
  • ಸುಧಾಕರ್ ಅವರು ಅನುಮತಿ ಮೇರೆಗೆ ಖಾಸಗಿ ಜಮೀನು ಖರೀದಿ ಮಾಡಿದ್ದಾರೆ.
ಸಚಿವ ಸುಧಾಕರ್ ವಿರುದ್ಧ ಸುಳ್ಳು ಕೇಸ್ ದಾಖಲು, ರಾಜೀನಾಮೆ ನೀಡುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ title=

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; “ಬಿಜೆಪಿ ಏನಾದರೂ ಕುತಂತ್ರ ಮಾಡಲಿ. ಡಿ. ಸುಧಾಕರ್ ಅವರದು ಸಿವಿಲ್ ಪ್ರಕರಣವಾಗಿದೆ. ಪಕ್ಷದ ಅಧ್ಯಕ್ಷನಾಗಿ ನಾನು ಪ್ರಕರಣದ ಬಗ್ಗೆ ಸಂಪೂರ್ಣ ವರದಿ ಪಡೆದಿದ್ದೇನೆ. ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದೇನೆ.

ಸುಧಾಕರ್ ಅವರು ಅನುಮತಿ ಮೇರೆಗೆ ಖಾಸಗಿ ಜಮೀನು ಖರೀದಿ ಮಾಡಿದ್ದಾರೆ. ಚುನಾವಣೆ ಸಮಯದಲ್ಲಿ ಬೇರೆಯವರು ಕಾಂಪೌಂಡ್ ಹಾಕಿದ್ದಾರೆ. ಹೀಗಾಗಿ ಇವರ ಕಡೆಯವರು ಜಾಗ ಭದ್ರ ಮಾಡಿಕೊಳ್ಳಲು ಮುಂದಾಗಿದ್ದಾರೆ. ಈ ವಿಚಾರವಾಗಿ ಪರಿಶಿಷ್ಟ ಜಾತಿಯವರು ದೂರು ನೀಡಿದ್ದು, ಪಿಸಿಆರ್ ಪ್ರಕಾರ ದೂರು ದಾಖಲಿಸಲಾಗಿದೆ. 

ಈ ದೂರು ನೀಡುವ ಸಂದರ್ಭದಲ್ಲಿ ಸುಧಾಕರ್ ಅವರು ಚಿತ್ರದುರ್ಗದಲ್ಲಿ ಇದ್ದರು. ಹೀಗಾಗಿ ಇದು ಸುಳ್ಳು ಕೇಸು ಎಂದು ನನಗೆ ಗೊತ್ತಿದೆ. ಎಲ್ಲ ಮಾಹಿತಿ ನಮ್ಮ ಬಳಿ ಇದೆ. ನಾಳೆ ಬೆಳಗ್ಗೆ ನನ್ನ ಮೇಲೂ ಸುಳ್ಳು ದೂರು ನೀಡಬಹುದು. ಬಿಜೆಪಿಯವರು ಸುಧಾಕರ್ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಕನಸು ಕಾಣುವ ಅಗತ್ಯವಿಲ್ಲ. ಯಾರಾದರೂ ತಪ್ಪು ಮಾಡಿದ್ದರೆ, ಕಾನೂನು ಮುಂದೆ ಯಾರೂ ದೊಡ್ಡವರಿಲ್ಲ. ಕಾನೂನಿಗೆ ಎಲ್ಲರೂ ಗೌರವ ನೀಡಬೇಕು.” 

ಇದನ್ನೂ ಓದಿ-ಶಕ್ತಿ ಯೋಜನೆಯಿಂದ ಖಾಸಗಿ ವಾಹನ ಬಂದ್ ಮಾಡಲಾಗಿದೆ ಎಂದ ಪ್ರಹ್ಲಾದ್ ಜೋಷಿ

ಒಂದು ನಿಮಿಷದ ವಿಡಿಯೋ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ಧಮಕಿ ಪ್ರಕರಣಕ್ಕೂ ಪಿಸಿಆರ್ ಪ್ರಕರಣಕ್ಕೂ ಬಹಳ ವ್ಯತ್ಯಾಸವಿದೆ” ಎಂದು ಹೇಳಿದರು. 

ನಮ್ಮಲ್ಲಿ ನೀರಿಲ್ಲ' ಬಿಡುವುದು ಎಲ್ಲಿಂದ?:
ಕಾವೇರಿ ವಿಚಾರವಾಗಿ ಕೇಳಿದಾಗ, “ಈ ವಿಚಾರವಾಗಿ ಈಗ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದು, ನಮ್ಮಲ್ಲಿ ಮಳೆ ಕೊರತೆಯಿಂದಾಗಿ ಅಗತ್ಯ ಪ್ರಮಾಣದ ನೀರಿಲ್ಲ. ನಾವು ಕುಡಿಯುವ ಉದ್ದೇಶಕ್ಕೆ ನೀರು ಹೊಂದಿಸಿಕೊಳ್ಳುವುದಕ್ಕೆ ಕಷ್ಟವಿದೆ, ಈ ವಾಸ್ತವಾಂಶವನ್ನು ನಾವು ತಿಳಿಸುತ್ತೇವೆ. ನಾವು ಕುಡಿಯುವ ನೀರು ಹೊಂದಿಸಿಕೊಳ್ಳಲು ಅವಕಾಶ ನೀಡಿ ಎಂದು ಪ್ರಾಧಿಕಾರದ ಮುಂದೆ ಮನವಿ ಮಾಡುತ್ತೇವೆ” ಎಂದರು.

12ರ ನಂತರ ನೀರು ನಿಲ್ಲಿಸುತ್ತೀರಾ ಎಂದು ಕೇಳಿದಾಗ, “ಈಗ ನೀರು ಹೋಗುತ್ತಿಲ್ಲ, ಇನ್ನು ಬಂದ್ ಮಾಡುವುದು ಎಲ್ಲಿ. ಮಳೆ ಬರಲಿ ಎಂದು ನೀವೆಲ್ಲರೂ ಪ್ರಾರ್ಥನೆ ಮಾಡಿ” ಎಂದು ಹೇಳಿದರು.

ಇದನ್ನೂ ಓದಿ-"ರಾಜ್ಯ ಬಿಜೆಪಿ ಸಂಸದರು ಪ್ರಧಾನಿಗಳ ಭೇಟಿಗೆ ಸಮಯ ನಿಗದಿಪಡಿಸಲಿ"

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News