ಸಿಎಂ ಸಿದ್ದರಾಮಯ್ಯ ಸರ್ಕಾರದ ಆಡಳಿತದಲ್ಲಿ 6 ಕೋಟಿ ಕನ್ನಡಿಗರು ನೆಮ್ಮದಿಯಲ್ಲಿಲ್ಲ: ಬಿಜೆಪಿ

BJP Slams CM Siddaramaiah: ಜಾತಿ ರಾಜಕಾರಣವನ್ನೇ ಅಸ್ತ್ರ ಮಾಡಿಕೊಂಡಿರುವ ಅವರು ಕೆಲವೇ ಆಯ್ದ ಜನಾಂಗಕ್ಕೆ ಅನುಕೂಲ ಮಾಡಿ ಉಳಿದವರನ್ನು ಸಂಪೂರ್ಣ ಕಡೆಗಣಿಸಿದ್ದಾರೆ ಎಂಬುದು ಅವರದೇ ಪಕ್ಷದ ನಾಯಕರು ನುಡಿದಿರುವ ಸತ್ಯವೆಂದು ಕುಟುಕಿದ್ದಾರೆ.

Written by - Puttaraj K Alur | Last Updated : Oct 1, 2023, 07:37 PM IST
  • ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಆಡಳಿತದಲ್ಲಿ 6 ಕೋಟಿ ಕನ್ನಡಿಗರು ನೆಮ್ಮದಿಯಲ್ಲಿಲ್ಲ
  • ‘ಕೈ’ ಪಕ್ಷದ ನಾಯಕರಿಗೆ ಸಿದ್ದರಾಮಯ್ಯನವರ ಆಡಳಿತ ತೃಪ್ತಿ ತಂದಿಲ್ಲ ಎಂಬುದು ನೂರಕ್ಕೆ ನೂರರಷ್ಟು ಸತ್ಯ
  • ಜಾತಿ ರಾಜಕಾರಣವನ್ನೇ ಅಸ್ತ್ರ ಮಾಡಿಕೊಂಡ ಸಿದ್ದರಾಮಯ್ಯರಿಂದ ಆಯ್ದ ಜನಾಂಗಕ್ಕೆ ಮಾತ್ರ ಅನುಕೂಲ
ಸಿಎಂ ಸಿದ್ದರಾಮಯ್ಯ ಸರ್ಕಾರದ ಆಡಳಿತದಲ್ಲಿ 6 ಕೋಟಿ ಕನ್ನಡಿಗರು ನೆಮ್ಮದಿಯಲ್ಲಿಲ್ಲ: ಬಿಜೆಪಿ  title=
ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಆಕ್ರೋಶ!

ಬೆಂಗಳೂರು: ಸಿಎಂ ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಆಡಳಿತದಲ್ಲಿ ರಾಜ್ಯದ 6 ಕೋಟಿ ಕನ್ನಡಿಗರು ನೆಮ್ಮದಿಯಲ್ಲಿಲ್ಲ ಎಂಬುದು ಎಷ್ಟು ಸತ್ಯವೋ, ಕೈ ಪಕ್ಷದ ನಾಯಕರಿಗೂ ಸಿದ್ದರಾಮಯ್ಯನವರ ಆಡಳಿತ ತೃಪ್ತಿ ತಂದಿಲ್ಲ ಎಂಬುದೂ ಅಷ್ಟೇ ಸತ್ಯವೆಂದು ಬಿಜೆಪಿ ಟೀಕಿಸಿದೆ.

ಭಾನುವಾರ ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಚುನಾವಣೆಗೂ ಮುನ್ನ ಸಿದ್ದರಾಮಯ್ಯರವರು, ತಮ್ಮದು “ಸರ್ವ ಜನಾಂಗದ ಶಾಂತಿಯ ತೋಟ” ಎಂದು ಹೇಳಿದ್ದು ಸಂಪೂರ್ಣ ಸುಳ್ಳು ಎಂಬುದು ಅವರ 4 ತಿಂಗಳ ಆಡಳಿತದಲ್ಲಿ ಸಾಬೀತಾಗಿದೆ. ಜಾತಿ ರಾಜಕಾರಣವನ್ನೇ ಅಸ್ತ್ರ ಮಾಡಿಕೊಂಡಿರುವ ಅವರು ಕೆಲವೇ ಆಯ್ದ ಜನಾಂಗಕ್ಕೆ ಅನುಕೂಲ ಮಾಡಿ ಉಳಿದವರನ್ನು ಸಂಪೂರ್ಣ ಕಡೆಗಣಿಸಿದ್ದಾರೆ ಎಂಬುದು ಅವರದೇ ಪಕ್ಷದ ನಾಯಕರು ನುಡಿದಿರುವ ಸತ್ಯ’ವೆಂದು ಕುಟುಕಿದ್ದಾರೆ.

