ಲೋಡ್ ಶೆಡ್ಡಿಂಗ್: ಬಿಜೆಪಿ ಎಷ್ಟು ಪ್ರಮಾಣದ ವಿದ್ಯುತ್ ಉತ್ಪಾದನೆ ಹೆಚ್ಚಿಸಿತ್ತು?- ಡಿಕೆಶಿ

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಡಿಕೆಶಿ, ‘ಮಳೆ ಬಿದ್ದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ, ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ 4 ವರ್ಷಗಳಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಳ ಮಾಡಿಲ್ಲ. ಹೀಗಾಗಿ ಈ ಪರಿಸ್ಥಿತಿ ಬಂದಿದೆ ಎಂದು ಟೀಕಿಸಿದರು.

Written by - Prashobh Devanahalli | Last Updated : Oct 12, 2023, 04:02 PM IST
  • ರಾಜ್ಯದಲ್ಲಿ ಮಳೆಯಾಗದ ಕಾರಣ ಬರ ಪರಿಸ್ಥಿತಿ ಹಿನ್ನೆಲೆ ವಿದ್ಯುತ್ ಕೊರತೆ ಎದುರಾಗಿದೆ
  • ಬಿಜೆಪಿ ನಾಯಕರು ತಮ್ಮ ಅಧಿಕಾರಾವಧಿಯಲ್ಲಿ ಎಷ್ಟು ಪ್ರಮಾಣದ ವಿದ್ಯುತ್ ಉತ್ಪಾದನೆ ಹೆಚ್ಚಳ ಮಾಡಿದ್ದರು?
  • ಕಳೆದ 4 ವರ್ಷಗಳಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಳ ಮಾಡಿಲ್ಲ
ಲೋಡ್ ಶೆಡ್ಡಿಂಗ್: ಬಿಜೆಪಿ ಎಷ್ಟು ಪ್ರಮಾಣದ ವಿದ್ಯುತ್ ಉತ್ಪಾದನೆ ಹೆಚ್ಚಿಸಿತ್ತು?- ಡಿಕೆಶಿ  title=
ಬಿಜೆಪಿಗೆ ಡಿಕೆಶಿ ತಿರುಗೇಟು!

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆ ವಿದ್ಯುತ್ ಕೊರತೆ ಎದುರಾಗಿದೆ. ಈ ವಿಚಾರವಾಗಿ ಟೀಕೆ ಮಾಡುವ ಬಿಜೆಪಿ ನಾಯಕರು ತಮ್ಮ ಅಧಿಕಾರ ಅವಧಿಯಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಎಷ್ಟು ಪ್ರಮಾಣ ಹೆಚ್ಚಳ ಮಾಡಿದ್ದರು ಎಂಬುದನ್ನು ಹೇಳಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಡಿಕೆಶಿ, ‘ಮಳೆ ಬಿದ್ದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ, ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಹಿಂದೆ ನಮ್ಮ ಸರ್ಕಾರ ಇದ್ದಾಗ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ನಾವು ಆಗ 10 ರಿಂದ 13 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಹೆಚ್ಚಳ ಮಾಡಿದ್ದೆವು. ಕಳೆದ 4 ವರ್ಷಗಳಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಳ ಮಾಡಿಲ್ಲ. ಹೀಗಾಗಿ ಈ ಪರಿಸ್ಥಿತಿ ಬಂದಿದೆ’ ಎಂದು ಟೀಕಿಸಿದರು.

‘ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ. ರಾಜ್ಯದ ಅಣೆಕಟ್ಟುಗಳಲ್ಲಿ ನೀರಿನ ಲಭ್ಯತೆ ಕಡಿಮೆ ಇದೆ. ಬರಗಾಲ ಎದುರಾದಾಗ ವಿದ್ಯುತ್ ಉತ್ಪಾದನೆ ಕುಸಿಯುತ್ತದೆ. ಅಲ್ಲದೇ ಪ್ರತಿವರ್ಷ ಶೇ.10ರಿಂದ 15ರಷ್ಟು ಬೇಡಿಕೆ ಹೆಚ್ಚಾಗುವುದು ವಾಡಿಕೆ. ನಮ್ಮ ಸರ್ಕಾರ ಇನ್ನೂ 10 ಸಾವಿರ ಎಕರೆಯಲ್ಲಿ ಸೋಲಾರ್ ವಿದ್ಯುತ್ ಹಾಗೂ ವಿಂಡ್ ಪವರ್ ಉತ್ಪಾದನೆಗೆ ಕಾರ್ಯಕ್ರಮ ರೂಪಿಸುತ್ತಿದೆ’ ಎಂದು ತಿಳಿಸಿದರು.

