ಮುಸ್ಲಿಮರ ಓಲೈಕೆ, ಹಿಂದೂಗಳ ಕಡೆಗಣನೆ ನೋಡಿ ಶೆಟ್ಟರ್ ʼಕೈʼ ಬಿಟ್ಟರು

Jagadish Shettar Returns To BJP : ಇದೇನೂ ಆಪರೇಷನ್ ಕಮಲ ಅಲ್ಲ. ಜಗದೀಶ ಶೆಟ್ಟರ್ ಅವರು ಸಂಘ ಪರಿವಾರದ ಹಿನ್ನೆಲೆಯಿಂದ ಬೆಳೆದು ಬಂದಿದ್ದಾರೆ. ಅವರು ಮುಸ್ಲಿಮರನ್ನು ಓಲೈಸುವ ಪಕ್ಷಕ್ಕೆ ಏಕಾಏಕಿ ಸೇರಿಬಿಟ್ಟಿದ್ದರು‌ ಎಂದು ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಬಿಜೆಪಿಗೆ ಮರಳಿದ ಬಗ್ಗೆ ವಿಪಕ್ಷ ನಾಯಕ ಆರ್‌. ಅಶೋಕ್‌ ಪ್ರತಿಕ್ರಿಯೆ ನೀಡಿದರು.

Written by - Krishna N K | Last Updated : Jan 25, 2024, 05:58 PM IST
  • ಜಗದೀಶ ಶೆಟ್ಟರ್ ಅವರು ಸಂಘ ಪರಿವಾರದ ಹಿನ್ನೆಲೆಯಿಂದ ಬೆಳೆದು ಬಂದವರು.
  • ಮುಸ್ಲಿಮರನ್ನು ಓಲೈಸುವ ಪಕ್ಷಕ್ಕೆ ಏಕಾಏಕಿ ಸೇರಿಬಿಟ್ಟಿದ್ದರು‌.
  • ರಾಮನವಮಿಗೂ ಇಮಾಮ್ ಸಾಬಿಗೂ ಏನು ಸಂಬಂಧ ಎನ್ನುವಂತೆ ಆಗಿತ್ತು.
ಮುಸ್ಲಿಮರ ಓಲೈಕೆ, ಹಿಂದೂಗಳ ಕಡೆಗಣನೆ ನೋಡಿ ಶೆಟ್ಟರ್ ʼಕೈʼ ಬಿಟ್ಟರು title=

ಬೆಂಗಳೂರು : ಜಗದೀಶ ಶೆಟ್ಟರ್ ಬಿಜೆಪಿಗೆ ಬಂದಿರುವುದೇನೂ ಆಪರೇಷನ್ ಕಮಲ ಅಲ್ಲ. ಕಾಂಗ್ರೆಸ್ ಪಕ್ಷದೊಳಗಿನ ಉಸಿರುಗಟ್ಟುವ ವಾತಾವರಣವನ್ನು ತಡೆದುಕೊಳ್ಳಲಾರದೆ ಶೆಟ್ಟರ್ ಮರಳಿ ತಮ್ಮ ಗೂಡು ಸೇರಿದ್ದಾರೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇನೂ ಆಪರೇಷನ್ ಕಮಲ ಅಲ್ಲ. ಜಗದೀಶ ಶೆಟ್ಟರ್ ಅವರು ಸಂಘ ಪರಿವಾರದ ಹಿನ್ನೆಲೆಯಿಂದ ಬೆಳೆದು ಬಂದಿದ್ದಾರೆ. ಅವರು ಮುಸ್ಲಿಮರನ್ನು ಓಲೈಸುವ ಪಕ್ಷಕ್ಕೆ ಏಕಾಏಕಿ ಸೇರಿಬಿಟ್ಟಿದ್ದರು‌. ರಾಮನವಮಿಗೂ ಇಮಾಮ್ ಸಾಬಿಗೂ ಏನು ಸಂಬಂಧ ಎನ್ನುವಂತೆ ಆಗಿತ್ತು. ಮುಸ್ಲಿಮರ ಓಲೈಕೆ ಹಾಗೂ ಹಿಂದೂಗಳ ಕಡೆಗಣನೆಯನ್ನು ನೋಡಿ ಅವರಿಗೆ ಉಸಿರುಗಟ್ಟುವ ವಾತಾವರಣ ಉಂಟಾಗಿತ್ತು. ಶೆಟ್ಟರ್ ಅವರು ಮರಳಿ ಗೂಡಿಗೆ ಬಂದಿರುವುದನ್ನು ತುಂಬು ಹೃದಯದಿಂದ ಸ್ವಾಗತ ಮಾಡಿದ್ದೇವೆ ಎಂದರು.

ಇದನ್ನೂ ಓದಿ: ಬುಡಕಟ್ಟು ಸಂಸ್ಕೃತಿಯ ಸಾಂಪ್ರದಾಯಿಕ ಮಹುವಾ ಬಗ್ಗೆ ನಿಮಗೆ ತಿಳಿದಿದೆಯೇ..?

ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ, ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮೊದಲಾದ ಕಾರಣಗಳಿಂದ ಇನ್ನಷ್ಟು ನಾಯಕರು ಬಿಜೆಪಿ ಕಡೆ ಬರಲಿದ್ದಾರೆ. ಇನ್ನೇನಿದ್ದರೂ 'ಕಾಂಗ್ರೆಸ್ ಚೋಡೊ' ಎಂಬ ಘೋಷಣೆ ಕೇಳಿಬರಲಿದೆ. ಆಮ್ ಆದ್ಮಿ ಪಕ್ಷ, ಮಮತಾ ಬ್ಯಾನರ್ಜಿಯವರ ಪಕ್ಷ ಕಾಂಗ್ರೆಸ್ ನಾಲಾಯಕ್ ಎಂದು ಓಡಿಸಿದೆ. ಕಾಂಗ್ರೆಸ್ ಪಕ್ಷವನ್ನು ದೆಹಲಿಯಿಂದಲೂ ಹೊರಗೆ ಹಾಕಲಾಗುತ್ತದೆ‌. ಈ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಧೂಳಿಪಟವಾಗಲಿದೆ ಎಂದರು.

ಬಿಜೆಪಿಯವರು ನಮ್ಮಲ್ಲಿಗೆ ಬಂದರು ಎಂದು ಕಾಂಗ್ರೆಸ್ ನಾಯಕರು ಹೇಳಿಕೊಳ್ಳುತ್ತಿದ್ದರು. ಈಗ ಆ ಮಾತುಗಳು ನಿಲ್ಲಲಿದೆ. ಕಾಂಗ್ರೆಸ್ ನಲ್ಲಿ ನಾಯಕರ ಗತಿ ಇಲ್ಲವಾಗಿರುವುದರಿಂದ ನಮ್ಮ ನಾಯಕರನ್ನು ಕರೆಸಿಕೊಳ್ಳುತ್ತಿದ್ದಾರೆ ಎಂದರು. ಅಭ್ಯರ್ಥಿಗಳ ಆಯ್ಕೆ ಬಗ್ಗೆ ಬಿಜೆಪಿಯ ವರಿಷ್ಠರು ನಿರ್ಧರಿಸಲಿದ್ದಾರೆ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News