‘ಚುನಾವಣಾ ಪೂರ್ವದಲ್ಲಿ ಅಹಿಂದ ಎಂಬ ದಾಳವುರುಳಿಸಿ ರಾಜಕೀಯ ಲಾಭ ಪಡೆದುಕೊಳ್ಳುವ ಸಿದ್ದರಾಮಯ್ಯರವರು, ಚುನಾವಣೆಯ ನಂತರ ಹಿಂದುಳಿದವರನ್ನು ಬಿಟ್ಟು, ತಾವು ಮತ್ತು ತಮ್ಮವರನ್ನು ಮಾತ್ರ ಮುಂದಕ್ಕೆ ಒಯ್ಯತ್ತಾರೆ” ಎಂದು ಬಿ.ಕೆ.ಹರಿಪ್ರಸಾದ್ ಅವರು ತುಂಬಿದ ಸಭೆಯಲ್ಲಿ ಗಟ್ಟಿ ಧ್ವನಿಯಲ್ಲಿ ಹೇಳಿ ಸಿದ್ದರಾಮಯ್ಯರವರ ಒಳಗುಣವನ್ನು ಹೊರಹಾಕಿದ್ದಾರೆ. ಸಿದ್ದರಾಮಯ್ಯರವರ ಅಸಮಾಧಾನ ಹಿಂದುಳಿದ ವರ್ಗಗಳ ನಾಯಕರ ಮೇಲೆ ಮಾತ್ರವಲ್ಲ, ರಾಜ್ಯದ ಹಿಂದುಳಿದ ವರ್ಗಗಳ ಮೇಲೆಯೂ ಅವರ ಅಸಮಾಧಾನ ಜೋರಾಗಿದೆ. ಹಿಂದುಳಿದ ವರ್ಗಗಳನ್ನು ಬಜೆಟ್‌ನಲ್ಲಿ ಕಡೆಗಣಿಸಲು ಇದೇ ಕಾರಣ’ವೆಂದು ಬಿಜೆಪಿ ಕಿಡಿಕಾರಿದೆ.

ಇದನ್ನೂ ಓದಿ: ನಿಖಿಲ್ ಕುಮಾರಸ್ವಾಮಿ - ಧ್ರುವ ಸರ್ಜಾ ಭೇಟಿಗೆ ಕಾರಣವೇನು?

‘ರಾಜ್ಯದ ಪ್ರಮುಖ ಹಿಂದುಳಿದ ಸಮುದಾಯಗಳಾದ ತಿಗಳ, ಮಡಿವಾಳ, ಉಪ್ಪಾರ, ಬಲಿಜ ಸೇರಿದಂತೆ ಇತರ ಸಮುದಾಯಗಳಿಗೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ನಿಗಮಗಳ ಭಾಗ್ಯವಿಲ್ಲ, ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ಬಿಡಿಗಾಸಿನ ಅನುದಾನವಿಲ್ಲ, ಇನ್ನು ಅತಿಸಣ್ಣ ಹಿಂದುಳಿದ ವರ್ಗಗಳಿಗೆ ಅಭಿವೃದ್ಧಿ ನಿಗಮವೂ ಇಲ್ಲ, ಅನುದಾನವೂ ಇಲ್ಲ. ಇದು ಸಿದ್ದರಾಮಯ್ಯರವರು ಹಿಂದುಳಿದ ವರ್ಗಗಳಿಗೆ ನೀಡಿದ ಮಹಾನ್‌ ಕೊಡುಗೆ!’ ಎಂದು ಬಿಜೆಪಿ ಟೀಕಿಸಿದೆ.

‘ಮತ್ತೊಬ್ಬರನ್ನು ರಾಜಕೀಯವಾಗಿ ತುಳಿಯುವ ಗುಣದ ಸಿದ್ದರಾಮಯ್ಯನವರು 2013ರಲ್ಲಿ ಕೊರಟಗೆರೆಯಲ್ಲಿ ಡಾ.ಜಿ.ಪರಮೇಶ್ವರ್ ಅವರು ಸೋಲುವಂತೆ ನೋಡಿಕೊಂಡಿದ್ದೂ ಅಲ್ಲದೆ, ಇದೀಗ ಅವರ ಗೃಹ ಇಲಾಖೆಗೆ ಉಳಿದವರು ಹಸ್ತಕ್ಷೇಪ ಮಾಡಲು ಕುಮ್ಮಕ್ಕು ನೀಡಿ ಉದ್ದೇಶಪೂರ್ವಕವಾಗಿ ಪರಮೇಶ್ವರರನ್ನು ಡಮ್ಮಿ ಮಂತ್ರಿ ಮಾಡಿ ಕೂರಿಸಿದ್ದಾರೆ. ವಿಪಕ್ಷ ಸ್ಥಾನದ ಹುದ್ದೆಗೆ ಅಡ್ಡಗಾಲಾಗಿದ್ದರು ಎಂಬ ಏಕೈಕ ಕಾರಣಕ್ಕೆ ಮಲ್ಲಿಕಾರ್ಜುನ ಖರ್ಗೆಯವರನ್ನು ಲೋಕಸಭೆಗೆ ಕಳುಹಿಸಿದ ಸ್ವಾರ್ಥಿ ಸಿದ್ದರಾಮಯ್ಯರವರು’ ಎಂದು ಬಿಜೆಪಿ ಆರೋಪಿಸಿದೆ.

