ಸಚಿವರ ಕಾರ್ಯವೈಖರಿ ಬಗ್ಗೆ ಕೆ.ಸಿ.ವೇಣುಗೋಪಾಲ್ ಮೌಲ್ಯಮಾಪನ

ಮುಂಬರುವ ಚುನಾವಣೆ ದೃಷ್ಟಿಯಿಂದ ಸಚಿವರುಗಳಿಗೆ ಚುನಾವಣಾ ಜವಾಬ್ದಾರಿ ಹಂಚುವ ಸಲುವಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನಿನ್ನೆ ಸಚಿವರ ಕಾರ್ಯವೈಖರಿ ಬಗ್ಗೆ ಮೌಲ್ಯಮಾಪನ ನಡೆಸಿದ್ದಾರೆ.

Last Updated : Sep 1, 2017, 01:04 PM IST
ಸಚಿವರ ಕಾರ್ಯವೈಖರಿ ಬಗ್ಗೆ ಕೆ.ಸಿ.ವೇಣುಗೋಪಾಲ್ ಮೌಲ್ಯಮಾಪನ title=

ಬೆಂಗಳೂರು: ಮುಂಬರುವ ಚುನಾವಣೆ ದೃಷ್ಟಿಯಿಂದ ಸಚಿವರುಗಳಿಗೆ ಚುನಾವಣಾ ಜವಾಬ್ದಾರಿ ಹಂಚುವ ಸಲುವಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನಿನ್ನೆ ಸಚಿವರ ಕಾರ್ಯವೈಖರಿ ಬಗ್ಗೆ ಮೌಲ್ಯಮಾಪನ ನಡೆಸಿದ್ದಾರೆ.

ಬೆಂಗಳೂರಿನ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸಭೆ ಕರೆದಿದ್ದರು. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸೇರಿದಂತೆ ಸಚಿವ ಸಂಪುಟದ 27 ಸಚಿವರುಗಳು ಭಾಗಿಯಾಗಿದ್ದರು. 

2018 ರ ಚುನಾವಣೆಯಲ್ಲಿ ಪಕ್ಷವನ್ನು ಬಲಪಡಿಸುವ ಸಲುವಾಗಿ ಮತ್ತು ಸಚಿವರಿಗೆ ಚುನಾವಣೆ ಜವಾಬ್ದಾರಿಯನ್ನು ನೀಡುವ ಸಲುವಾಗಿ ಸಭೆ ಕರೆಯಲಾಗಿತ್ತು.  ಮೌಲ್ಯಮಾಪನ ಮಾಡಿದ ಬಳಿಕ ಸಚಿವರುಗಳಿಗೆ ಜವಾಬ್ದಾರಿಯನ್ನು ಹಂಚಲು ಕೆ.ಸಿ.ವೇಣುಗೋಪಾಲ್ ನಿರ್ಧರಿಸಿದ್ದಾರೆ.

Trending News