ಹಲ್ಲೆ ಪ್ರಕರಣ; ಹ್ಯಾರಿಸ್ ಪುತ್ರ ಸೇರಿ 7 ಆರೋಪಿಗಳು ಸಿಸಿಬಿ ವಶಕ್ಕೆ

ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರೀಸ್ ಪುತ್ರ ಮೊಹಮದ್ ನಳಪಾಡ್'ನನ್ನು 8ನೇ ಎಪಿಎಂಸಿ ನ್ಯಾಯಾಲಯ 2 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿದೆ.

Last Updated : Feb 19, 2018, 07:02 PM IST
ಹಲ್ಲೆ ಪ್ರಕರಣ; ಹ್ಯಾರಿಸ್ ಪುತ್ರ ಸೇರಿ 7 ಆರೋಪಿಗಳು ಸಿಸಿಬಿ ವಶಕ್ಕೆ  title=

ಬೆಂಗಳೂರು : ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಪೋಲಿಸರ ವಶದಲ್ಲಿರುವ ಶಾಂತಿನಗರದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರೀಸ್ ಪುತ್ರ ಮೊಹಮದ್ ನಳಪಾಡ್'ನನ್ನು 8ನೇ ಎಪಿಎಂಸಿ ನ್ಯಾಯಾಲಯ 2 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿದೆ.

ಪ್ರಕರಣದ ಬಗ್ಗೆ ಹೆಚ್ಚಿನ ವಿಚಾರಣೆ ಮತ್ತು ಸ್ಥಳ ಪರಿಶೀಲನೆಯ ಅಗತ್ಯವಿದೆ. ಆದ್ದರಿಂದ, ಎಲ್ಲಾ ಆರೋಪಿಗಳನ್ನು ತಮ್ಮ ವಶಕ್ಕೆ ನೀಡಬೇಕು ಎಂದು ಪೊಲೀಸರು ಕೋರ್ಟ್‌ಗೆ ಮನವಿ ಮಾಡಿದ್ದರು. ಆದರೆ ಕೋರ್ಟ್, ಕೇವಲ ಎರಡು ದಿನ ಮಾತ್ರ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ. 

ಮೊಹಮ್ಮದ್ ನಳಪಾಡ್‌ ಹ್ಯಾರೀಸ್, ಬಾಲಕೃಷ್ಣ, ಮಂಜುನಾಥ್, ಅಭಿಷೇಕ್, ಅರುಣ್ ಬಾಬು, ನಫಿ ಅಹಮದ್ ಸೇರಿದಂತೆ 7 ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಕೋರ್ಟ್ ಫೆಬ್ರವರಿ 21ರ ವರೆಗೆ ಸಿಸಿಬಿ ವಶಕ್ಕೆ ನೀಡಿದೆ. 

ಫೆ.17 ರಂದು ಯುಬಿ ಸಿಟಿಯಲ್ಲಿರುವ ಫೆಗ್ರಿ ಕಫೆ ರೆಸ್ಟೋರೆಂಟ್ ನಲ್ಲಿ ಊಟ ಮಾಡುತ್ತಿದ್ದ ವೇಳೆ ಕಾಲು ತಗುಲಿತು ಎಂಬ ಕಾರಣಕ್ಕೆ ಮೊಹಮ್ಮದ್ ಹ್ಯಾರಿಸ್ ನಳಪಾಡ್ ಮತ್ತು ಆತನ ಸ್ನೇಹಿತರು ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದರು. ನಂತರ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಾಪತ್ತೆಯಾಗಿದ್ದ ಮೊಹಮ್ಮದ್ ಹ್ಯಾರಿಸ್ ನಳಪಾಡ್ ಇಂದು ಬೆಳಿಗ್ಗೆ ಪೊಲೀಸರಿಗೆ ಶರಣಾಗಿದ್ದರು. 

Trending News