"ಎನ್ಡಿಎಗೆ ಜೆಡಿಎಸ್ ಸೇರುವ ಕುಮಾರಸ್ವಾಮಿ ನಿರ್ಧಾರದಿಂದ ದೊಡ್ಡ ಶಕ್ತಿ ಬಂದಂತಾಗಿದೆ"

ಎನ್ ಡಿಎ ಗೆ ಜೆಡಿಎಸ್ ಸೇರುವ ಕುಮಾರಸ್ವಾಮಿ ನಿರ್ಧಾರದಿಂದ ರಾಜ್ಯದಲ್ಲಿ ದೊಡ್ಡ ಶಕ್ತಿ ಬಂದಂತಾಗಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

Written by - Manjunath N | Last Updated : Sep 23, 2023, 11:38 AM IST
  • ಬೆಂಗಳೂರಿಗೆ ಕುಡಿಯುವ ನೀರು ಕೊಡದೆ ಇರುವ ಪರಿಸ್ಥಿತಿ ಇದೆ.ನಾವು ನೀರು ಬಿಡುವ ಪರಿಸ್ಥಿತಿ ಯಲ್ಲಿ ಇಲ್ಲ.
  • ಇದರ ಬಗ್ಗೆ ಸುಪ್ರೀಂಕೋರ್ಟ್ ಮನವರಿಕೆ ಮಾಡಿಕೊಡುವ ಎಲ್ಲಾ ಪ್ರಯತ್ನ ವನ್ನು ಸರ್ಕಾರ ಮಾಡಬೇಕು ಎಂದರು.
 "ಎನ್ಡಿಎಗೆ ಜೆಡಿಎಸ್ ಸೇರುವ ಕುಮಾರಸ್ವಾಮಿ ನಿರ್ಧಾರದಿಂದ ದೊಡ್ಡ ಶಕ್ತಿ ಬಂದಂತಾಗಿದೆ" title=

ಬೆಂಗಳೂರು: ಎನ್ ಡಿಎ ಗೆ ಜೆಡಿಎಸ್ ಸೇರುವ ಕುಮಾರಸ್ವಾಮಿ ನಿರ್ಧಾರದಿಂದ ರಾಜ್ಯದಲ್ಲಿ ದೊಡ್ಡ ಶಕ್ತಿ ಬಂದಂತಾಗಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕುಮಾರಸ್ವಾಮಿ ಅವರ ಈ ನಿರ್ಧಾರಿಂದ ಎಲ್ಲಾ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲು ಸಹಕಾರಿಯಾಗುತ್ತದೆ ಎಂದು ಅವರು ಹೇಳಿದರು.ಇದೆ ವೇಳೆ ಕಾವೇರಿ ವಿಚಾರವಾಗಿ ಮಾತನಾಡುತ್ತಾ "ಕಾವೇರಿ ನದಿ ನೀರಿನ ವಿಷಯ ದಲ್ಲಿ ನಾವು ಮೇಲ್ಮನವಿ ಸಲ್ಲಿಸಬೇಕು,ಇಲ್ಲಿಗೆ ತಜ್ಞರ ತಂಡವನ್ನು ಕಳುಹಿಸಿಕೊಡಲಿ ಜಲಾಶಯದ ನೀರಿನ ಮಟ್ಟ ವನ್ನು ನೋಡಲಿ ಎಂದು ಅವರು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್ ಗೆ ಅಸತ್ಯವೇ ಅಷ್ಟೈಶ್ವರ್ಯ! ಆತ್ಮವಂಚನೆಯೇ ಅಧಿಕಾರದ ಮೂಲ ಬಂಡವಾಳ-ಜೆಡಿಎಸ್

ಬೆಂಗಳೂರಿಗೆ ಕುಡಿಯುವ ನೀರು ಕೊಡದೆ ಇರುವ ಪರಿಸ್ಥಿತಿ ಇದೆ.ನಾವು ನೀರು ಬಿಡುವ ಪರಿಸ್ಥಿತಿ ಯಲ್ಲಿ ಇಲ್ಲ.ಇದರ ಬಗ್ಗೆ ಸುಪ್ರೀಂಕೋರ್ಟ್ ಮನವರಿಕೆ ಮಾಡಿಕೊಡುವ ಎಲ್ಲಾ ಪ್ರಯತ್ನ ವನ್ನು ಸರ್ಕಾರ ಮಾಡಬೇಕು ಎಂದರು.

ಇದನ್ನೂ ಓದಿ: ಐತಿಹಾಸಿಕ ಮಾದಗಮಾಸೂರು ಕೆರೆಗೆ ಬಾಗಿನ ಅರ್ಪಿಸಿದ ಶಾಸಕ!

ಇನ್ನೂ ಕೇಂದ್ರ ಸರ್ಕಾರದ ಮಧ್ಯ ಪ್ರವೇಶಕ್ಕೆ ಸರ್ಕಾರ ಆಗ್ರಹಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಈಗಾಗಲೇ ನಮ್ಮ ಕುಮಾರಸ್ವಾಮಿ ಯವರು ಕಾವೇರಿ ಬಗ್ಗೆ ದೆಹಲಿಯಲ್ಲಿ ಚರ್ಚೆ ಮಾಡಿದ್ದಾರೆ ಇದರ ಬಗ್ಗೆಎಲ್ಲರಿಗೂ ಮಾಹಿತಿ ಇದೆ, ಎಲ್ಲರು ಇವರ ಪರವಾಗಿ ಇದ್ದಾರೆ ವಿನಹ ಯಾರು ಕೂಡ ಇದರ ವಿರೋಧ ಇಲ್ಲ,ಇದಕ್ಕೆ ಒಂದೇ ಮಾರ್ಗ,ಮೇಲ್ಮನವಿ ಸಲ್ಲಿಸಬೇಕು.ತಜ್ಞರ ನ್ನು ಕಳುಹಿಸಿ ಇಲ್ಲಿನ ವಾಸ್ತವ ಸ್ಥಿತಿಯನ್ನು ಅವಲೋಕಿಸಬೇಕು.ಆ ನಂತರ ನೀವು ಏನು ತೀರ್ಮಾನ ತಗೊತ್ತೀರೋ ಅದಕ್ಕೆ ಬದ್ದರಾಗು ತೀರ್ಮಾನ ಮಾಡ್ತೀವಿ ಎಂದು ಹೇಳಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News