Lok Sabha Election 2024: "ಕ್ರಿಮಿನಲ್ ಪಕ್ಷದ ಜೊತೆ ಸೇರಿರುವ ಜೆಡಿಎಸ್ ಸೆಕ್ಯುಲರ್ ಎಂಬ ಪದಕ್ಕೆ ಅವಮಾನ ಮಾಡುತ್ತಿದೆ"-ಸಿ.ಎಂ ಸಿದ್ದರಾಮಯ್ಯ

Lok Sabha Election 2024: ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಚುನಾವಣೆ ಎದುರಿಸುತ್ತಿದೆ. ಬಿಜೆಪಿಯವರು 28ಕ್ಕೆ 28 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿಕೊಳ್ಳುತ್ತಿದ್ದು, ಜೆಡಿಎಸ್ ಕೂಡ ಅದಕ್ಕೆ ಧ್ವನಿಗೂಡಿಸುತ್ತಿದೆ.

Written by - Manjunath N | Last Updated : Apr 17, 2024, 09:03 PM IST
  • ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಚುನಾವಣೆ ಎದುರಿಸುತ್ತಿದೆ
  • ಬಿಜೆಪಿಯವರು 28ಕ್ಕೆ 28 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿಕೊಳ್ಳುತ್ತಿದ್ದು, ಜೆಡಿಎಸ್ ಕೂಡ ಅದಕ್ಕೆ ಧ್ವನಿಗೂಡಿಸುತ್ತಿದೆ
  • ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಸೋಲುತ್ತದೆ ಎನ್ನುವ ಭಯದಿಂದ ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದೆ
Lok Sabha Election 2024: "ಕ್ರಿಮಿನಲ್ ಪಕ್ಷದ ಜೊತೆ ಸೇರಿರುವ  ಜೆಡಿಎಸ್ ಸೆಕ್ಯುಲರ್ ಎಂಬ ಪದಕ್ಕೆ ಅವಮಾನ ಮಾಡುತ್ತಿದೆ"-ಸಿ.ಎಂ ಸಿದ್ದರಾಮಯ್ಯ title=

ಕೋಲಾರ : ಕ್ರಿಮಿನಲ್ ಪಕ್ಷದ ಜೊತೆ ಸೇರಿರುವ ಜೆಡಿಎಸ್ ಸೆಕ್ಯುಲರ್ ಎಂಬ ಪದಕ್ಕೆ ಅವಮಾನ ಮಾಡುತ್ತಿದೆ. ದೇವೇಗೌಡರು, ಬಿಜೆಪಿ ಏನೇ ಹೇಳಿದರೂ ಈ ಸಾರಿ ಕರ್ನಾಟಕದ ಜನ ಕಾಂಗ್ರೆಸ್ ಪಕ್ಷದ ಕೈಹಿಡಿಯಲಿದ್ದಾರೆ ಎಂಬ ನಂಬಿಕೆ ಇದೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅವರು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಚೊಕ್ಕಂಡಹಳ್ಳಿ ಗೇಟ್‌ನಲ್ಲಿ ಆಯೋಜಿಸಿದ್ದ "ಪ್ರಜಾಧ್ವನಿ-2" ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಪಕ್ಷದ ಅಭ್ಯರ್ಥಿ ಕೆ.ವಿ. ಗೌತಮ್ ಅವರನ್ನು ಆಶೀರ್ವದಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.ಈ ಲೋಕಸಭಾ ಚುನಾವಣೆ ಬಹಳ ಮಹತ್ತರವಾದ ಚುನಾವಣೆ ಎಂದು ತಾವೆಲ್ಲರೂ ಭಾವಿಸಬೇಕು. ಈ ಚುನಾವಣೆಯ ಮೂಲಕ ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕು. ಇವು ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ವಿನಂತಿಸಿದರು.

ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವಂತೆ ರೈತಸಂಘಟನೆ ಕರಪತ್ರ ಅಭಿಯಾನ

ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಚುನಾವಣೆ ಎದುರಿಸುತ್ತಿದೆ. ಬಿಜೆಪಿಯವರು 28ಕ್ಕೆ 28 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿಕೊಳ್ಳುತ್ತಿದ್ದು, ಜೆಡಿಎಸ್ ಕೂಡ ಅದಕ್ಕೆ ಧ್ವನಿಗೂಡಿಸುತ್ತಿದೆ. ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಸೋಲುತ್ತದೆ ಎನ್ನುವ ಭಯದಿಂದ ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದೆ.ಜೆಡಿಎಸ್ ಕೋಲಾರ, ಮಂಡ್ಯ ಹಾಗೂ ಹಾಸನ ಸೇರಿ ಮೂರು ಸ್ಥಾನಗಳಲ್ಲಿ ಮಾತ್ರ ಸ್ಪರ್ಧಿಸುತ್ತಿದೆ. ಕೋಲಾರದ ಜನ ಕಾಂಗ್ರೆಸ್ ಗೆ ಬೆಂಬಲಿಸುತ್ತಾರೆ ಎಂಬುದಕ್ಕೆ ಇಲ್ಲಿ ಸೇರಿರುವ ಜನಸಾಗವೇ ಸಾಕ್ಷಿ.ನಮ್ಮ ಕಾಂಗ್ರೆಸ್ ಅಭ್ಯರ್ಥಿ ನೂರಕ್ಕೆ ನೂರು ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 20 ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿ ಹಾಗೂ ಜೆಡಿಎಸ್ ಅಪವಿತ್ರ ಮೈತ್ರಿಯನ್ನು ಮಾಡಿಕೊಂಡಿದ್ದಾರೆ. ಹೆಚ್.ಡಿ. ದೇವೇಗೌಡ ಹಾಗೂ ಹೆಚ್ .ಡಿ.ಕುಮಾರಸ್ವಾಮಿಯವರು ಮೊನ್ನೆಯವರೆಗೂ ದ್ವೇಷದ ಪಕ್ಷ, ಕ್ರಿಮಿನಲ್ ಪಕ್ಷ, ಮೋದಿ ಅವರು ಮತ್ತೆ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದಿದ್ದರು. ಈಗ ನರೇಂದ್ರ ಮೋದಿಯವರನ್ನು ಸೇರಿಕೊಂಡಿದ್ದಾರೆ.ಜಾತ್ಯತೀತ ಸಿದ್ಧಾಂತದಲ್ಲಿ ಅವರಿಗಿರುವ ಬದ್ಧತೆ ಇದು ಎಂದು ಅವರು ವ್ಯಂಗವಾಡಿದರು.

ಇದನ್ನೂ ಓದಿ: Lok Sabha Election 2024: ಉಮೇಶ್ ಜಾಧವ್ ವಿರುದ್ಧ ತಿರುಗಿ ಬಿದ್ದ ಕ್ಷೇತ್ರದ ಜನತೆ

ದೇವೇಗೌಡರು ನರೇಂದ್ರ ಮೋದಿಯವರನ್ನು ಬಹಳ ಹೊಗಳುತ್ತಿದ್ದಾರೆ. ಅಲ್ಲದೆ ಚುನಾವಣೆಯಾದ ಮೇಲೆ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎನ್ನುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ 5 ವರ್ಷ ಪೂರ್ಣಾವಧಿ ಮುಗಿಸಿ, ಈಗ ಕೊಟ್ಟಿರುವ ಗ್ಯಾರಂಟಿಗಳನ್ನು ಈಡೇರಿಸಲಿದೆ. ಜನ ಕಾಂಗ್ರೆಸ್ ಪರವಾಗಿದ್ದಾರೆ ಎಂದು ಗೊತ್ತಾಗಿ ಸಹಿಸದೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಇಂಥ ಸುಳ್ಳು ಹೇಳಿದರೆ ಜನ ತಮಗೆ ಮತ ನೀಡುತ್ತಾರೆ ಎಂದುಕೊಂಡಿದ್ದರೆ ಅದು ಅವರ ಭ್ರಮೆ ಎಂದು ಅವರು ಕಿಡಿ ಕಾರಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

 

Trending News