ಸಿಎಂಗೆ ತೀಕ್ಷ್ಣ ತಿರುಗೇಟು ಕೊಟ್ಟ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಉಚಿತ, ಖಚಿತ ಎಂದು ಸುಳ್ಳು ಹೇಳಿಕೊಂಡು ಓಡಾಡಿ ಅಧಿಕಾರಕ್ಕೆ ಬಂದವರು, ಇವತ್ತು ಜನರನ್ನು ವಿದ್ಯುತ್ ದುರ್ಬಳಕೆ ಮಾಡಿಕೊಳ್ಳಲು ಪ್ರತಿಪಕ್ಷಗಳು ಪ್ರಚೋದಿಸುತ್ತಿವೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಹರಿಹಾಯ್ದರು.  

Written by - Prashobh Devanahalli | Edited by - Savita M B | Last Updated : Jun 6, 2023, 04:20 PM IST
  • ಮುಖ್ಯಮಂತ್ರಿಗಳಿಂದ ಜನರನ್ನು ಎತ್ತಿಕಟ್ಟುವ ಆರೋಪ
  • ವಿದ್ಯುತ್ ಬಳಕೆ ಬಗ್ಗೆ ವಿರೋಧ ಪಕ್ಷಗಳು ಜನರನ್ನು ದಿಕ್ಕು ತಪ್ಪಿಸುತ್ತಿವೆ
  • ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ಜನರನ್ನು ಎತ್ತಿಕಟ್ಟುತ್ತಿವೆ
ಸಿಎಂಗೆ ತೀಕ್ಷ್ಣ ತಿರುಗೇಟು ಕೊಟ್ಟ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ title=

HD Kumarswamy : ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಲ್ಲಿ ಜೆಪಿ ಭವನದಲ್ಲಿ ಮಾಜಿ ಪ್ರಧಾನಿಗಳಾದ ಹೆಚ್. ಡಿ.ದೇವೇಗೌಡರ ಸಮಕ್ಷಮದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು. ವಿದ್ಯುತ್ ಬಳಕೆ ಬಗ್ಗೆ ವಿರೋಧ ಪಕ್ಷಗಳು ಜನರನ್ನು ದಿಕ್ಕು ತಪ್ಪಿಸುತ್ತಿವೆ ಎಂದು ಮುಖ್ಯಮಂತ್ರಿಗಳ ಹೇಳಿಕೆ ಗಮನಿಸಿದ್ದೇನೆ. ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ಜನರನ್ನು ಎತ್ತಿಕಟ್ಟುತ್ತಿವೆ ಅಂತ ಅವರು ಹೇಳಿದ್ದಾರೆ. ಅಂಥ ಹೇಳಿಕೆ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ ಎಂದು ಅವರು ಕಿಡಿಕಾರಿದರು.

ಇದಕ್ಕೆಲ್ಲಾ ವೇದಿಕೆ ಸಿದ್ದ ಮಾಡಿಕೊಟ್ಟಿದ್ದೇ ನೀವು. ರಾಜ್ಯದ ಜನಕ್ಕೆ ಗ್ಯಾರಂಟಿ ಬಗ್ಗೆ ಸಹಿ ಮಾಡಿ ಕೊಟ್ಟಿದ್ದೀರಿ. ಸುಳ್ಳು ಹೇಳಿ ಮತ ಪಡೆದಿರಿ. ಈಗ ನಿಮಗೆ ಅದರ ಸಾಧಕ ಭಾದಕ ಅರ್ಥ ಆಗ್ತಾ ಇದೆ. ಮೊದಲೇ ಈ ಬಗ್ಗೆ ಯೋಚನೆ ಮಾಡಿರಲಿಲ್ಲವಾ? ಪರಿಜ್ಞಾನ ಇರಲಿಲ್ಲವಾ? ಈಗ ಷರತ್ತು ಎನ್ನುತ್ತಿದ್ದಾರೆ. ಇವರಿಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ ಎಂದು ಮಾಜಿ ಮುಖ್ಯಮಂತ್ರಿ ಅವರು ಖಾರವಾಗಿ ಅವರು ಪ್ರಶ್ನಿಸಿದರು.

ಇದನ್ನೂ ಓದಿ-ತಮ್ಮನ ಮೇಲಿನ ಸೇಡು; ಹಂತಕರ ಕೈಯಲ್ಲಿ ಬಲಿಯಾಗಿದ್ದು ಮಾತ್ರ ಅಣ್ಣ !

