ಬೆಂಗಳೂರು: ಸಂಪೂರ್ಣ ಸಾಲ ಮನ್ನಾಗೆ ಒತ್ತಾಯಿಸಿ ರೈತರ ಪ್ರತಿಭಟನೆ

ಸಂಪೂರ್ಣ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿ ಸೋಮವಾರ ರೈತರು ಪ್ರತಿಭಟನೆ ನಡೆಸಿದರು. 

Updated: Jul 9, 2018 , 04:59 PM IST
ಬೆಂಗಳೂರು: ಸಂಪೂರ್ಣ ಸಾಲ ಮನ್ನಾಗೆ ಒತ್ತಾಯಿಸಿ ರೈತರ ಪ್ರತಿಭಟನೆ

ಬೆಂಗಳೂರು: ಸಾಲ ಮನ್ನಾ ವಿಚಾರದಲ್ಲಿ ರೈತರಿಗೆ ಅನ್ಯಾಯವಾಗಿದೆ. ಸಂಪೂರ್ಣ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿ ಸೋಮವಾರ ರೈತರು ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. 

ಕರ್ನಾಟಕ ಸರ್ಕಾರ ನಂಬಿಕೆ ದ್ರೋಹ ಮಾಡಿದೆ ಎಂದು ಆರೋಪಿಸಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ವಿಧಾನಸೌಧ ಚಲೋ ಜಾಥಾ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕು ಎಂದು ಪ್ರತಿಭಟಿಸಿ ವಿಧಾನಸೌಧ ಮುತ್ತಿಗೆ ಹಾಕಲು ಯತ್ನಿಸಿದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದೇ ಸಂದರ್ಭದಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿಯಾಗಲು ರೈತ ನಿಯೋಗ ಮುಂದಾದಾಗ ಬೇರೆ  ಪ್ರಮುಖ ಕೆಲಸವಿದೆ ಎಂದು ವಿಧಾನಸೌಧದಿಂದ ಸಿಎಂ ನಿರ್ಗಮಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಅಸಮಾಧಾನಗೊಂಡಿರುವ ರೈತರ ಮುಖಂಡರು ರೈತರ ಸಾಲಮನ್ನಾಕ್ಕಿಂತ ಬೇರೆ ಪ್ರಮುಖ ಕೆಲಸವಿದೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ನಾಳೆಯಿಂದ ರಾಜ್ಯಾದ್ಯಂತ ರಸ್ತೆ ತಡೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.