ಚುನಾವಣಾ ಬಾಂಡ್‌ನಿಂದ ಮೋದಿ ಮುಖವಾಡ ಕಳಚಿ ಬಿದ್ದಿದೆ: ಸಚಿವ ಎಂ.ಬಿ ಪಾಟೀಲ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಅಭಿವೃದ್ಧಿಯ ಬಗ್ಗೆ ಹಾಗೂ ಜನರ ಕಷ್ಟನಷ್ಟಗಳ ಬಗ್ಗೆ ನಿಜವಾದ ಕಾಳಜಿ ಇತ್ತು. ಪ್ರವಾಹ, ಬರ ಸೇರಿದಂತೆ ಯಾವುದೇ ನೈಸರ್ಗಿಕ ವಿಪತ್ತು ಉಂಟಾದಾಗ ಕರ್ನಾಟಕ ಸೇರಿದಂತೆ ದೇಶದ ಯಾವುದೇ ಸ್ಥಳಕ್ಕೆ ಖುದ್ದು ಭೇಟಿ ನೀಡುತ್ತಿದ್ದರು. ಆದರೆ, ಮೋದಿ ಅವರಿಗೆ ಇಂತಹ ನಿಜವಾದ ಕಾಳಜಿ ಇಲ್ಲ. - ಸಚಿವ ಎಂ.ಬಿ. ಪಾಟೀಲ 

Written by - Yashaswini V | Last Updated : Mar 18, 2024, 12:26 PM IST
  • ಚುನಾವಣಾ ಬಾಂಡ್ ರೂಪದಲ್ಲಿ ಕಾಂಗ್ರೆಸ್ ಪಕ್ಷಕ್ಕೂ ಒಂದಷ್ಟು ಹಣ ಬಂದಿದೆ.
  • ಆದರೆ, ಅದು ಸಹಜವಾಗಿ ಬಂದಿರುವಂತದ್ದು.
  • ಅದು ಯಾವುದೇ ಇಡಿ, ಸಿಬಿಐ ಇನ್ನಿತರ ಸಂಸ್ಥೆಗಳನ್ನು ಬಳಸಿಕೊಂಡು ಬೆದರಿಕೆ ಹಾಕಿ ವಸೂಲಿ ಮಾಡಿರುವಂತದ್ದಲ್ಲ- ಸಚಿವ ಎಂ.ಬಿ. ಪಾಟೀಲ
ಚುನಾವಣಾ ಬಾಂಡ್‌ನಿಂದ ಮೋದಿ ಮುಖವಾಡ ಕಳಚಿ ಬಿದ್ದಿದೆ: ಸಚಿವ ಎಂ.ಬಿ ಪಾಟೀಲ  title=

ಬೆಂಗಳೂರು: ಚುನಾವಣಾ ಬಾಂಡ್ ವಿಷಯದಲ್ಲಿ ಸುಪ್ರೀಂಕೋರ್ಟ್ ತೆಗೆದುಕೊಂಡ ನಿರ್ಣಯದಿಂದ ಮೋದಿ ಅವರ ನೈತಿಕತೆಯ ಮುಖವಾಡ ಕಳಚಿಬಿದ್ದಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಪ್ರಹಾರ ಮಾಡಿದರು.

ಇಂದು ಸುದ್ದಿಗಾರರ ಜತೆ ಮಾತನಾಡಿದ ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ, ಪ್ರಧಾನಿ ಮೋದಿಯವರು "ನಾನೂ ತಿನ್ನುವುದಿಲ್ಲ, ತಿನ್ನುವುದಕ್ಕೂ ಬಿಡುವುದಿಲ್ಲ" ಎಂದು ಹೇಳಿಕೊಳ್ಳುತ್ತಾ ಹುಸಿ ವರ್ಚಸ್ಸು ಸೃಷ್ಟಿಸಿಕೊಂಡಿದ್ದರು. ಆ ಹುಸಿ ವರ್ಚಸ್ಸಿಗೆ ಈಗ ಸರಿಯಾದ ಹೊಡೆತ ಬಿದ್ದಿದೆ ಎಂದು ಪ್ರಧಾನಿ ವಿರುದ್ಧ ಟೀಕಾಪ್ರಹಾರ ನಡೆಸಿದರು. 

ಹೆಚ್ಚಿನ ಸಂದರ್ಭಗಳಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಳಿಗೆ ಒಳಗಾದ ನಂತರ ಅಥವಾ ಗುತ್ತಿಗೆಗಳನ್ನು ಪಡೆದ ನಂತರ ಬಿಜೆಪಿ ಹೆಸರಲ್ಲಿ ಚುನಾವಣಾ ಬಾಂಡ್ ತೆಗೆದುಕೊಂಡಿರುವುದು ಬಹಿರಂಗಗೊಂಡಿದೆ. ಇದರಿಂದಾಗಿ, ಭ್ರಷ್ಟಾಚಾರ, ನೈತಿಕತೆಯ ಬಗ್ಗೆ ಪ್ರಸ್ತಾಪಿಸುತ್ತಿದ್ದ ಮೋದಿ ಅವರ ನಿಜವಾದ ಬಣ್ಣ ಏನು ಎಂಬುದು ಗೊತ್ತಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ- ತಾನು ಎಂಪಿಯಾದರೇ ಸಿಎಂ ಕುರ್ಚಿ ಅಲುಗಾಡಲಿದೆ ಎಂಬ ಪ್ರತಾಪ್ ಸಿಂಹ ಹೇಳಿಕೆ ಟಾಂಗ್ ನೀಡಿದ ಸಿಎಂ ಸಿದ್ದರಾಮಯ್ಯ

