ಎಐಸಿಸಿ ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿ ನಾನಲ್ಲ: ಖರ್ಗೆ

ಎಐಸಿಸಿ ಉಪಾಧ್ಯಕ್ಷ ಸ್ಥಾನದ ಬಗ್ಗೆ ಎದ್ದಿರುವ ಊಹಾಪೋಹಗಳಿಗೆ ತೆರೆ ಎಳೆದ ಮಲ್ಲಿಕಾರ್ಜುನ ಖರ್ಗೆ

Last Updated : Sep 29, 2017, 04:42 PM IST
ಎಐಸಿಸಿ ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿ ನಾನಲ್ಲ: ಖರ್ಗೆ title=

ಕಲ್ಬುರ್ಗಿ: ಎಐಸಿಸಿ ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿ ನಾನಲ್ಲ ಎಂದು ಹೇಳುವುದರ ಮೂಲಕ ಇತ್ತೀಚಿಗೆ ಇದರ ಬಗೆಗಿನ ಊಹಾಪೋಹಗಳಿಗೆ ಕಾಂಗ್ರೇಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ತೆರೆ ಎಳೆದಿದ್ದಾರೆ.

ಕಲ್ಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಎಐಸಿಸಿ ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿ ನಾನಲ್ಲ, ಅದರ ಬಗ್ಗೆ ಯಾರೂ ನನಗೆ ಮಾಹಿತಿ ಕೊಟ್ಟಿಲ್ಲ. ಎಐಸಿಸಿ ಉಪಾಧ್ಯಕ್ಷ ಸ್ಥಾನ ನನಗೆ ನೀಡುತ್ತಾರೆ ಎಂಬುದು ಸುಳ್ಳು ಮಾಹಿತಿ, ಎಐಸಿಸಿ ಉಪಾಧ್ಯಕ್ಷ ಸ್ಥಾನದ ಬಗ್ಗೆ ನನಗೆ  ಎಂದು ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟ ಪಡಿಸಿದ್ದಾರೆ.

Trending News