Lok Sabha Election 2024: ಶಿವಮೊಗ್ಗದಲ್ಲಿ ಇಂದು ಪ್ರಧಾನಿ ಮೋದಿ ಅಬ್ಬರ

Lok Sabha Election 2024: ಲೋಕಸಭೆ ಚುನಾವಣೆ ಬಿಜೆಪಿ ರಣಕಹಳೆ ಮೊಳಗಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಕರ್ಕಾಟಕದ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಲೋಕಸಭಾ ಚುನಾವಣೆ ದಿನಾಂಕ ಪ್ರಕಟವಾದ ಬಳಿಕ ದಕ್ಷಿಣ ರಾಜ್ಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮೊದಲ ಕಾರ್ಯಕ್ರಮ ಇದಾಗಿದೆ. 

Written by - Yashaswini V | Last Updated : Mar 18, 2024, 08:26 AM IST
  • ಇಂದು ಕರುನಾಡಿಗೆ ಪ್ರಧಾನಿ ಮೋದಿ ಆಗಮನ
  • ಶಿವಮೊಗ್ಗದಲ್ಲಿ ಬಿಜೆಪಿ ಬೃಹತ್‌ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ
  • ಶಿವಮೊಗ್ಗದ ಶ್ರೀ ಅಲ್ಲಮ ಪ್ರಭು ಮೈದಾನದಲ್ಲಿ ಮ. 1 ಗಂಟೆಗೆ ಚುನಾವಣಾ ರ್ಯಾಲಿಯಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ
Lok Sabha Election 2024: ಶಿವಮೊಗ್ಗದಲ್ಲಿ ಇಂದು ಪ್ರಧಾನಿ ಮೋದಿ ಅಬ್ಬರ title=

Lok Sabha Election 2024 PM Narendra Modi Karntaka Visit: ಲೋಕಸಭಾ ಚುನಾವಣೆಗೆ ರಣಕಹಳೆ ಮೊಳಗಿಸಲು ಬಿಜೆಪಿ ಸಜ್ಜಾಗಿದೆ. ಈ ಹಿನ್ನಲೆಯಲ್ಲಿ ಮಾಜಿ ಸಿಎಂ ಬಿ‌ಎಸ್ ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗಕ್ಕೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದು ಜಿಲ್ಲೆಯ ಅಲ್ಲಮಪ್ರಭು ಮೈದಾನದಲ್ಲಿ ಮಧ್ಯಾಹ್ನ 1ಗಂಟೆಗೆ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಈ ಸಮಾರಂಭದಲ್ಲಿ 1.5 ಲಕ್ಷಕ್ಕೂ ಹೆಚ್ಚು ಮಂದಿ ಭಾಗಿಯಾಗುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ. 

ಲೋಕಸಭಾ ಚುನಾವಣೆ ದಿನಾಂಕ ಪ್ರಕಟವಾದ ಬಳಿಕ ದಕ್ಷಿಣ ರಾಜ್ಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮೊದಲ ಕಾರ್ಯಕ್ರಮ ಇದಾಗಿದೆ. ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರಧಾನಿ ಮೋದಿಯವರ ಸಮಾವೇಶ ನಡೆಯಲಿದೆ. ಕರುನಾಡಿನಲ್ಲಿ ಪ್ರಧಾನಿ ಮೋದಿಯವರ ಈ ಬೃಹತ್ ರ್ಯಾಲಿಯಲ್ಲಿ ಭಾಗಿಯಾಗಲು ರಾಜ್ಯದ ಮೂಲೆ ಮೂಲೆಗಳಿಂದ ಬಿಜೆಪಿ ಕಾರ್ಯಕರ್ತರು ಆಗಮಿಸುವ ನಿರೀಕ್ಷೆ ಇರುವುದರಿಂದ ಸುಗಮ ಸಂಚಾರಕ್ಕಾಗಿ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. 