ಇದನ್ನೂ ಓದಿ: ಲೋಡ್ ಶೆಡ್ಡಿಂಗ್ ಟೀಕೆ ಮಾಡುವ ಬಿಜೆಪಿ ತನ್ನ ಅವಧಿಯಲ್ಲಿ ಎಷ್ಟು ಪ್ರಮಾಣದ ವಿದ್ಯುತ್ ಉತ್ಪಾದನೆ ಮಾಡಿತ್ತು..?

‘ರೈತರಿಂದಲೂ ವಿದ್ಯುತ್ ಬೇಡಿಕೆ ಪ್ರಮಾಣ ಹೆಚ್ಚಾಗಿದೆ. ರೈತರಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ. ಈಗಾಗಲೇ ನಮ್ಮ ಸಚಿವರು ಕಾರ್ಯಪ್ರವೃತ್ತರಾಗಿದ್ದು, ಸಮಸ್ಯೆ ಬಗೆಹರಿಸುತ್ತೇವೆ. ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅವರು ಕೇಂದ್ರ ವಿದ್ಯುತ್ ಸಚಿವರ ಬಳಿ ಚರ್ಚೆ ಮಾಡಿ ಕೇಂದ್ರಿಯ ಗ್ರಿಡ್‌ಗಳಿಂದ ವಿದ್ಯುತ್ ಪೂರೈಕೆಗೆ ಮನವಿ ಮಾಡಿದ್ದಾರೆ’ ಎಂದು ಹೇಳಿದರು.

ಕಾವೇರಿ ವಿಚಾರವಾಗಿ ಮೇಲ್ಮನವಿ ಸಲ್ಲಿಸುತ್ತೇವೆ

‘ಕಾವೇರಿ ನೀರಿನ ಹಂಚಿಕೆ ವಿಚಾರವಾಗಿ ಮತ್ತೊಮ್ಮೆ ಕಾವೇರಿ ನೀರು ನಿಯಂತ್ರಣ ಸಮಿತಿ ಮುಂದೆ ಮೇಲ್ಮನವಿ ಸಲ್ಲಿಸುತ್ತೇವೆ. ಬೆಂಗಳೂರಿನ ಸುತ್ತಮುತ್ತ ಮಳೆ ಸುರಿದ ಪರಿಣಾಮ ಬಿಳಿಗುಂಡ್ಲುವಿಗೆ ಹರಿಯುವ ನೀರಿನ ಪ್ರಮಾಣ ಅಲ್ಪ ಪ್ರಮಾಣದಲ್ಲಿ ಸರಿದೂಗಿದೆ. ಮಳೆ ಸುರಿದಿದ್ದು ಎರಡು ಮೂರು ದಿನ ಮಾತ್ರ. 200ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದ್ದು, ಸಂಕಷ್ಟದಲ್ಲಿ ಇದ್ದೇವೆ’ ಎಂದು ಹೇಳಿದರು.

ಮಹಾರಾಷ್ಟ್ರ ಮತ್ತೆ ಗಡಿ ವಿಚಾರದಲ್ಲಿ ಖ್ಯಾತೆ ತೆಗೆದಿರುವ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, “ನಮ್ಮ ರಾಜ್ಯದಲ್ಲಿ ನಾವು ಮಾಡುತ್ತೇವೆ, ಅವರ ರಾಜ್ಯದಲ್ಲಿ ಅವರು ಮಾಡಲಿ. ಸುಮ್ಮನೆ ಅಶಾಂತಿ ಮೂಡಿಸುವ ಪ್ರಯತ್ನ ಮಾಡಲಾಗುತ್ತಿದ್ದು, ನಾವು ಅದಕ್ಕೆ ಅವಕಾಶ ನೀಡುವುದಿಲ್ಲ’ ಎಂದು ತಿಳಿಸಿದರು.

ಇದನ್ನೂ ಓದಿ: ಕಾಂಗ್ರೆಸ್ ಸೇರಲು ಕಾಯುತ್ತಿರುವ 42 ಮುಖಂಡರ ಅರ್ಜಿ ನನ್ನ ಬಳಿ ಇದೆ : ಡಿಕೆಶಿ ಹೊಸ ಬಾಂಬ್‌

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News