ಕರ್ನಾಟಕ, ಜಮ್ಮು- ಕಾಶ್ಮೀರ ಸೇರಿ ದೇಶದ ವಿವಿಗಳ ಅಭಿವೃದ್ಧಿಗೆ 3600 ಕೋಟಿ ರೂ. ಬಿಡುಗಡೆ

ಉಷಾ ಯೋಜನೆಯಡಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂಪಾಯಿ, ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ 20 ಕೋಟಿ ರೂ. ಹಾಗೂ ಧಾರವಾಡ ವಿಶ್ವವಿದ್ಯಾಲಯಕ್ಕೆ 20 ಕೋಟಿ ರೂಪಾಯಿ ದೊರೆಯಲಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ. 

Written by - Ranjitha R K | Last Updated : Feb 20, 2024, 01:38 PM IST
  • ಬೆಳಗಾವಿ ರಾಣಿ ಚನ್ನಮ್ಮ, ಧಾರವಾಡ, ಗುಲ್ಬರ್ಗ ವಿವಿಗಳಿಗೆ ಅನುದಾನ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
  • ಜಮ್ಮುವಿನಲ್ಲಿ ಪ್ರಧಾನಮಂತ್ರಿ ಉಷಾ ಯೋಜನೆಗೆ ಚಾಲನೆ
  • ನೇರ ಪ್ರಸಾರದಲ್ಲಿ ಸಚಿವ ಪ್ರಹ್ಲಾದ ಜೋಶಿ, ಸಂಸದೆ ಮಂಗಳಾ ಅಂಗಡಿ ಭಾಗಿ
ಕರ್ನಾಟಕ, ಜಮ್ಮು- ಕಾಶ್ಮೀರ ಸೇರಿ ದೇಶದ ವಿವಿಗಳ ಅಭಿವೃದ್ಧಿಗೆ 3600 ಕೋಟಿ ರೂ.   ಬಿಡುಗಡೆ title=

ಬೆಳಗಾವಿ: ಕರ್ನಾಟಕ, ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ಅನೇಕ ವಿಶ್ವ ವಿದ್ಯಾಲಯಗಳಿಗೆ ಕೇಂದ್ರ ಸರ್ಕಾರ 3600 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಪ್ರಧಾನಮಂತ್ರಿ ಉಷಾ ಯೋಜನೆಯಡಿ 78 ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅನುದಾನ ನೀಡಿದ್ದು, ಇಂದೇ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ. 

ಉಷಾ ಯೋಜನೆಯಡಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂಪಾಯಿ, ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ 20 ಕೋಟಿ ರೂ. ಹಾಗೂ ಧಾರವಾಡ ವಿಶ್ವವಿದ್ಯಾಲಯಕ್ಕೆ 20 ಕೋಟಿ ರೂಪಾಯಿ ದೊರೆಯಲಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ. 

ಇದನ್ನೂ ಓದಿ : Rahul Gandhi: 'ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ... ಮೋದಿ OBCಯಲ್ಲಿ ಹುಟ್ಟಿಲ್ಲʼ!: ರಾಹುಲ್‌ ಗಾಂಧಿ 
ಜಮ್ಮು- ಕಾಶ್ಮೀರ ಸೇರಿದಂತೆ ದೇಶದ ಹಲವಾರು ವಿಶ್ವವಿದ್ಯಾಲಯಗಳ ಅಭಿವೃದ್ಧಿಗಾಗಿ ಪ್ರಧಾನಮಂತ್ರಿ ಈ ಅನುದಾನ ಬಿಡುಗಡೆ ಮಾಡಿದ್ದಾರೆ. ಸಾಕ್ಷರತೆಯಿಂದ ಮಾತ್ರ ದೇಶದ ನೈಜ ವಿಕಾಸ ಸಾಧ್ಯವೆಂದು ನಂಬಿರುವ ಪ್ರಧಾನಿ ಮೋದಿ, ದೇಶದ ವಿಶ್ವವಿದ್ಯಾಲಯಗಳಿಗೆ ಹೊಸ ಜೀವ ತುಂಬಲು ಇಂಥ ಮಹತ್ತರವಾದ ಯೋಜನೆಗೆ ಚಾಲನೆ ನೀಡಿದ್ದಾರೆ ಎಂದು ಜೋಶಿ ಹೇಳಿದರು.

ಭಾರತದ ಯುವ ಜನತೆಗೆ ಶಿಕ್ಷಣ ಮತ್ತು ಮೂಲಸೌಕರ್ಯವನ್ನು ಅಭಿವೃದ್ಧಿಗೊಳಿಸಿ ಭಾರತವನ್ನು ವಿಶ್ವಗುರು ಮಾಡುವ ಧ್ಯೇಯ ಪ್ರಧಾನಿಯವರದ್ದಾಗಿದೆ. ಈ ನಿಟ್ಟಿನಲ್ಲಿ ಪ್ರಾಥಮಿಕ ಶಿಕ್ಷಣದಿಂದಲೇ  ವಿದ್ಯಾರ್ಥಿಗಳ ಅಮೂಲ್ಯ ಜೀವನ ರೂಪಿಸಲು ಪ್ರಧಾನಿ ಹೊಸ ಹೊಸ ಯೋಜನೆಗಳನ್ನು ಹಾಕಿಕೊಂಡಿದ್ದಾರೆ ಎಂದರು.

ಇದನ್ನೂ ಓದಿ :Daily GK Quiz: ಭಾರತದಲ್ಲಿ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯ ಯಾವುದು?

ಜಮ್ಮು ಅಭಿವೃದ್ಧಿಗೆ ಐತಿಹಾಸಿಕ ಕ್ರಮ ಜಮ್ಮು- ಕಾಶ್ಮೀರ ಎಂದರೆ ಹಿಂಸಾಚಾರ, ಭಯೋತ್ಪಾದನೆಯೇ ಎಲ್ಲರ ಮನದಲ್ಲಿ ಹಾದು ಹೋಗುತ್ತಿತ್ತು. ಈಗದು ಸಂಪೂರ್ಣ ಬದಲಾಗಿದೆ. ಅಭಿವೃದ್ಧಿ ಪರ್ವ ಆರಂಭವಾಗಿದೆ. ವಿಶ್ವವಿದ್ಯಾಲಯಗಳ ಅನುದಾನ ಬಿಡುಗಡೆ ಸೇರಿದಂತೆ ಜಮ್ಮುವಿನ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಪ್ರಧಾನಿ ಮೋದಿ ಅವರು ಇಂದು ಅಲ್ಲಿಂದಲೇ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News