ಈಗಿನ ಮುಖ್ಯಮಂತ್ರಿಗಳು ಸರ್ವವನ್ನೂ ಬಲ್ಲವರು. ಈಗಾಗಲೇ 13 ಬಜೆಟ್ ಗಳನ್ನು ಮಂಡಿಸಿದ್ದಾರೆ. ಇನ್ನೇನು 14ನೇ ಬಜೆಟ್ ಅನ್ನೂ ಮಂಡಿಸಲಿದ್ದಾರೆ. ರಾಜ್ಯದ ಹಣಕಾಸು ಬಗ್ಗೆ, ಆರ್ಥಿಕತೆ ಬಗ್ಗೆ ಅವರಿಂತ ಬಲ್ಲ ಜ್ಞಾನಿಗಳು ಯಾರಿದ್ದಾರೆ? ಮುಂದೇನು ಮಾಡಬೇಕು ಎನ್ನುವುದು ಅವರಿಗೆ ಗೊತ್ತಿರಬೇಕು. ಅದು ಬಿಟ್ಟು ಜನರನ್ನು ಪ್ರತಿಪಕ್ಷಗಳು ಎತ್ತಿಕಟ್ಟುವ ಕೆಲಸ ಮಾಡುತ್ತಿವೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಅವರು ಹೇಳಿದರು.

ಈಗ ಬಾಡಿಗೆದಾರರ ಕಥೆ ಏನು?

ಎಲ್ಲರಿಗೂ ಉಚಿತ, ನಿಶ್ಚಿತ, ಖಚಿತ ಅಂದವರು ನೀವೇ ಅಲ್ಲವೇ? ನಾನು ಪ್ರತಿಪಕ್ಷದಲ್ಲಿ ಕೂತಿರುವುದು ಸರಕಾರ ಮಾಡುವ ಪ್ರತಿ ಜನವಿರೋಧಿ ಕೆಲಸಗಳಿಗೆ ಕೈ ಎತ್ತುವುದಕ್ಕಲ್ಲ. ಸರಕಾರದ ತಪ್ಪುಗಳನ್ನು ಎತ್ತಿ ತೋರಿಸಿ ಸಮರ ಸಾರುವುದಕ್ಕೆ. ನಮ್ಮದು ನುಡಿದಂತೆ ನಡೆಯುವ ಸರಕಾರ ಎಂದರು, ನುಡಿದಂತೆ ಎಲ್ಲಿ ನಡೆಯುತ್ತಿದೆ? ಈಗ ಉಚಿತ ವಿದ್ಯುತ್ ಅನ್ನು ಬಾಡಿಗೆದಾರರಿಗೆ  ಕೊಡುವುದಿಲ್ಲ ಎನ್ನುತ್ತಿದೆ. ಹಾಗಾದರೆ ಅವರ ಪಾಡೇನು? ಎಂದರು ಮಾಜಿ ಮುಖ್ಯಮಂತ್ರಿಗಳು

ಬೆಂಗಳೂರು ನಗರಾಭಿವೃದ್ಧಿ ಸಚಿವರು ಸ್ನೇಹಕ್ಕೂ ಸಿದ್ದ, ಯುದ್ದಕ್ಕೂ ಸಿದ್ದ ಅಂದಿದ್ದಾರೆ. ನಾವು ಇಲ್ಲಿ ಕೂತಿರೋದು ಸ್ನೇಹ ಮಾಡೋಕ್ಕಲ್ಲ. ಜನರಿಗೆ ಕಷ್ಟ ಬಂದರೆ ಯುದ್ಧ ಮಾಡುವುದಕ್ಕೆ ಹಿಂಜರಿಯುವುದಿಲ್ಲ. ನಾವು ಕೈಕಟ್ಟ ಕೂರಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು.

