ತುಘಲಕ್ ಸರ್ಕಾರದ ಕಲುಷಿತ ನೀರು ಪೂರೈಕೆಯಿಂದ ಅಮಾಯಕ ಜೀವ ಬಲಿ: ಬಿಜೆಪಿ

ಬೇರೆ ಇಲಾಖೆಗಳಲ್ಲಿ ಮೂಗು ತೂರಿಸುವುದನ್ನು ಬಿಟ್ಟು ಮೊದಲು ಶುದ್ಧ ಕುಡಿಯುವ ನೀರು ಪೂರೈಕೆ, ಬಲಿಯಾಗುತ್ತಿರುವ ಅಮಾಯಕ ಜೀವಗಳ ಬಗ್ಗೆ ಸೊಲ್ಲೆತ್ತಲು ಸಮಯ ಕೊಡಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಕಿಡಿಕಾರಿದೆ.  

Written by - Puttaraj K Alur | Last Updated : Aug 2, 2023, 04:46 PM IST
  • ತುಘಲಕ್ ಸರ್ಕಾರ ಕಲುಷಿತ ನೀರು ಪೂರೈಕೆ ಮಾಡಿ ಅಮಾಯಕರ ಜೀವಗಳನ್ನು ತೆಗೆಯುತ್ತಲೇ ಇದೆ
  • ರಾಜ್ಯದಲ್ಲಿ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದವರ ಅಂಕಿ-ಸಂಖ್ಯೆಯನ್ನು ಬಿಡುಗಡೆ ಮಾಡಿದ ಬಿಜೆಪಿ
  • ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ
ತುಘಲಕ್ ಸರ್ಕಾರದ ಕಲುಷಿತ ನೀರು ಪೂರೈಕೆಯಿಂದ ಅಮಾಯಕ ಜೀವ ಬಲಿ: ಬಿಜೆಪಿ title=
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಜನರನ್ನು ಬಲಿಪಡೆಯಲೆಂದೇ ಬಂದ ಕಾಂಗ್ರೆಸ್‍ನ ತುಘಲಕ್ ಸರ್ಕಾರವು, ಕಲುಷಿತ ನೀರು ಪೂರೈಕೆ ಮಾಡಿ ಅಮಾಯಕರ ಜೀವಗಳನ್ನು ತೆಗೆಯುತ್ತಲೇ ಇದೆ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಬುಧವಾರ ಟ್ವೀಟ್ ಮಾಡಿರುವ ಬಿಜೆಪಿ, ರಾಜ್ಯದಲ್ಲಿ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದವರ ಅಂಕಿ-ಸಂಖ್ಯೆಯನ್ನು ಬಿಡುಗಡೆ ಮಾಡಿದೆ. ‘ಆಗಸ್ಟ್ 1ರಂದು ಚಿತ್ರದುರ್ಗದ ಕವಾಡಿಡರಹಟ್ಟಿ ಬಡವಾಣೆಯಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿಯ ಪರಿಸ್ಥಿತಿ ಗಂಭೀರವಾಗಿದೆ. ಜುಲೈ 30ರಂದು ಬೀದರ್‌ನ ಬರೀದಾಬಾದ್‍ನಲ್ಲಿ ಕಲುಷಿತ ನೀರು ಸೇವಿಸಿ 14ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ’ ಎಂದು ಬಿಜೆಪಿ ಕಿಡಿಕಾರಿದೆ.

ಇದನ್ನೂ ಓದಿ: ಫ್ರೀ ಗ್ಯಾರಂಟಿ ಯೋಜನೆಗಳಿಗೆ ಕರ್ನಾಟಕ ಸರ್ಕಾರದ ಬಳಿ ಹಣವಿಲ್ಲ ಎಂಬ ಪ್ರಧಾನಿ ಹೇಳಿಕೆಗೆ ಸಿಎಂ ತಿರುಗೇಟು!

ಜುಲೈ 17ರಂದು ತುಮಕೂರಿನ ತಾತಯ್ಯನ ಗುಡಿಯಲ್ಲಿ 10ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ಜುಲೈ 3ರಂದು ಬಳ್ಳಾರಿಯ ಸಿದ್ದಾಪುರದಲ್ಲಿ 45ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜುಲೈ  2ರಂದು ವಿಜಯನಗರದ ಬಡೀಲಡಕು ಗೊಲ್ಲರಹಟ್ಟಿಯಲ್ಲಿ 10ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ಜೂನ್ 27ರಂದು ಯಾದಗಿರಿಯ ಗುರುಮಠಕಲ್‍ನಲ್ಲಿ 54ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ’ ಎಂದು ಬಿಜೆಪಿ ಹೇಳಿದೆ.

‘ಜೂನ್ 20ರಂದು ಬೀದರ್‌ನ ಔರಾದ್‍ನಲ್ಲಿ 20ಕ್ಕೂ ಹೆಚ್ಚು ಜನ ಗಂಭೀರವಾಗಿ ಅಸ್ವಸ್ಥರಾಗಿದ್ದು, ಜೂನ್ 19ರಂದು ಕಲಬುರಗಿಯ ಸೇಡಂನಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ಜೂನ್ 8ರಂದು ಬೆಂಗಳೂರಿನ ಇಲೆಕ್ಟ್ರಾನಿಕ್ಸ್ ಸಿಟಿಯಲ್ಲಿ 118 ಜನ ಅಸ್ವಸ್ಥರಾಗಿದ್ದು, ಜೂನ್ 8ರಂದು ಕೊಪ್ಪಳದ ಕುಷ್ಟಗಿಯಲ್ಲಿ 10 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಮೇ 28ರಂದು ರಾಯಚೂರಿನ ದೇವದುರ್ಗದಲ್ಲಿ 30ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಮೇ 26ರಂದು ರಾಯಚೂರಿನ ದೇವದುರ್ಗದಲ್ಲಿ 50ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿ, 5 ವರ್ಷದ ಬಾಲಕ ಮೃತಪಟ್ಟಿದ್ದಾಳೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಗ್ರಾಮ ಒನ್ ನಿಯಮ ಉಲ್ಲಂಘಿಸಿದವರ ಮೇಲಿಲ್ಲ ಕ್ರಮ

#TrollMinister ಪ್ರಿಯಾಂಕ್ ಖರ್ಗೆಯವರೇ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಂಬುದೊಂದಿದೆ. ಅದು ನಿಮ್ಮ ಸಚಿವಾಲಯಕ್ಕೆ ಸಂಬಂಧಪಟ್ಟಿದ್ದು. ಬೇರೆ ಇಲಾಖೆಗಳಲ್ಲಿ ಮೂಗು ತೂರಿಸುವುದನ್ನು ಬಿಟ್ಟು ಮೊದಲು ಶುದ್ಧ ಕುಡಿಯುವ ನೀರು ಪೂರೈಕೆ, ಬಲಿಯಾಗುತ್ತಿರುವ ಅಮಾಯಕ ಜೀವಗಳ ಬಗ್ಗೆ ಸೊಲ್ಲೆತ್ತಲು ಸಮಯ ಕೊಡಿ’ ಎಂದು ಬಿಜೆಪಿ ಕುಟುಕಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News