ಬಾದಾಮಿ, ಕೆರೂರು ಪಟ್ಟಣ ಮಾರ್ಗ ಮಧ್ಯದ 18 ಗ್ರಾಮಗಳಿಗೆ ಸಿಹಿಸುದ್ದಿ!

ಬಾದಾಮಿ ಕ್ಷೇತ್ರದ ಜನರ ಹಲವಾರು ವರ್ಷಗಳ ಬೇಡಿಕೆ.

Last Updated : Dec 20, 2018, 09:26 AM IST
ಬಾದಾಮಿ, ಕೆರೂರು ಪಟ್ಟಣ ಮಾರ್ಗ ಮಧ್ಯದ 18 ಗ್ರಾಮಗಳಿಗೆ ಸಿಹಿಸುದ್ದಿ! title=

ಬಾದಾಮಿ, ಕೆರೂರು ಪಟ್ಟಣ ಹಾಗೂ ಮಾರ್ಗ ಮಧ್ಯದ 18 ಗ್ರಾಮಗಳಿಗೆ ಆಲಮಟ್ಟಿ ಜಲಾಶಯ ಮೂಲದಿಂದ ಶಾಶ್ವತವಾಗಿ ಕುಡಿಯುವ ನೀರು ಪೂರೈಸುವ ಮಹತ್ವದ ಯೋಜನೆಗೆ ರಾಜ್ಯ ಸಚಿವ ಸಂಪುಟ ನಿನ್ನೆ ಒಪ್ಪಿಗೆ ನೀಡಿದೆ. 

ಬಾದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಅವರ ಮನವಿ ಮೇರೆಗೆ 220 ಕೋಟಿ ರೂ.ಗಳ ಈ ಯೋಜನೆಯನ್ನು ರೂಪಿಸಲಾಗಿತ್ತು. 

ಬಾದಾಮಿ, ಕೆರೂರು ಹಾಗೂ ಆ ಭಾಗದ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೀವ್ರ ಅಭಾವವಿದೆ. ಈ ಹಿನ್ನಲೆಯಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆ ರೂಪಿಸಲು ಅಧಿಕಾರಿಗಳಿಗೆ ಸೂಚಿಸಿದ್ದರು.

ಸಿದ್ದರಾಮಯ್ಯ ಯೋಜನೆ ಸಂಬಂಧ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದ್ದರು. ಸಚಿವ ಸಂಪುಟ ಸಭೆಯಲ್ಲಿ ಯೋಜನೆಗೆ ಒಪ್ಪಿಗೆ ದೊರೆಯುವುದರೊಂದಿಗೆ ಬಾದಾಮಿ ಕ್ಷೇತ್ರದ ಜನರ ಹಲವಾರು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ.

Trending News