ವಿದ್ಯುತ್ ದರ ಏರಿಕೆಗೆ ಸಂಬಂಧಿಸಿ ಬಿಜೆಪಿ ನಾಯಕರು ಇಡೀ ರಾಜ್ಯದಲ್ಲಿ ಸೋಮವಾರ ಧರಣಿ ಮಾಡಿದ್ದಾರೆ. ಇವರು ಯಾವ ಕಾರಣಕ್ಕಾಗಿ ಧರಣಿ ಪ್ರತಿಭಟನೆ ಮಾಡಿದ್ದಾರೆ ಎನ್ನುವುದೇ ಸೋಜಿಗ. ಬಿಜೆಪಿ ಸರಕಾರದ ಕಾಲದಲ್ಲಿಯೇ ವಿದ್ಯುತ್ ದರ ಹೆಚ್ಚಳಕ್ಕೆ ಅಷ್ಟು ಎಂದಿದ್ದು.  ಇವತ್ತು ನೋಡಿದರೆ ಪ್ರತಿಭಟನೆ ಅಂತ ಕಣ್ಣೊರೆಸುವ ನಾಟಕ ನಾಟಕ ಆಡುತ್ತಿದ್ದಾರೆ. ಜನರು ಎರಡೂ ರಾಷ್ಟ್ರೀಯ ಪಕ್ಷಗಳ ಈ ನಡವಳಿಕೆ ಗಮನಿಸಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ರಾಷ್ಟ್ರೀಯ ಪಕ್ಷಕ್ಕೆ ಮತ ಹಾಕಿದ ಪರಿಣಾಮ ಏನು ಎನ್ನುವುದು ಜನರಿಗೆ ಚೆನ್ನಾಗಿ ಅರ್ಥ ಆಗಿದೆ. ಎಲ್ಲದಕ್ಕೂ ದೆಹಲಿಗೆ ಅರ್ಜಿ ಹಿಡಿದುಕೊಂಡು ದೆಹಲಿಗೆ ಹೋಗಬೇಕಿದೆ ಎಂದು ಲೇವಡಿ ಮಾಡಿದ ಮಾಜಿ ಮುಖ್ಯಮಂತ್ರಿಗಳು, ಐದು ಗ್ಯಾರಂಟಿ ಗಳ ಬಗ್ಗೆ ನಾನು ಈಗಲೇ ಚರ್ಚೆ ಮಾಡಲ್ಲ. ನಾನು ಕಾಯುತ್ತೇನೆ. ಕಾಂಗ್ರೆಸ್ ನವರು ಗ್ಯಾರಂಟಿ ಕೊಟ್ಟಿದ್ದು ತಪ್ಪಲ್ಲ, ಆದರೆ ಈಡೇರಿಸಬೇಕು. ಅದು ಆಡಳಿತ ಪಕ್ಷದ ಹೊಣೆ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಇದನ್ನೂ ಓದಿ-ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಮುಂದಿನ 3 ಗಂಟೆಗಳ ಕಾಲ ಭಾರೀ ಮಳೆ

ಈ ಸರಕಾರಕ್ಕೆ ನಮ್ಮ ಬೆಂಬಲ, ವಿರೋಧ ವಿಷಯಾಧಾರಿತ ಆಗಿರುತ್ತದೆ. ನೀರಾವರಿ ಯೋಜನೆಗಳನ್ನು ಎಲ್ಲವನ್ನೂ ಈಡೇರಿಸಬೇಕು. ನೀರಾವರಿಗೆ ಸಂಬಂಧಿಸಿದಂತೆ ಈ ಸರಕಾರ ಮುಂದಿನ ಐದು ವರ್ಷಗಳ ಕಾಲ ಯಾವ ರೀತಿ ಕೆಲಸ ಮಾಡುತ್ತೆದೆಯೋ ನೋಡೋಣ. ಮೇಕೆದಾಟು, ಮಹಾದಾಯಿ ಯೋಜನೆಗಳನ್ನು ಸಂಪೂರ್ಣ ಮಾಡುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ. ಇದಕ್ಕೆ ನಮ್ಮ ಬೆಂಬಲ ಇದೆ. ಇದನ್ನು ಬಿಟ್ಟು ಬರೀ ಹೇಳಿಕೆಗೆ ಸೀಮಿತವಾದರೆ ನಾವು ಮತ್ತೆ ಜನರನ್ನು ಜಾಗೃತ ಗೊಳಿಸುವ ಬಗ್ಗೆ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

ಮಾಜಿ ಸಂಸದ ಕುಪೇಂದ್ರ ರೆಡ್ಡಿ, ಪಕ್ಷದ ಹಿರಿಯ ನಾಯಕ, ಶಾಸಕ ವೆಂಕಟಶಿವಾರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಬಿಎಂ ಫಾರೂಖ್, ಟಿ.ಎ.ಶರವಣ, ಇಂಚರ ನಾರಾಯಣಸ್ವಾಮಿ, ಪಕ್ಷದ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಶಾಸಕರಾದ ಮೇಲೂರು ರವಿ, ಸಮೃದ್ಧಿ ಮಂಜುನಾಥ್, ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಶ್ರೀನಿವಾಸ ಮೂರ್ತಿ, ಹಿರಿಯ ಮುಖಂಡರಾದ ಜವರಾಯ ಗೌಡ, ಸಿಎಂಆರ್ ಶ್ರೀನಾಥ್, ಮುನೇಗೌಡ, ಬಂಗಾರಪೇಟೆ ಮಲ್ಲೇಶ್ ಮುಂತಾದವರು ಹಾಜರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News