ಚುನಾವಣಾ ಬಾಂಡ್ ರೂಪದಲ್ಲಿ ಕಾಂಗ್ರೆಸ್ ಪಕ್ಷಕ್ಕೂ ಒಂದಷ್ಟು ಹಣ ಬಂದಿದೆ. ಆದರೆ, ಅದು ಸಹಜವಾಗಿ ಬಂದಿರುವಂತದ್ದು. ಅದು ಯಾವುದೇ ಇಡಿ, ಸಿಬಿಐ ಇನ್ನಿತರ ಸಂಸ್ಥೆಗಳನ್ನು ಬಳಸಿಕೊಂಡು ಬೆದರಿಕೆ ಹಾಕಿ ವಸೂಲಿ ಮಾಡಿರುವಂತದ್ದಲ್ಲ ಎಂದು ಪಾಟೀಲ ಸಮರ್ಥಿಸಿಕೊಂಡರು.

ಚುನಾವಣಾ ಬಾಂಡ್ ವಿಷಯ ಇಷ್ಟಕ್ಕೇ ನಿಲ್ಲುವುದಿಲ್ಲ. ಇದರ ಆಳ ಬಹಳ ಇದೆ. ಇದು ಇನ್ನೂ ಮುಂದುವರಿಯಲಿದೆ. ಚುನಾವಣಾ ಬಾಂಡ್ ಗೆ  ಸಂಬಂಧಿಸಿದಂತೆ ಎಲ್ಲಾ ಪಕ್ಷಗಳನ್ನೂ ತನಿಖೆಗೆ ಒಳಪಡಿಸಲಿ ಎಂದು ಅವರು ಒತ್ತಿ ಹೇಳಿದರು.

ಚುನಾವಣಾ ಬಾಂಡ್ ವ್ಯವಸ್ಥೆಯಿಂದ ಮತದಾನ ಪ್ರಕ್ರಿಯೆಯಲ್ಲಿ  ಪಾರದರ್ಶಕತೆ ತರಲು ಸಾಧ್ಯ ಎಂದು ಭಾವಿಸಲಾಗಿತ್ತು. ಆದರೆ, ಇದರ ದುರುಪಯೋಗವೇ ಜಾಸ್ತಿಯಾಗಿದೆ ಎಂದೂ ಅವರು ಹೇಳಿದರು.

ಇದನ್ನೂ ಓದಿ- ದೇಶದ ಸಂಪತ್ತನ್ನು ಸೃಷ್ಟಿಸುವವರು ಶ್ರಮಿಕರು, ದುಡಿಯುವ ವರ್ಗದವರಿಗೆ ಆರ್ಥಿಕ ಶಕ್ತಿ ನೀಡುವುದೇ ಗ್ಯಾರಂಟಿ ಯೋಜನೆಗಳ ಗುರಿ: ಸಿಎಂ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಅಭಿವೃದ್ಧಿಯ ಬಗ್ಗೆ ಹಾಗೂ ಜನರ ಕಷ್ಟನಷ್ಟಗಳ ಬಗ್ಗೆ ನಿಜವಾದ ಕಾಳಜಿ ಇತ್ತು. ಪ್ರವಾಹ, ಬರ ಸೇರಿದಂತೆ ಯಾವುದೇ ನೈಸರ್ಗಿಕ ವಿಪತ್ತು ಉಂಟಾದಾಗ ಕರ್ನಾಟಕ ಸೇರಿದಂತೆ ದೇಶದ ಯಾವುದೇ ಸ್ಥಳಕ್ಕೆ ಖುದ್ದು ಭೇಟಿ ನೀಡುತ್ತಿದ್ದರು. ಆದರೆ, ಮೋದಿ ಅವರಿಗೆ ಇಂತಹ ನಿಜವಾದ ಕಾಳಜಿ ಇಲ್ಲ. ಹೀಗಾಗಿಯೇ, ರಾಜ್ಯದಲ್ಲಿ ಬರ ಇದ್ದಾಗ ಅವರು ಈ ಕಡೆ ಸುಳಿಯಲಿಲ್ಲ. ಈಗ, ಚುನಾವಣೆ ಎಂದ ತಕ್ಷಣ ಎರಡು ಸಲ ಇಲ್ಲಿಗೆ ಭೇಟಿಕೊಟ್ಟಿದ್ದಾರೆ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News