ಕಾಂಗ್ರೆಸ್ ಜೊತೆ ಚುನಾವಣಾ ಪೂರ್ವ ಮೈತ್ರಿಗೆ ಜೆಡಿಎಸ್ ಸಿದ್ಧ : ಹೆಚ್.ಡಿ.ದೇವೇಗೌಡ

ಕಾಂಗ್ರೆಸ್ ಪಕ್ಷದ ಜೊತೆ ಚುನಾವಣಾ ಪೂರ್ವ ಮೈತ್ರಿಗೆ ಜೆಡಿಎಸ್ ಸಿದ್ಧ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.

Last Updated : Mar 27, 2018, 11:01 AM IST
ಕಾಂಗ್ರೆಸ್ ಜೊತೆ ಚುನಾವಣಾ ಪೂರ್ವ ಮೈತ್ರಿಗೆ ಜೆಡಿಎಸ್ ಸಿದ್ಧ : ಹೆಚ್.ಡಿ.ದೇವೇಗೌಡ title=

ಬೆಂಗಳೂರು: ಕಾಂಗ್ರೆಸ್ ಪಕ್ಷದ ಜೊತೆ ಚುನಾವಣಾ ಪೂರ್ವ ಮೈತ್ರಿಗೆ ಜೆಡಿಎಸ್ ಸಿದ್ಧ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಕರ್ನಾಟಕ ಸಂಘಟನೆ ಇಂದು ದೇವೇಗೌಡರನ್ನು ಭೇಟಿ ಮಾಡಿ ಬಿಜೆಪಿ ಸೋಲಿಸಲು ಜೆಡಿಎಸ್, ಕಾಂಗ್ರೆಸ್​ ಒಂದಾಗಬೇಕೆಂದು ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ದೇವೇಗೌಡರು, ಕಾಂಗ್ರೆಸ್​ ನಮಗೆ ಎಷ್ಟು ಸೀಟುಗಳನ್ನು  ಬಿಟ್ಟುಕೊಡುತ್ತದೆ, ನಾವು ಅವರಿಗೆ ಎಷ್ಟು ಸೀಟುಗಳನ್ನು ಬಿಟ್ಟುಕೊಡಬೇಕು. ಈ ಬಗ್ಗೆ ಕಾಂಗ್ರೆಸ್ ಪಕ್ಷ ಚರ್ಚಿಸಿ ನಮಗೆ ತೀರ್ಮಾನ ತಿಳಿಸಲಿ ಎಂದು ಹೆಚ್​.ಡಿ. ದೇವೇಗೌಡ ತಿಳಿಸಿದ್ದಾರೆ.

ಮುಂದುವರೆದು, ಕಾಂಗ್ರೆಸ್​ ದೊಡ್ಡ ಪಕ್ಷ, ಅವರೇ ಮೊದಲು ಪಟ್ಟಿ ಕಳುಹಿಸಲಿ. ಮೈತ್ರಿ ಪ್ರಸ್ತಾವನೆ ಬಂದರೆ ಸಂಪೂರ್ಣ ಸಹಕಾರ ನೀಡುತ್ತೇವೆ. ಸಮಾಜವಾದಿ ಪಕ್ಷ ಸೀಟು ಕೇಳಿದರೆ ಅವರಿಗೂ ಕೆಲವು ಸೀಟು ಬಿಟ್ಟುಕೊಡಲು ಸಿದ್ಧ ಎಂದು ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.

Trending News