ನಾನು ರಾಜಕೀಯಕ್ಕೆ ಬರುವುದಿಲ್ಲ: ಯದುವೀರ್ ಸ್ಪಷ್ಟನೆ

ತಾವು ಯಾವ ಪಕ್ಷದ ಪರ ಪ್ರಚಾರಕ್ಕೂ ಹೋಗುವುದಿಲ್ಲ ಎಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ.

Last Updated : Mar 28, 2018, 04:50 PM IST
ನಾನು ರಾಜಕೀಯಕ್ಕೆ ಬರುವುದಿಲ್ಲ: ಯದುವೀರ್ ಸ್ಪಷ್ಟನೆ title=

ಮಡಿಕೇರಿ: ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ, ಯಾವುದೇ ಕಾರಣಕ್ಕೂ ರಾಜಕಾರಣಕ್ಕೂ ಬರುವುದಿಲ್ಲ, ಯಾವ ಪಕ್ಷದ ಪರ ಪ್ರಚಾರಕ್ಕೂ ಹೋಗುವುದಿಲ್ಲ ಎಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ.

ಕೊಡಗಿನ ಗೊಣಿಕೊಪ್ಪಲಿನಲ್ಲಿರುವ ಕಾವೇರಿ ಕಾಲೇಜು ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಯದುವೀರ್, ಸಮಾಜ ಸೇವೆಗಳಲ್ಲೇ ತೊಡಗಿಸಿಕೊಳ್ಳುತ್ತೇನೆಯೇ ವಿನಃ ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಬರುವುದಿಲ್ಲ ಎಂದು ಹೇಳಿದರು. ಇದರಿಂದ ಯದುವೀರ್ ರಾಜಕೀಯ ಸೇರ್ಪಡೆಗೆ ಸಂಬಂಧಿಸಿದಂತೆ ಇದ್ದ ವದಂತಿ ಸುದ್ದಿಗಳಿಗೆ ತೆರೆ ಬಿದ್ದಂತಾಗಿದೆ. 

ಇನ್ನು, ಮಾರ್ಚ್ 30ರಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಮೈಸೂರಿಗೆ ಆಗಮಿಸುತ್ತಿರುವ ವಿಚಾರ ತಮಗೆ ಗೊತ್ತಿಲ್ಲ. ಒಂದು ವೇಳೆ ಅರಮನೆಗೆ ಅಮಿತ್ ಷಾ ಅವರು ಬಂದರೆ ಭೇಟಿ ಮಾಡುತ್ತೇನೆ. ಆದರೆ ನನಗೆ ರಾಜಕೀಯಕ್ಕೆ ಯರುವ ಯಾವ ಆಸಕ್ತಿಯೂ ಇಲ್ಲ ಎಂದು ಹೇಳಿದರು.

Trending News