ಪ್ರಧಾನಿ ಮೋದಿಯವರ ಈ ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ನಿರೀಕ್ಷೆಯಿರುವುದರಿಂದ ಟ್ರಾಫಿಕ್‌ ಜಾಮ್‌ ಆಗುವ ಸಾಧ್ಯತೆ  ಹಿನ್ನೆಲೆಯಲ್ಲಿ ವಾಹನ ಸವಾರರಿಗೆ ಮಾರ್ಗ ಬದಲಾವಣೆ ಹಾಗೂ ಶೂನ್ಯ ಸಂಚಾರ ಹಾಗೂ ವಾಹನ ನಿಲುಗಡೆ ನಿಷೇಧ ಸಂಬಂಧ ಶಿವಮೊಗ್ಗ ಜಿಲ್ಲಾಡಳಿತ ಆದೇಶ ಹೊರಡಿಸಿದೆ. 

ಇದನ್ನೂ ಓದಿ- Lok Sabha Election 2024: 4600 ಕೋಟಿಗೂ ಅಧಿಕ ದಾನ! ಇಲೆಕ್ಟೋರಲ್ ಬಾಂಡ್ ಅಂಕಿಅಂಶಗಳನ್ನು ಬಿಡುಗಡೆ ಮಾಡಿದ ಚುನಾವಣಾ ಆಯೋಗ

ಶೂನ್ಯ ಸಂಚಾರ: 
ದಿನಾಂಕ:18.3.2024 ರಿಂದ ಬೆಳಗ್ಗೆ 06-00 ರಿಂದ ಸಂಜೆ 06-00 ವರೆಗೆ ಶೂನ್ಯ ಸಂಚಾರ ಸೋಗಾನೆ ವಿಮಾನ ನಿಲ್ದಾಣದಿಂದ ಎಂಆರ್ ಎಸ್ ಸರ್ಕಲ್ -ಶಂಕರಮಠ ಸರ್ಕಲ್ ಕರ್ನಾಟಕ ಸಂಘ-ಶಿವಪ್ಪ ನಾಯಕ ಸರ್ಕಲ್ ಎಎ ಸರ್ಕಲ್-ಅಶೋಕ ಸರ್ಕಲ್-ಹೆಲಿಪ್ಯಾಡ ಸರ್ಕಲ್ ವರೆಗೆ
ಹೆಲಿಪ್ಯಾಡ್ ಸರ್ಕಲ್ ನಿಂದ ಕುವೆಂಪು ರಸ್ತೆ ಮಾರ್ಗವಾಗಿ ನಂದಿ ಪೆಟ್ರೋಲ್ ಬಂಕ್ ಕ್ರಾಸ್. ವಿನೋಬನಗರ 60 ಅಡಿ ರಸ್ತೆ, ಸೈಕಲೋತ್ಸವ ಸರ್ಕಲ್, ರಾಜ್ ಕುಮಾರ್ ಸರ್ಕಲ್ ವರೆಗೆ. ಪೊಲೀಸ್ ಚೌಕಿಯಿಂದ ಉಷಾ ಸರ್ಕಲ್ ವರೆಗೆ ಶೂನ್ಯ ಸಂಚಾರ ಲಕ್ಷ್ಮೀ ಟಾಕೀಸ್ ಸರ್ಕಲ್ ನಿಂದ ಜೈಲು ರಸ್ತೆ,ಕುವೆಂಪು ರಸ್ತೆ ಮಾರ್ಗವಾಗಿ ಸರ್ಕಲ್ ವರಗೆ ಶೂನ್ಯ ಸಂಚಾರವಿರಲಿದೆ. 