‘ಇನ್ನು ರಾಜ್ಯದ ವೀರಶೈವ-ಲಿಂಗಾಯತ ಸಮುದಾಯದ ವಿರುದ್ದವಂತೂ ಪದೇ ಪದೇ ದ್ವೇಷ ಕಾರಿಕೊಳ್ಳುವ ಸಿಎಂ ಸಿದ್ದರಾಮಯ್ಯರವರು, ಚುನಾವಣೆಗೂ ಮುನ್ನ ವೀರಶೈವ-ಲಿಂಗಾಯತರೆಲ್ಲರೂ ಭ್ರಷ್ಟರು ಎಂದು ಜರಿದಿದ್ದನ್ನು ರಾಜ್ಯದ ಜನರು ಇನ್ನೂ ಮರೆತಿಲ್ಲವೆಂಬುದನ್ನು ಸಿದ್ದರಾಮಯ್ಯರವರು ಅರಿತುಕೊಳ್ಳುವುದು ಒಳಿತು. ಈಗ ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ ಅಧಿಕಾರಿಗಳನ್ನು ಕಡೆಗಣಿಸುತ್ತಿದ್ದಾರೆಂಬ ನಿಷ್ಠುರ ಸತ್ಯವನ್ನು ಕಾಂಗ್ರೆಸ್‌ನ ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪನವರು ದೂರಿದ್ದಾರೆ. ವೀರಶೈವ-ಲಿಂಗಾಯತ ಸಮುದಾಯದವರಿಗೆ ಸಿಎಂ ಕುರ್ಚಿ ನೀಡಿ ಎನ್ನುವ ಮೂಲಕ ಸಿದ್ದರಾಮಯ್ಯರವರ ನಾಯಕತ್ವದಲ್ಲಿ ತಮಗೆ ನಂಬಿಕೆ ಹಾಗೂ ವಿಶ್ವಾಸವಿಲ್ಲ ಎಂಬ ಸತ್ಯವನ್ನು ಪುನರುಚ್ಛರಿಸಿದ್ದಾರೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಶಿವಮೊಗ್ಗದ ಈದ್ ಮಿಲಾದ್ ಕಟೌಟ್ ವಿವಾದ: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

‘ತಮ್ಮ ಸಮುದಾಯ ಸಣ್ಣ ಸಂಖ್ಯೆಯಲ್ಲಿರುವ ಕಾರಣ ತಮಗೆ ಮಂತ್ರಿ ಸ್ಥಾನ ತಪ್ಪಿತು ಎಂಬುದನ್ನು ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿಯವರು ನೋವು ತೋಡಿಕೊಂಡಿದ್ದು, ಸಣ್ಣ ದಲಿತ ಸಮುದಾಯಗಳಿಗೆ ಸಿದ್ದರಾಮಯ್ಯರವರ ಮಂತ್ರಿ ಮಂಡಲದಲ್ಲಿ ಸ್ಥಾನವಿಲ್ಲ ಎಂಬುದಕ್ಕಿದು ಸ್ಪಷ್ಟ ನಿದರ್ಶನ. ಒಟ್ಟಿನಲ್ಲಿ ಸಿದ್ದರಾಮಯ್ಯರವರ ನಾಯಕತ್ವ ಮತ್ತವರ ತುಷ್ಟೀಕರಣದ ರಾಜಕಾರಣ ಹಾಗೂ ಸ್ವಜನ ಪಕ್ಷಪಾತದಿಂದ ಕೈ ಪಕ್ಷದ ನಾಯಕರೇ ರೋಸಿ ಹೋಗಿರುವುದು ಅವರ ಹೇಳಿಕೆಗಳಿಂದಲೇ ಸಾಬೀತಾಗುತ್ತಿದೆ’ ಎಂದು ಬಿಜೆಪಿ ಟೀಕಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News