Kasturi Rangan: ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್​ಗೆ ಲಘು ಹೃದಯಾಘಾತ!

Kasthuri Rangan: ಕಸ್ತೂರಿ ರಂಗನ್ ಅವರಿಗೆ ಲಘು ಹೃದಯಾಘಾತವಾಗಿರುವ ವಿಷಯ ತಿಳಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ‘ಶೀಘ್ರವಾಗಿ ಅವರು ಗುಣಮುಖರಾಗಲಿದೆ’ ಎಂದು ಹಾರೈಸಿದ್ದಾರೆ.

Written by - Prashobh Devanahalli | Edited by - Puttaraj K Alur | Last Updated : Jul 10, 2023, 05:46 PM IST
  • ಇಸ್ರೋದ ಮಾಜಿ ಅಧ್ಯಕ್ಷ, ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್‌ಗೆ ಲಘು ಹೃದಯಾಘಾತ
  • ಶ್ರೀಲಂಕಾದ ರಾಜಧಾನಿ ಕೊಲಂಬೋನಿಂದ ಏರ್‍ಲಿಫ್ಟ್ ಮೂಲಕ ಬೆಂಗಳೂರಿಗೆ ಕರೆತರಲಾಗುತ್ತಿದೆ
  • ಜೀರೋ ಟ್ರಾಫಿಕ್ ಮೂಲಕ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ನೀಡಲು ರವಾನಿಸಲಾಗುತ್ತದೆ
Kasturi Rangan: ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್​ಗೆ ಲಘು ಹೃದಯಾಘಾತ! title=
ಕಸ್ತೂರಿ ರಂಗನ್‌ಗೆ ಲಘು ಹೃದಯಾಘಾತ!

ಬೆಂಗಳೂರು: ಇಸ್ರೋದ ಮಾಜಿ ಅಧ್ಯಕ್ಷ, ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್‌ಗೆ ಲಘು ಹೃದಯಾಘಾತವಾಗಿದ್ದು, ಶ್ರೀಲಂಕಾದ ರಾಜಧಾನಿ ಕೊಲಂಬೋನಿಂದ ಏರ್‍ಲಿಫ್ಟ್ ಮೂಲಕ ಬೆಂಗಳೂರಿಗೆ ಕರೆತರಲಾಗುತ್ತಿದೆ. ನಗರಕ್ಕೆ ಬಂದಕೂಡಲೇ ಅವರನ್ನು ಜೀರೋ ಟ್ರಾಫಿಕ್ ಮೂಲಕ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ನೀಡಲು ರವಾನಿಸಲಾಗುತ್ತದೆ.

ಕಸ್ತೂರಿ ರಂಗನ್ ಅವರು 1 ದಶಕದ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ಶ್ರೀಲಂಕಾಕ್ಕೆ ತೆರಳಿದ್ದ ಅವರಿಗೆ ಕೊಲಂಬೋದಲ್ಲಿ ಪ್ರಯಾಣದ ವೇಳೆ ಲಘು ಹೃದಯಾಘಾತವಾಗಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಟೊಮ್ಯಾಟೊಗೆ ಬಂಗಾರದ ಬೆಲೆ: ಕಳ್ಳರಿಂದ ಟೊಮ್ಯಾಟೊ ತುಂಬಿದ ವಾಹನ ಹೈಜಾಕ್..!

ಹೆಚ್ಚಿನ ಚಿಕಿತ್ಸೆಗಾಗಿ ಏರ್‍ಲಿಫ್ಟ್ ಮೂಲಕ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ. ವಿಮಾನ ನಿಲ್ದಾಣದಿಂದ ಜೀರೋ ಟ್ರಾಫಿಕ್ ಮೂಲಕ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ನೀಡಲು ರವಾನಿಸಲಾಗುತ್ತದೆ. ಸಂಜೆ 5.30ಕ್ಕೆ ಎಚ್ಎಎಲ್ ಏರ್ಪೋರ್ಟ್‌ಗೆ ಬರಲಿದ್ದಾರೆಂದು ತಿಳಿದುಬಂದಿದೆ. ಖ್ಯಾತ ಹೃದಯತಜ್ಞ ಡಾ.ದೇವಿಶೆಟ್ಟಿಯವರು ಕಸ್ತೂರಿ ರಂಗನ್ ಆರೋಗ್ಯದ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆಂದು ತಿಳಿದು ಬಂದಿದೆ.

ಇನ್ನು ಕಸ್ತೂರಿ ರಂಗನ್ ಅವರಿಗೆ ಲಘು ಹೃದಯಾಘಾತವಾಗಿರುವ ವಿಷಯ ತಿಳಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ‘ಶೀಘ್ರವಾಗಿ ಅವರು ಗುಣಮುಖರಾಗಲಿದೆ’ ಎಂದು ಹಾರೈಸಿದ್ದಾರೆ. 83 ವರ್ಷದ ಕಸ್ತೂರಿ ರಂಗನ್ ಅವರಿಗೆ ಭಾರತ ಸರ್ಕಾರದಿಂದ ನೀಡಲಾಗುವ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ನೀಡಿ ಗೌರವಿಸಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಬಂದ ಬಳಿಕ ರಾಜ್ಯದಲ್ಲಿ ಪಾಕಿಸ್ತಾನದ ಧ್ವಜ ಹಾರಾಡುತ್ತಿದೆ: ಯತ್ನಾಳ್ ಆರೋಪ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News