ಸಾರ್ವಜನಿಕ ವಾಹನಗಳ: ಮಾರ್ಗ ಬದಲಾವಣೆ:- 
ದಿನಾಂಕ: 18.3.2024 ರಂದು ಬೆಳಿಗ್ಗೆ 06-00 ಗಂಟೆಯಿಂದ ಸಂಜೆ 06-00 ಗಂಟೆಯವರಗೆ ಸಾರ್ವಜನಿಕ ವಾಹನಗಳಿಗೂ ಮಾರ್ಗ ಬದಲಾವಣೆ ಮಾಡಲಾಗಿದೆ.  ಈ ಕುರಿತಂತೆ ಮಾರ್ಗಸೂಚಿ ಹೊರಡಿಸಿರುವ ಜಿಲ್ಲಾಡಳಿತ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ... 
* ತೀರ್ಥಹಳ್ಳಿ ಭಾಗದಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು- ನ್ಯೂ ಮಂಡ್ಲಿ ಬಳಿ ಎಡಕ್ಕೆ ತಿರುಗಿ ಗೋಪಾಳ ಸರ್ಕಲ್ ಅಯ್ಯೋಳ ಸರ್ಕಲ್ ಬಲಕ್ಕೆ ತಿರುಗಿ ಎ.ಪಿ.ಎಂ.ಸಿ ಒಳ ಭಾಗಕ್ಕೆ ಬಂದು ಸಾರ್ವಜನಿಕರನ್ನು ಇಳಿಸಿದ ನಂತರ ಪಾರ್ಕಿಂಗ್ ಸ್ಥಳ ಗುರುತಿಸಿದ ಎ.ಪಿ.ಎಂ.ಸಿ ಒಳ ಭಾಗದಲ್ಲಿ ಪಾರ್ಕಿಂಗ್ ಮಾಡಬೇಕು. 
* ನಗರ ಹೊಸನಗರ ಭಾಗಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು- 
ಅಯ್ಯೋಳ ಸರ್ಕಲ್ ಸಾಗರ ರಸ್ತೆ ಅಯ್ಯೋಳ ಸರ್ಕಲ್ ಪೊಲೀಸ್ ಚೌಕಿಗೆ ಬಂದು ಸಾರ್ವಜನಿಕರನ್ನು ಇಳಿಸಿದ ನಂತರ ಪಾರ್ಕಿಂಗ್ ಸ್ಥಳ ಗುರುತಿಸಿದ ಎ.ಪಿ.ಎಂ.ಸಿ ಮತ್ತು ಸೋಮಿನಕೊಪ್ಪ ಆದರ್ಶನಗರ ಲೇ ಔಟ್ ನಲ್ಲಿ ಪಾರ್ಕಿಂಗ್ ಮಾಡುವುದು.
* ಶಿಕಾರಿಪುರ, ಶಿರಾಳಕೊಪ್ಪ, ಆನವಟ್ಟಿ ಭಾಗಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು- ಬಸವನಗಂಗೂರು-ಬೊಮ್ಮನಕಟ್ಟೆ ಮಾರ್ಗವಾಗಿ ಬೊಮ್ಮನಕಟ್ಟೆಗೆ ಬಂದು ಸಾರ್ವಜನಿಕರನ್ನು ಇಳಿಸಿದ ನಂತರ ಪಾರ್ಕಿಂಗ್ ಸ್ಥಳ ಗುರುತಿಸಿದ ಬೊಮ್ಮನಕಟ್ಟೆ ಎಸ್.ಎಲ್,ಕೆ ಲೇ ಔಟ್ ನಲ್ಲಿ ಪಾರ್ಕಿಂಗ್ ಮಾಡುವುದು.
* ಹೊನ್ನಾಳಿ, ಹರಿಹರ ದಾವಣಗೆರೆ ಹಾವೇರಿ ಭಾಗಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು- ಸವಳಂಗ ಬಸವನಗಂಗೂರು-ಬೊಮ್ಮನಕಟ್ಟೆ- ಮಾರ್ಗವಾಗಿ ಬೊಮ್ಮನಕಟ್ಟೆಗೆ ಬಂದು ಸಾರ್ವಜನಿಕರನ್ನು ಇಳಿಸಿದ ನಂತರ ಪಾರ್ಕಿಂಗ್ ಸ್ಥಳ ಗುರುತಿಸಿದ ಬೊಮ್ಮನಕಟ್ಟೆ ಎಸ್.ಎಲ್.ಕೆ. ಲೇ ಔಟ್ ನಲ್ಲಿ ಪಾರ್ಕಿಂಗ್ ಮಾಡುವುದು.
* ಭದ್ರಾವತಿ-ಚಿಕ್ಕಮಗಳೂರು ಎನ್ ಆರ್ ಪುರ ಕೊಪ್ಪ ಭಾಗಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು- ಎಂ.ಆರ್, ಎಸ್ ಸರ್ಕಲ್ -ಬೈ ಪಾಸ್ ರಸ್ತೆ ಸಂದೇಶ್ ಮೋಟಾರ್ ಸರ್ಕಲ್ ನ್ಯೂ ಮಂಡ್ಲಿ ಸರ್ಕಲ್ -ಗೋಪಾಳ ಸರ್ಕಲ್ - ಆಡ್ಕೊಳ ಸರ್ಕಲ್ ಬಲಕ್ಕೆ - ಎ.ಪಿ.ಎಂ.ಸಿ ಒಳಭಾಗಕ್ಕೆ ಬಂದು ಸಾರ್ವಜನಿಕರನ್ನು ಇಳಿಸಿದ ನಂತರ ಪಾರ್ಕಿಂಗ್ ಸ್ಥಳ ಗುರುತಿಸಿದ ಎ.ಪಿ.ಎಂ.ಸಿ ಒಳಭಾಗದಲ್ಲಿ ಪಾರ್ಕಿಂಗ್ ಮಾಡುವುದು.
* ಹೊಳೆಹೊನ್ನೂರು ಚನ್ನಗಿರಿ ಚಿತ್ರದುರ್ಗದ ಭಾಗಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು- ಹೊಳೆಹೊನ್ನೂರು ಸರ್ಕಲ್ ಶಂಕರ ಮಠ ಸರ್ಕಲ್-ಕೆ.ಇ.ಬಿ. ಸರ್ಕಲ್ -ರೈಲ್ವೇ ನಿಲ್ದಾಣ ರಸ್ತೆ -ಉಷಾ ಸರ್ಕಲ್ ಗೆ ಬಂದು ಸಾರ್ವಜನಿಕರನ್ನು ಇಳಿಸಿದ ನಂತರ ಪಾರ್ಕಿಂಗ್ ಸ್ಥಳ ಗುರುತಿಸಿದ ನೆಹರು ಕ್ರೀಡಾಂಗಣ ಶುವೆಂಪು ರಂಗಮಂದಿರ,ಎನ್.ಇ.ಎಸ್ ಮೈದಾನ ಶೇಷಾದ್ರಿಪುರಂ ಗೂಡ್ಸ್ ಶೆಡ್, ಸೈನ್ಸ್ ಮೈದಾನದಲ್ಲಿ ಪಾರ್ಕಿಂಗ್ ಮಾಡುವುದು.

