BJP: ಸಿದ್ದರಾಮಯ್ಯಗೆ ಖಡಕ್ ಎಚ್ಚರಿಕೆ ನೀಡಿದ ಬಿಜೆಪಿ..!

ರಾಮಮಂದಿರ ವಿಚಾರವಾಗಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಸ್ಥಿರತೆಯಿಲ್ಲದೆ ಮಾತನಾಡುವ ನಿಮ್ಮನ್ನು ಜನರು ತಿರಸ್ಕರಿಸಿದ್ದಾರೆ ಎಂದಿದೆ.

Last Updated : Feb 20, 2021, 04:31 PM IST
  • ನಿಮ್ಮ ನಾಲಿಗೆಯನ್ನು ನಿಯಂತ್ರಿಸಿಕೊಳ್ಳಿ! ಹೀಗಂತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಎಚ್ಚರಿಕೆ ನೀಡಿದೆ.
  • ರಾಮಮಂದಿರ ವಿಚಾರವಾಗಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಸ್ಥಿರತೆಯಿಲ್ಲದೆ ಮಾತನಾಡುವ ನಿಮ್ಮನ್ನು ಜನರು ತಿರಸ್ಕರಿಸಿದ್ದಾರೆ ಎಂದಿದೆ.
  • ರಾಮ ಮಂದಿರ ನಿರ್ಮಾಣ ವಿಷಯದಲ್ಲಿ ಬಿಜೆಪಿ ನಾಯಕರು ರಾಜಕೀಯ ಲಾಭ ಪಡೆಯಲು ಹೊರಟಿರುವುದು ನಾಚಿಕೆಗೇಡು ಎಂದ ಸಿದ್ದರಾಮಯ್ಯ
BJP: ಸಿದ್ದರಾಮಯ್ಯಗೆ ಖಡಕ್ ಎಚ್ಚರಿಕೆ ನೀಡಿದ ಬಿಜೆಪಿ..! title=

ಬೆಂಗಳೂರು: ನಿಮ್ಮ ನಾಲಿಗೆಯನ್ನು ನಿಯಂತ್ರಿಸಿಕೊಳ್ಳಿ! ಹೀಗಂತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಎಚ್ಚರಿಕೆ ನೀಡಿದೆ. ರಾಮಮಂದಿರ ವಿಚಾರವಾಗಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಸ್ಥಿರತೆಯಿಲ್ಲದೆ ಮಾತನಾಡುವ ನಿಮ್ಮನ್ನು ಜನರು ತಿರಸ್ಕರಿಸಿದ್ದಾರೆ ಎಂದಿದೆ.

ನಮ್ಮೂರಿನಲ್ಲಿ ನಾನು ರಾಮ ಮಂದಿರ ನಿರ್ಮಾಣ ಮಾಡುತ್ತಿದ್ದೇನೆ. ದೇವರ ಬಗ್ಗೆ ನಮಗೂ ಭಕ್ತಿ ಇದೆ, ನಮ್ಮ ಶ್ರದ್ಧೆ, ನಂಬಿಕೆಗಳು ವೈಯಕ್ತಿಕ ವಿಚಾರಗಳಾಗಿರಬೇಕೇ ಹೊರತು ರಾಜಕೀಯ ಅಸ್ತ್ರಗಳಾಗಬಾರದು. ರಾಮ ಮಂದಿರ ನಿರ್ಮಾಣ ವಿಷಯದಲ್ಲಿ ಬಿಜೆಪಿ ನಾಯಕರು ರಾಜಕೀಯ ಲಾಭ ಪಡೆಯಲು ಹೊರಟಿರುವುದು ನಾಚಿಕೆಗೇಡು ಎಂದು ಸಿದ್ದರಾಮಯ್ಯ(Siddaramaiah) ಮೈಸೂರಿನಲ್ಲಿ ಹೇಳಿದ್ದರು.

Dr K Sudhakar: 'ರಾಜ್ಯದಲ್ಲಿ ಮತ್ತೆ ಲಾಕ್​ಡೌನ್ ಇಲ್ಲ; ಆದ್ರೆ ಜನರು ಎಚ್ಚರದಿಂದಿರಬೇಕು'

ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ(BJP), ನ್ಯಾಯಾಲಯ ತೀರ್ಪು ನೀಡಿದ ಮೇಲೂ, ವಿವಾದಿತ ಜಾಗವೆನ್ನುವ ಮೂಲಕ ನಿಮ್ಮ ಅಲ್ಪ ಜ್ಞಾನವನ್ನು ಪ್ರದರ್ಶಿಸಿದ್ದೀರಿ. ನಿಮ್ಮ ನಾಲಿಗೆಯನ್ನು ನಿಯಂತ್ರಿಸಿಕೊಳ್ಳಿ. ಸ್ಥಿರತೆಯಿಲ್ಲದೆ ಮಾತನಾಡುವ ನಿಮ್ಮನ್ನು ಜನರು ತಿರಸ್ಕರಿಸಿದ್ದಾರೆ ಎಂದಿದೆ.

Zameer Ahmed: ಸಿದ್ದರಾಮಯ್ಯ ಭವಿಷ್ಯ ನುಡಿದ ಜಮೀರ್‌ ಅಹ್ಮದ್..!

ರಾಮಮಂದಿರಕ್ಕೆ ವಿರೋಧಿಸಿದ್ದ ನೀವು ಈಗ ಶ್ರದ್ಧೆ, ನಂಬಿಕೆ ಎಂದು ಊಸರವಳ್ಳಿಯಂತೆ ನಟಿಸುತ್ತಿದ್ದೀರಿ. ದೇಶದ ನ್ಯಾಯಾಂಗ ವ್ಯವಸ್ಥೆಯ ಆಧಾರದಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ(Ram Mandir) ನಿರ್ಮಾಣವಾಗುತ್ತಿದೆ. ರಾಮಮಂದಿರ ನಿರ್ಮಾಣ ಮಾಡುತ್ತಿರುವುದು ಯಾವುದೇ ಪಕ್ಷ, ಸಂಘಟನೆಗಳಲ್ಲ. ನ್ಯಾಯಾಲಯವೇ ಸೂಚಿಸಿದ ಟ್ರಸ್ಟ್‌ ಮುಖೇನ ರಾಮಮಂದಿರ ನಿರ್ಮಾಣವಾಗುತ್ತಿದೆ.ರಾಜಕೀಯ ಲಾಭ ಪಡೆಯುತ್ತಿರುವುದು‌ ನಿಮ್ಮಂತವರೇ ಹೊರತು ಬೇರಾರಲ್ಲ ಎಂದು ಟೀಕೆ ಮಾಡಿದೆ.

Ram Mandir: ಹುಟ್ಟೂರಲ್ಲಿ ರಾಮಮಂದಿರ ಕಟ್ಟಲು ಮುಂದಾದ ಸಿದ್ದರಾಮಯ್ಯ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ. 

Trending News