ಇದನ್ನೂ ಓದಿ- ಈಶ್ವರಪ್ಪ ಮನವೊಲಿಕೆ ಆಗುವ ವಿಶ್ವಾಸವಿದೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ಆಗಮನದ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್: 
ಇನ್ನೂ ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಗಿದೆ. 3 ಜನ ಎಸ್‌ಪಿ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ಕಾರ್ಯಕ್ರಮ ನಡೆಯುವ ಅಲ್ಲಮಪ್ರಭು ಮೈದಾನ ಅಥವಾ ಫ್ರೀಡಂಪಾರ್ಕ್‌ನಲ್ಲಿ  ಸಾವಿರ ಜನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 
ಒಟ್ಟು  3 ಜನ ಎಸ್‌ಪಿ , 5 ಜನ ಎಎಸ್‌ಪಿ  36 ಹಾಗೂ 19 ಜನ ಡಿವೈಎಸ್‌ಪಿ  ಹಾಗೂ  64 ಸಿಪಿಐ 156 ಜನ ಪಿಎಸ್ಐ   ಹಾಗೂ ಒಂದು ಸಾವಿರ ಪೊಲೀಸ್ ಸಿಬ್ಬಂದಿ ಆಯೋಜಿಸಲಾಗಿದೆ ಎಂದು ತಿಳಿದುಬಂದಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News